
ಶ್ರೀನಿವಾಸಪುರ(ಆ.24): ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿಯಲ್ಲಿನ ಖಾಸಗಿ ಪಿಯು ಕಾಲೇಜಿನಲ್ಲಿ ಕಳ್ಳರು ಕೈಚಳಕ ತೊರಿಸಿದ್ದು ಕಾಲೇಜಿನ ಕಚೇರಿ ಬೀಗ ಮುರಿದು ಯುಪಿಎಸ್, ಬ್ಯಾಟರಿ, ಟೀವಿ, ವಾಟರ್ ಮೋಟಾರ್ ಸೇರಿದಂತೆ ಕೆಲವು ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ.
ಶತಶೃಂಗ ಪಿಯು ಕಾಲೇಜಿನಲ್ಲಿ ತರಗತಿ ಆರಂಭಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ಸಿದ್ಧತೆ ಮಾಡಿಕೊಂಡಿದ್ದು, ಕಾಲೇಜು ಆಡಳಿತ ಮಂಡಳಿ ಸೋಮವಾರ ಬೆಳಿಗ್ಗೆ ಕಾಲೇಜು ಬಾಗಿಲು ತೆರೆದಾಗ ಉಪಕರಣಗಳು, ವಸ್ತುಗಳು ಕಳ್ಳತನವಾಗಿರುವುದು ಗೊತ್ತಾಗಿದೆ.
ಬಾಗಲಕೋಟೆ: ಎಂಟು ಜನ ಅಂತಾರಾಜ್ಯ ಕಳ್ಳರ ಬಂಧನ
ಸ್ಥಳಕ್ಕೆ ಗೌನಿಪಲ್ಲಿ ಪೊಲೀಸ್ ಎ.ಎಸ್.ಐ ಚಂದ್ರಪ್ಪ ಭೇಟಿ ನೀಡಿ ಪರಿಶೀಲಿಸಿದರು. ಆದರೆ ಸಂಜೆಯವರಿಗೂ ಆಡಳಿತ ಮಂಡಳಿ ಪೊಲೀಸ್ ಠಾಣೆ ದೂರು ದಾಖಲಿಸಿರಲಿಲ್ಲ. ಇಂತಹುದೆ ಪ್ರಕರಣ ಕಳೆದ ತಿಂಗಳು ಗೌವನಿಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬೈರಗಾನಪಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲೂ ನಡೆದ್ದು ಅಲ್ಲಿ ಕೈಚಳಕ ತೊರಿಸಿದ ಕಳ್ಳರೇ ಇಲ್ಲಿಯೂ ಕೃತ್ಯ ಎಸಗಿರಬಹುದು ಎಂದು ಪೋಲಿಸರು ಶಂಕಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ