
ಬೆಂಗಳೂರು (ಜು. 25): ಡಾಂಬರ್ ಕೆಲಸ ಮಾಡುತ್ತಿದ್ದ ವೇಳೆ ಟಿಪ್ಪರ್ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಬಾಶೆಟ್ಟಿಹಳ್ಳಿ ಮೇಲ್ಸೇತುವೆ ಡಾಂಬರೀಕರಣ ಮಾಡುವ ವೇಳೆ ಘಟನೆ ನಡೆದಿದೆ. ದೊಡ್ಡಬಳ್ಳಾಪುರದಿಂದ ಯಲಹಂಕಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕೆಲಸದ ವೇಳೆ ಡೀಸೆಲ್ ಟ್ಯಾಂಕಿಗೆ ಬೆಂಕಿ ತಗುಲಿ ಅನಾಹುತ ಸಂಭವಿಸಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಲಾರಿಯಿಂದ ಚಾಲಕ ಜಿಗಿದಿದ್ದಾರೆ. ಬಳಿಕ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿದ್ದು ಲಾರಿಗೆ ತಗುಲಿದ್ದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಘಟನೆ ನಡೆದಿದೆ.
ಸೇತುವೆ ಮೇಲೆ ಚಲಿಸುತ್ತಿದ್ದ ರೈಲಿಗೆ ಬೆಂಕಿ: ಉತ್ತರಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಯಿಂದ ಅರಬ್ಬಿ ಸಮುದ್ರ ಮಾರ್ಗವಾಗಿ ಮುಂಬೈ ಕಡೆ ತೆರಳುತ್ತಿದ್ದ ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಯುದ್ಧ ನೌಕೆಯಲ್ಲಿರುವ ಅಗ್ನಿನಿರೋಧಕ ವಸ್ತುಗಳನ್ನು ಬಳಸಿ ನೌಕಾ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಕ್ಯಾಪ್ಟನ್ ಸುಶೀಲ್ ಮೆನನ್ ವಿಕ್ರಮಾದಿತ್ಯದ ಕಮಾಂಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಕೆಲವು ತಿಂಗಳಿನಿಂದ ಕಾರವಾರದ ಕದಂಬ ನೌಕಾನೆಲೆಯಲ್ಲಿ ಹಡಗಿನ ದುರಸ್ತಿ ಕಾರ್ಯ ಸಹ ನಡೆಸಲಾಗಿತ್ತು
ಸೇತುವೆ ಮೇಲೆ ಚಲಿಸುತ್ತಿದ್ದ ರೈಲಿಗೆ ಬೆಂಕಿ: ಜೀವ ಉಳಿಸಿಕೊಳ್ಳಲು ನದಿ ಹಾರಿದ ಪ್ರಯಾಣಿಕರು
ಇದಾದ ಬಳಿಕ ನಿನ್ನೆ ಕಾರವಾರದ ಕದಂಬ ನೌಕಾನೆಲೆಯಿಂದ ಮುಂಬೈಗೆ ಹೋಗುವ ಮಾರ್ಗದ ಆಳ ಸಮುದ್ರದಲ್ಲಿ ಪ್ರಾಯೋಗಿಕ ಕಾರ್ಯಾಚರಣೆ ವೇಳೆ ಯುದ್ಧನೌಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಹಡಗಿನಲ್ಲಿದ್ದ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದು, ಕ್ಷಿಪ್ರ ಕಾರ್ಯಾಚರಣೆ ಮೂಲಕ ಬೆಂಕಿ ನಂದಿಸಲಾಗಿದೆ.
ಈ ಹಿಂದೆ ಯುದ್ಧನೌಕೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಿಬ್ಬಂದಿ ಸಾವಿಗೀಡಾಗಿದ್ದರು. ಈ ಪ್ರಕರಣದ ಮೂರು ವರ್ಷದ ಬಳಿಕ ಇದೀಗ ಮತ್ತೆ ಯುದ್ಧನೌಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ