'ಮ್ಯಾನೇಜರ್‌ ಹೆಸರು ಬರೆದುಸಾಯಿ..' ಧಾರವಾಡ ರೈತನ ಸಾವಿಗೆ ಬಿಗ್ ಟ್ವಿಸ್ಟ್, ಏನಿದು ಪ್ರಕರಣ?

Kannadaprabha News, Ravi Janekal |   | Kannada Prabha
Published : Oct 26, 2025, 07:24 AM IST
Dharwad TVS finance loan harassment case

ಸಾರಾಂಶ

Dharwad TVS finance loan harassment: ಧಾರವಾಡ ತಾಲೂಕಿನ ಯುವ ರೈತ ಮಲ್ಲಿಕಾರ್ಜುನ ಶಿರಗುಪ್ಪಿ ಆತ್ಮ೧ಹತ್ಯೆ ಕೇಸ್‌ಗೆ ಹೊಸ ತಿರುವು ಸಿಕ್ಕಿದೆ. ಸ್ಕೂಟಿ ಸಾಲದ ಕಂತು ಕಟ್ಟದ್ದಕ್ಕೆ ಟಿವಿಎಸ್ ಕ್ರೆಡಿಟ್ ಫೈನಾನ್ಸ್ ಸಿಬ್ಬಂದಿ ನೀಡಿದ ಕಿರುಕುಳ ಹಾಗೂ ಪ್ರಚೋದನೆಯೇ ಸಾವಿಗೆ ಕಾರಣ ಎಂದು ತನಿಖೆಯಿಂದ ಬಯಲು. 

ಧಾರವಾಡ (ಅ.26): ಇತ್ತೀಚೆಗೆ ಆತ್ಮ೧ಹತ್ಯೆ ಮಾಡಿಕೊಂಡಿದ್ದ ಯುವ ರೈತ ಫೈನಾನ್ಸ್‌ ಕಂಪನಿಯೊಂದರ ಸಿಬ್ಬಂದಿಯ ಕಿರುಕುಳ ಹಾಗೂ ಪ್ರಚೋದನೆಯಿಂದ ಆತ್ಮ೧ಹತ್ಯೆ ಮಾಡಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕಂತಿನ ಮೇಲೆ ಖರೀಸಿದ್ದ ಸ್ಕೂಟಿ ಸಾಲ ಕಟ್ಟಲು ಆಗದಿದ್ದರೆ ಮ್ಯಾನೇಜರ್‌ ಹೆಸರು ಬರೆದಿಟ್ಟು ಸಾಯಿ ಎಂದು ಫೈನಾನ್ಸ್‌ ಕಂಪನಿ ನೌಕರರು ಹೇಳಿದ್ದ ಸಂಗತಿ ಮೃತನ ಮೊಬೈಲ್‌ನಲ್ಲಿ ಪತ್ತೆ ಆಗಿದೆ.

ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ರೈತ ಸಾವು:

ಮಲ್ಲಿಕಾರ್ಜುನ ಶಿರಗುಪ್ಪಿ (33) ಸೆ.30ರಂದು ತಾಲೂಕಿನ ಹೆಬ್ಬಳ್ಳಿಯ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದ. ಪ್ರಾಥಮಿಕ ತನಿಖೆಯಲ್ಲಿ ಬ್ಯಾಂಕ್‌ ಸಾಲ, ಕೈಗಡ ಸಾಲದಿಂದ ಬೇಸತ್ತು ರೈತ ಆತ್ಮ೧ಹತ್ಯೆ ಎಂದು ಪರಿಗಣಿಸಲಾಗಿತ್ತು. ಆದರೆ, ನೈಜ ಕಾರಣ ಫೈನಾನ್ಸ್‌ ಕಂಪನಿಯೊಂದರ ಸಿಬ್ಬಂದಿ ಕಿರುಕುಳ ಎಂಬುದು ತನಿಖೆಯ ನಂತರ ಬಯಲಾಗಿದ್ದು, ಟಿವಿಎಸ್‌ ಕ್ರೆಡಿಟ್‌ ಫೈನಾನ್ಸ್‌ನ ಗುರು ಉರುಫ್‌ ವೀರು ಹಿರೇಮಠ ಹಾಗೂ ಬಸವರಾಜ ವಿರುದ್ಧ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಏನಿದು ಪ್ರಕರಣ:

ಮಲ್ಲಿಕಾರ್ಜುನ, ಟಿವಿಎಸ್‌ ಕ್ರೆಡಿಟ್‌ ಫೈನಾನ್ಸ್‌ನಿಂದ ಸ್ಕೂಟಿ ಖರೀದಿಸಿದ್ದ. ಇದರ ಕಂತು ಕಟ್ಟುವಂತೆ ಫೈನಾನ್ಸ್ ಸಿಬ್ಬಂದಿ ಒತ್ತಡ ಹೇರುತ್ತಿದ್ದರು. ಅನಾರೋಗ್ಯದಿಂದ ಕಂತು ಕಟ್ಟಿರಲಿಲ್ಲ. ನೇಣು ಹಾಕಿಕೊಳ್ಳುವುದಾದರೆ ನಮ್ಮ ಮ್ಯಾನೇಜರ್ ಹೆಸರು ಬರೆದಿಟ್ಟು ಸಾಯಿರಿ ಎಂದು ಪ್ರಚೋದನೆ ನೀಡಿದ್ದರು ಎಂಬ ಸಂಗತಿ ಮಲ್ಲಿಕಾರ್ಜುನ ಮೊಬೈಲ್‌ ಮೂಲಕ ಕುಟುಂಬಸ್ಥರಿಗೆ ಗೊತ್ತಾಗಿದೆ.

ಕುಟುಂಬದ ಸದಸ್ಯರು ಶುಕ್ರವಾರ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಹಾಗೂ ₹25 ಲಕ್ಷ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ