
ಹಾವೇರಿ (ಜು.3) : ಡಿಪೋ ಆವರಣದಲ್ಲೇ ಸಾರಿಗೆ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಜಿಲ್ಲೆಯ ರಾಣೆಬೇನ್ನೂರು ನಗರ ಹೊರ ಹೊಲಯದಲ್ಲಿರುವ NWKRTC ಬಸ್ ಡಿಪೋದಲ್ಲಿ ನಡೆದಿದೆ.
ಮಲ್ಲಿಕಾರ್ಜುನ ಶಾಮಣ್ಣ ಬಡಿಗೇರ (49)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ರಾಣೆಬೇನ್ನೂರು ಬಸ್ ಡಿಪೋದಲ್ಲಿ ನಿರ್ವಾಹಕ ಹಾಗೂ ಚಾಲಕರಾಗಿ ಕೆಲಸ ಮಾಡ್ತಾ ಇದ್ರು. ಮೂಲತಃ ಇವರು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ದಾವಳಗಿ ಗ್ರಾಮದವರು ಎನ್ನಲಾಗಿದೆ. ಆತ್ಮಹ್ಯತ್ಯೆಗೆ ಕಾರಣ ತಿಳಿದುಬಂದಿಲ್ಲ.
ಆತ್ಮಹತ್ಯೆ ಕಾರಣ ತಿಳಿದುಬಂದಿಲ್ಲ
ಮದುವೆಗೆ ಜಾತಿ ಅಡ್ಡಿ; ದೈಹಿಕ ಸಂಬಂಧ ಬೆಳೆಸಿ ಮೋಸ ಹೋದ ಯುವತಿ ನೇಣಿಗೆ ಶರಣು!
ಆಂಬುಲೆನ್ಸ್ ಡಿಕ್ಕಿ: ಪಾದಚಾರಿ ಸಾವು
ಉಳ್ಳಾಲ: ಆಂಬುಲೆನ್ಸ್ ವಾಹನ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಘಟನೆ ತಲಪಾಡಿ ಮರೋಳಿ ಬಾರ್ ಎದುರುಗಡೆ ನಡೆದಿದೆ.
ಕಾಸರಗೋಡು ಮಂಗಲ್ಪಾಡಿ ಹೇರೂರು ನಿವಾಸಿ ಫ್ರಾನ್ಸಿಸ್ ಡಿಸೋಜ (62) ಮೃತರು. ಮನೆಯಿಂದ ತಲಪಾಡಿಗೆ ಬಂದಿದ್ದ ಫ್ರಾನ್ಸಿಸ್, ಮರೋಳಿ ಬಾರ್ ಎದುರುಗಡೆಯಿಂದ ವಾಪಸ್ ಮನೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿಯನ್ನು ದಾಟುವ ಸಂದರ್ಭ ಕೇರಳದಿಂದ ಮಂಗಳೂರು ಕಡೆಗೆ ಅಮಿತ ವೇಗದಲ್ಲಿ ಬರುತ್ತಿದ್ದ ಖಾಲಿ ಆಂಬ್ಯುಲೆನ್ಸ್ ಫ್ರಾನ್ಸಿಸ್ ಅವರಿಗೆ ಡಿಕ್ಕಿ ಹೊಡೆದಿದೆ.
ಹಾವೇರಿ: ಸಾಲಭಾದೆಯಿಂದ ಮನನೊಂದು ರೈತ ಆತ್ಮಹತ್ಯೆ!
ಡಿಕ್ಕಿಯ ರಭಸಕ್ಕೆ ಫ್ರಾನ್ಸಿಸ್ ದೂರ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಕ್ಷಣ ಆಂಬ್ಯುಲೆನ್ಸ್ ಚಾಲಕ ಅದೇ ಆಂಬ್ಯುಲೆನ್ಸ್ ಮೂಲಕ ಫ್ರಾನ್ಸಿಸ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆತಂದಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ