ನೇಣು ಬಿಗಿದ ಸ್ಥಿತಿಯಲ್ಲಿ ಯೂಟ್ಯೂಬರ್ ಶವಪತ್ತೆ; ಆತ್ಮಹತ್ಯೆಗೆ ಮುನ್ನ ಫೇಸ್‌ಬುಕ್‌ ಲೈವ್‌ನಲ್ಲಿ ಹೇಳಿದ್ದೇನು?

Published : Jul 20, 2024, 11:06 AM ISTUpdated : Jul 20, 2024, 11:43 AM IST
ನೇಣು ಬಿಗಿದ ಸ್ಥಿತಿಯಲ್ಲಿ ಯೂಟ್ಯೂಬರ್ ಶವಪತ್ತೆ; ಆತ್ಮಹತ್ಯೆಗೆ ಮುನ್ನ ಫೇಸ್‌ಬುಕ್‌ ಲೈವ್‌ನಲ್ಲಿ ಹೇಳಿದ್ದೇನು?

ಸಾರಾಂಶ

ನೆಲಮಂಗಲ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸೋಲದೇವನಹಳ್ಳಿ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯೂಟ್ಯೂಬರ್‌ ಶವ ಪತ್ತೆಯಾಗಿದೆ.

ದಾಬಸ್‌ಪೇಟೆ (ಜು.20): ನೆಲಮಂಗಲ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸೋಲದೇವನಹಳ್ಳಿ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯೂಟ್ಯೂಬರ್‌ ಶವ ಪತ್ತೆಯಾಗಿದೆ.

ಬೆಂಗಳೂರು ನಗರ ಜಿಲ್ಲೆ ದಾಸರಹಳ್ಳಿಯ ಮಂಜುನಾಥ(youtuber dasarahalli manjunath) ನಗರದ ನಿವಾಸಿ ಮಂಜುನಾಥ್(38) ಆತ್ಮಹತ್ಯೆ ಮಾಡಿಕೊಂಡವರು. ಈತ ಬೆಂಗಳೂರಿನ ಬಾಗಲುಗುಂಟೆಯಲ್ಲಿ ಟಿವಿ11 ಎಂಬ ಯೂಟ್ಯೂಬ್(TV11 youtube) ಚಾನಲ್ ನಡೆಸುತ್ತಿದ್ದ. ಗುರುವಾರ ಮಧ್ಯರಾತ್ರಿ ಫೇಸ್‌ಬುಕ್ ಲೈವ್‌(Facebook Live)ಗೆ ಬಂದು, ಚಕ್ರಬಡ್ಡಿ ವ್ಯವಹಾರ ಮಾಡುತ್ತಿರುವ ಪೊಲೀಸರು, ನನಗೆ ಮತ್ತು ಯೂಟ್ಯೂಬ್‌ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ನಾನು ಪೊಲೀಸರ ಬಗ್ಗೆ ಮಾತನಾಡಿದ್ದೇನೆಂದು ನನ್ನ ಮೇಲೆ ಎಫ್ ಐಆರ್ ಮಾಡಬೇಡಿ ಎಂದು ಲೈವ್ ಕೊನೆಗೊಳಿಸಿದ್ದನೆನ್ನಲಾಗಿದೆ.

ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ!

ಮರುದಿನ ಬೆಳಗ್ಗೆ ಮಂಜುನಾಥ್ ಮೃತದೇಹ ಸೋಲದೇವನಹಳ್ಳಿ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದೇನೆ, ಕ್ಷಮಿಸಿ ಬಿಡಿ ಎಂಬುದಾಗಿ ಬರೆದಿರುವ ಡೆತ್‌ನೋಟ್ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು