
ಹೈದರಾಬಾದ್: ಆರು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದು ಕೊಲೆ ಮಾಡಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯಲ್ಲಿ ನಡೆದಿದೆ. ಕಾಮುಕ ಉತ್ತರ ಪ್ರದೇಶ ಮೂಲದವನಾಗಿದ್ದು, ಟ್ರಕ್ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದನು. ಕಾಮುಕ ಮಲಗಿದ್ದ ಬಾಲಕಿಯನ್ನು ಹೆಗಲ ಮೇಲೆ ಹೊತ್ತುಯ್ಯುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾತ್ರಿ ಸುಮಾರು 11 ಗಂಟೆಗೆ ಈ ಘಟನೆ ನಡೆದಿದೆ.
ಆರೋಪಿಯನ್ನು ಬಲರಾಮ್ ಎಂದು ಗುರುತಿಸಲಾಗಿದೆ. ಸ್ಥಳೀಯರು ಆರೋಪಿಯನ್ನು ಹಿಡಿದು ಸ್ಥಳೀಯ ಪೊಲೀಸರ ವಶಕ್ಕೆ ನೀಡಿದ್ದಾರೆ. ತಾಯಿ ಜೊತೆ ಮಲಗಿದ್ದ ಮಗುವನ್ನು ಉಪಾಯವಾಗಿ ಆರೋಪಿ ಎತ್ತಿಕೊಂಡು ಹೋಗಿದ್ದಾನೆ. ರಾತ್ರಿ ಆರೋಪಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗುತ್ತಿರೋದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿರ್ಜನ ಪ್ರದೇಶಕ್ಕೆ ತೆರಳಿದ ಬಳಿಕ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ ಮಾಡಿದ್ದಾನೆ.
Hassan Rape: 13 ವರ್ಷದ ಅಪ್ರಾಪ್ತೆ ಮೇಲೆ ಅತ್ಯಚಾರವೆಸಗಿದ 73 ವರ್ಷದ ವೃದ್ಧ, ಗರ್ಭಿಣಿಯಾದ ಬಾಲಕಿ
ಆರೋಪಿಯನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ ಸ್ಥಳೀಯರು
ಮಗುವಿನ ತಾಯಿ ರೈಸ್ ಮಿಲ್‌ನಲ್ಲಿ ಕಾರ್ಮಿಕರಾಗಿ ಕೆಲಸ ಮಾಡಿಕೊಂಡಿದ್ದು, ಹೊರಗಡೆ ಮಗಳ ಜೊತೆ ಮಲಗಿದ್ದರು. ಮಧ್ಯರಾತ್ರಿ ತಾಯಿಗೆ ಎಚ್ಚರವಾದಾಗ ಮಗಳು ಕಾಣಿಸಿದಿದ್ದಾಗ ಸುತ್ತಲೂ ಹುಡುಕಾಡಿದ್ದಾರೆ. ಮಗಳು ಸಿಗದಿದ್ದಾಗ ಅಲ್ಲೇ ಮಲಗಿದ್ದ ಕಾರ್ಮಿಕರನ್ನು ಮಹಿಳೆ ಎಚ್ಚರಗೊಳಿಸಿದ್ದಾರೆ. ಕಾರ್ಮಿಕರೆಲ್ಲರೂ ಹುಡುಕಾಡಿದಾಗ ನಿರ್ಜನ ಪ್ರದೇಶದ ಪೊದೆಯಲ್ಲಿ ಬಾಲಕಿ ಶವ ಪತ್ತೆಯಾಗಿದೆ. ಕೂಡಲೇ ಕಾರ್ಮಿಕರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಅಪ್ರಾಪ್ತೆ ಬಾಲಕಿ ಮದ್ವೆಯಾಗಿ ಗರ್ಭಿಣಿ ಮಾಡಿದ ಯುವಕ, ಪೋಕ್ಸೊ ಕೇಸ್‌ಗೆ ಹೆದರಿ ಆತ್ಮಹತ್ಯೆಗೆ ಶರಣಾದ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ