ಮಕ್ಕಳು ತಂದಿಟ್ಟ ಜಗಳಕ್ಕೆ ತಂದೆಯ ಜೀವ ಹೋಯ್ತು; ಹಾಸನದಲ್ಲಿ ಭೀಕರ ಕೊಲೆ!

Published : Aug 30, 2025, 03:09 PM IST
Tragic Murder in Hassan Child Dispute Escalates to Fatal Clash in Arasikere

ಸಾರಾಂಶ

ಹಾಸನದ ಅರಸೀಕೆರೆಯಲ್ಲಿ ಮಕ್ಕಳ ಜಗಳ ತಂದೆ-ತಾಯಿಯರ ನಡುವಿನ ಜಗಳಕ್ಕೆ ತಿರುಗಿ ಒಬ್ಬ ತಂದೆಯನ್ನು ಮತ್ತೊಬ್ಬ ತಂದೆ ಕೊಲೆ ಮಾಡಿದ್ದಾನೆ. ಕೊಲೆಯಾದವರ ಕುಟುಂಬಸ್ಥರು ಆರೋಪಿಯ ಮನೆಗೆ ಬೆಂಕಿ ಹಚ್ಚಿ, ಕಾರನ್ನು ಜಖಂಗೊಳಿಸಿದ್ದಾರೆ. ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

ಹಾಸನ, (ಆ.30): ಇಬ್ಬರ ಮಕ್ಕಳ ನಡುವಿನ ಜಗಳದ ಕಾರಣಕ್ಕೆ ತಂದೆ-ತಾಯಿಯರ ನಡುವೆ ಜಗಳಕ್ಕೆ ಕಾರಣವಾಗಿ ಓರ್ವ ಮಗುವಿನ ತಂದೆಯಿಂದ ಇನ್ನೊರ್ವ ಮಗುವಿನ ತಂದೆಯನ್ನ ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ, ಅರಸೀಕೆರೆ ತಾಲೂಕಿನ ಮುಜವಾರ್ ಮೊಹಲ್ಲಾದಲ್ಲಿ ನಡೆದಿದೆ.

ತೌಫಿಕ್ (28), ದುರ್ಘಟನೆಯಲ್ಲಿ ಕೊಲೆಯಾದ ವ್ಯಕ್ತಿ. ಫರಾನ್ ಕೊಲೆಗೈದ ವ್ಯಕ್ತಿ. ಈ ಘಟನೆಯಿಂದ ತೌಫಿಕ್‌ನ ಕುಟುಂಬಸ್ಥರು ರೊಚ್ಚಿಗೆದ್ದು, ಆರೋಪಿ ಫರಾನ್‌ನ ಮನೆಯ ಮೇಲೆ ದಾಳಿ ನಡೆಸಿ, ಮನೆ ಜಖಂಗೊಳಿಸಿ ಕಾರಿಗೆ ಬೆಂಕಿ ಹಚ್ಚಿದ್ದಾರೆ.

ಇದನ್ನೂ ಓದಿ: 'ತಾಕತ್ ಇದ್ರೆ ಅಜಾನ್ ಬ್ಯಾನ್ ಮಾಡಿ..' ಡಿಜೆ ಅನುಮತಿ ಕೋರಿ ಪ್ರತಿಭಟನೆ, ರೇಣುಕಾಚಾರ್ಯ ವಿರುದ್ಧ FIR

ಪ್ರಕರಣದ ವಿವರ:

ಅರಸೀಕೆರೆ ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ತೌಫಿಕ್ ಹಾಗೂ ಫರಾನ್‌ನ ಮಕ್ಕಳು ಆಗಸ್ಟ್ 25 ರಂದು ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದರು. ಈ ವಿಷಯವೇ ತಂದೆಯರಾದ ತೌಫಿಕ್ ಮತ್ತು ಫರಾನ್ ನಡುವೆ ಗೊಂದಲಕ್ಕೆ ಕಾರಣವಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಅರಸೀಕೆರೆಯ ಬಿಎಚ್ ರಸ್ತೆಯ ಲಸ್ಸಿ ಶಾಪ್‌ನಲ್ಲಿ ಎದುರುಬದರಾದ ಇಬ್ಬರು, ಮಕ್ಕಳ ಜಗಳದ ವಿಷಯವನ್ನು ಮತ್ತೆ ಕೆದಕಿದ್ದಾರೆ. ಈ ವೇಳೆ ಗಲಾಟೆ ತಾರಕಕ್ಕೇರಿದ್ದು, ಫರಾನ್ ತೌಫಿಕ್‌ನನ್ನು ತಳ್ಳಿದ್ದಾನೆ. ಇದರಿಂದ ಮೆಟ್ಟಿಲುಗಳ ಮೇಲೆ ಬಿದ್ದ ತೌಫಿಕ್ ತೀವ್ರವಾಗಿ ಗಾಯಗೊಂಡಿದ್ದರು. ಗಾಯಗೊಂಡ ತೌಫಿಕ್‌ನನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 29 ರ ರಾತ್ರಿ ತೌಫಿಕ್ ಮೃತಪಟ್ಟಿದ್ದಾರೆ.

ಈ ಸಾವಿನಿಂದ ಕುಪಿತಗೊಂಡ ತೌಫಿಕ್‌ನ ಕುಟುಂಬಸ್ಥರು ಮತ್ತು ಸಂಬಂಧಿಕರು ಫರಾನ್‌ನ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಹತ್ತಾರು ಮಂದಿ ಜನರು ಫರಾನ್‌ನ ಮನೆಯನ್ನು ಜಖಂಗೊಳಿಸಿ, ಅವರ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಈ ಘಟನೆಯಿಂದ ಉಂಟಾದ ಉದ್ವಿಗ್ನ ಪರಿಸ್ಥಿತಿಯನ್ನು ತಡೆಗಟ್ಟಲು ಅರಸೀಕೆರೆ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಇದನ್ನೂ ಓದಿ: ಕಿತ್ತೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು, ಪೊಲೀಸ್ ಪೇದೆಗೆ ಚಾಕು ಇರಿದು ಪರಾರಿ ಯತ್ನ, ಆರೋಪಿ ಮೇಲೆ ಫೈರಿಂಗ್!

ಪ್ರಕರಣದ ಕುರಿತು ಅರಸೀಕೆರೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಚಾರಣೆ ಮುಂದುವರಿದಿದೆ. ಈ ಘಟನೆಯಿಂದ ಮುಜವಾರ್ ಮೊಹಲ್ಲಾದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಶಾಂತಿ ಕಾಪಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!