ಮೈಸೂರು: ಬಲೂನ್ ವ್ಯಾಪಾರಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 10 ವರ್ಷದ ಬಾಲಕಿ ಶವ ಪತ್ತೆ! ರೇಪ್ ಅಂಡ್ ಮರ್ಡರ್ ಶಂಕೆ!

Published : Oct 09, 2025, 11:42 AM IST
Tragic Rape and Murder of 10 Year Old Girl Suspected in Mysuru During Dasara

ಸಾರಾಂಶ

ದಸರಾ ಹಬ್ಬದ ವೇಳೆ ಮೈಸೂರಿಗೆ ಬಲೂನ್ ಮಾರಾಟ ಮಾಡಲು ಗುಲ್ಬರ್ಗಾದಿಂದ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 10 ವರ್ಷದ ಬಾಲಕಿಯೊಬ್ಬಳು ಕಾಣೆಯಾಗಿದ್ದಳು. ನಂತರ ಆಕೆಯ ಶವವು ಜೋಪಡಿಯ ಸಮೀಪದ ಗುಂಡಿಯಲ್ಲಿ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅತ್ಯಾ೧ಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. 

ಮೈಸೂರು (ಅ.9): ದಸರಾ ಹಬ್ಬದ ಸಂಭ್ರಮದ ನಡುವೆ ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೈಶಾಚಿಕ ಕೃತ್ಯವೊಂದು ನಡೆದುಹೋಗಿದೆ. ಬಲೂನ್ ವ್ಯಾಪಾರಕ್ಕೆ ಬಂದಿದ್ದ ಬಡಕುಟುಂಬವೊಂದರ 10 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾ೧ಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಘಟನೆಯಿಂದಾಗಿ ಮೈಸೂರು ಬೆಚ್ಚಿಬಬಿದ್ದಿದೆ.

ಗುಲ್ಬರ್ಗಾದಿಂದ ಬಲೂನ್ ವ್ಯಾಪಾರಕ್ಕೆ ಬಂದಿದ್ದ ಕುಟುಂಬ:

ಗುಲ್ಬರ್ಗದಿಂದ ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ತಂಗಿದ್ದವು. ಚಾಮುಂಡಿ ಬೆಟ್ಟ, ವಸ್ತು ಪ್ರದರ್ಶನ, ಬನ್ನಿ ಮಂಟಪ, ದೇವರಾಜ ಮಾರುಕಟ್ಟೆ ಸೇರಿದಂತೆ ಹಲವು ಸ್ಥಳಗಳಲ್ಲಿ ಇವರು ವ್ಯಾಪಾರ ಮಾಡುತ್ತಿದ್ದರು. ಈ ಪೈಕಿ ಒಂದು ಕುಟುಂಬಕ್ಕೆ ಸೇರಿದ 10 ವರ್ಷದ ಬಾಲಕಿಯೊಬ್ಬಳು ರಾತ್ರಿ ವೇಳೆ ಕಾಣೆಯಾಗಿದ್ದಾಳೆ. ನಿನ್ನೆ ರಾತ್ರಿ 12 ಗಂಟೆಯವರೆಗೆ ವ್ಯಾಪಾರ ಮಾಡಿಕೊಂಡು ಬಂದಿದ್ದ ಕುಟುಂಬ, ಒಟ್ಟಿಗೆ ಎಂಟು ಜನ ಮಲಗಿದ್ದರು. ಮುಂಜಾನೆ 4 ಗಂಟೆ ಸುಮಾರಿಗೆ ಮಳೆ ಬಂದಿದೆ. ಆಗ ಎಚ್ಚರಗೊಂಡಾಗ ಬಾಲಕಿಯು ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಕೂಡಲೇ ಕುಟುಂಬಸ್ಥರು ಮಳೆಯಲ್ಲೇ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಬಳಿಕ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ದೂರು ದಾಖಲಿಸಿದ್ದರು.

ನಗ್ನ ಸ್ಥಿತಿಯಲ್ಲಿ ಬಾಲಕಿ ಶವ ಪತ್ತೆ:

ಬೆಳಗ್ಗೆ 6:30ರ ಸುಮಾರಿಗೆ ಜೋಪಡಿಯ ಪಕ್ಕದ ಗುಂಡಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಶವದ ಮೇಲೆ ಸರಿಯಾಗಿ ಬಟ್ಟೆಯಿರಲಿಲ್ಲ, ಇದರಿಂದ ಕುಟುಂಬಸ್ಥರು ಅತ್ಯಾ೧ಚಾರ ಮತ್ತು ಕೊಲೆಯ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ನಡೆದ ಕೇವಲ ಎರಡು ದಿನಗಳ ಹಿಂದೆ, ಇದೇ ಸ್ಥಳದ ಮತ್ತೊಂದು ಬದಿಯಲ್ಲಿ ಒಬ್ಬ ವ್ಯಕ್ತಿಯ ಬರ್ಬರ ಹತ್ಯೆ ನಡೆದಿತ್ತು. ಒಟ್ಟಾರೆ ಎರಡು ದಿನಗಳ ಅಂತರದಲ್ಲಿ ಒಂದೇ ಸ್ಥಳದಲ್ಲಿ ಎರಡು ಕೊಲೆ ಘಟನೆಗಳು ನಡೆದಿರುವುದು ಆಘಾತಕಾರಿಯಾಗಿದೆ.

ಪ್ರಸ್ತುತ, ನಜರ್‌ಬಾದ್ ಪೊಲೀಸರು ಸುಮಾರು 50 ಕುಟುಂಬಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ಚುರುಕುಗೊಂಡಿದೆ. ಈ ಘಟನೆಯಿಂದ ದಸರಾ ಸಂಭ್ರಮದ ನಡುವೆಯೇ ಸ್ಥಳೀಯರಲ್ಲಿ ಭಯ ಮತ್ತು ಆತಂಕ ಮನೆಮಾಡಿದೆ.

ತನಿಖೆಯಲ್ಲಿ ಯಾವುದೇ ಶಂಕಿತರನ್ನು ಗುರುತಿಸಲಾಗಿಲ್ಲವಾದರೂ, ಶೀಘ್ರವೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ