
ಮಧ್ಯಪ್ರದೇಶ (ಅ. 27): ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮಂಜೂರಾಗಿದ್ದ ಮನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ನೆಲಸಮಗೊಳಿಸಿದ್ದಕ್ಕಾಗಿ ಬುಡಕಟ್ಟು ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆ ಧ್ಯಾನ್ ಸಿಂಗ್ (45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿಎಂಎವೈ ಅಡಿಯಲ್ಲಿ ನಿರ್ಮಿಸಲಾಗುತ್ತಿದ್ದ ಅವರ ಮನೆಯನ್ನು ಅಧಿಕಾರಿಗಳು ನೆಲಸಮಗೊಳಿಸಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದ ಸ್ಥಳೀಯರು ಸೇರಿದಂತೆ ಮೃತರ ಸಂಬಂಧಿಕರು ಆರೋಪಿಸಿದ್ದಾರೆ. ಆದರೆ ಇತ್ತ ವ್ಯಕ್ತಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾನೆ ಎಂದು ವಿಭಾಗೀಯ ಅರಣ್ಯಾಧಿಕಾರಿ (DFO) ತಿಳಿಸಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆ ಅತಿಕ್ರಮಣವನ್ನು ತೆಗೆದುಹಾಕಲಾಗಿತ್ತು ಮತ್ತು ಈ ಸಂಬಂಧ ವ್ಯಕ್ತಿಗೆ ನೋಟಿಸ್ ಸಹ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಪಿಎಂಎವೈ ಅಡಿಯಲ್ಲಿ ಮಂಜೂರಾದ ಮನೆಯ ನಿರ್ಮಾಣ ಹಂತದಲಿದ್ದು, ಅರಣ್ಯ ಇಲಾಖೆ ನೆಲಸಮಗೊಳಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸ್ಥಳೀಯ ಆಡಳಿತ ಅಧಿಕಾರಿಗಳು ಮನವೊಲಿಸಿದ ನಂತರ ಗ್ರಾಮಸ್ಥರು ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಹೆಂಡತಿ ಚಿತ್ರ ಸೆರೆಹಿಡಿದ ಗಂಡ, ತಡೆಯಲೂ ಇಲ್ಲ: ಹೆಂಡತಿ ಸಾವು
ಮುನ್ಸೂಚನೆ ನೀಡದೆ ಮನೆ ನೆಲಸಮ?: ಅರಣ್ಯ ಇಲಾಖೆ ಕಿರುಕುಳಕ್ಕೆ ಒಳಗಾಗಿ ತಮ್ಮ ತಂದೆ ಈ ಕೃತ್ಯ ಎಸಗಿದ್ದಾರೆ ಎಂದು ಮೃತನ ಮಗ ರಾಜು ಧ್ಯಾನ್ ಸಿಂಗ್ ಆರೋಪಿಸಿದ್ದಾರೆ. ಅರಣ್ಯ ಇಲಾಖೆಯು ಪಿಎಂಎವೈ ಅಡಿಯಲ್ಲಿ ಮಂಜೂರಾದ ತಮ್ಮ ಮನೆಯನ್ನು ಯಾವುದೇ ಮುನ್ಸೂಚನೆ ನೀಡದೆ ನೆಲಸಮಗೊಳಿಸಿದೆ ಅಲ್ಲದೇ ತನ್ನ ಪೋಷಕರಿಗೆ ಅಧಿಕಾರಿಗಳು ಥಳಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಖಾರ್ಗೊನೆ ಜಿಲ್ಲಾಧಿಕಾರಿ ಈ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ.
ಜಿಲ್ಲಾಧಿಕಾರಿಯವರು ಜಿಲ್ಲಾ ರೆಡ್ ಕ್ರಾಸ್ ನಿಧಿಯಿಂದ ಮೃತರ ಕುಟುಂಬಕ್ಕೆ ತಕ್ಷಣದ 25,000 ರೂಪಾಯಿ ಧನಸಹಾಯವನ್ನು ಮಂಜೂರು ಮಾಡಿದ್ದಾರೆ ಮತ್ತು ನಿಯಮಾನುಸಾರ ಇತರ ಸಹಾಯವನ್ನು ಒದಗಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದಲ್ಲದೆ, ಎಲ್ಲಾ ಅಂಶಗಳನ್ನು ಪರಿಗಣಿಸಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಖಾರ್ಗೋನ್‌ನ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ