
ರಾಯಚೂರು (ಮಾ.21): ಹೋಟೆಲ್‌ವೊಂದರಲ್ಲಿ ಚಿಕನ್ ಬಿರಿಯಾನಿ ತಿಂದ ಇಬ್ಬರು ವ್ಯಕ್ತಿಗಳು ಮಾಲೀಕನಿಗೆ ಮಕ್ಕಳಾಡುವ (ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ) ₹500ರ ನಕಲಿ ನೋಟ್ ಕೊಟ್ಟು ಬಿಲ್ ಪಾವತಿಸಿ ವಂಚಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಂಜುನಾಥ ಹಾಗೂ ರಮೇಶ್ ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳು ನಗರದ ಬಿರಿಯಾನಿ ಹೋಟೆಲ್‌ನಲ್ಲಿ ಚಿಕನ್ ಬಿರಿಯಾನಿ ತಿಂದು ‘ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಎಂದು ನಮೂದಿಸಿದ್ದ ₹500ರ ನಕಲಿ ನೋಟನ್ನು ನೀಡಿ ಬಿಲ್ ಪಾವತಿಸಿದ್ದಾರೆ. ಇದಾದ ಸ್ವಲ್ಪ ಹೊತ್ತಿನ ಬಳಿಕ ಹೋಟೆಲ್ ಮಾಲೀಕನಿಗೆ ಅನುಮಾನ ಬಂದು ನೋಟನ್ನು ಪರಿಶೀಲನೆ ನಡೆಸಿದಾಗ ನೋಟು ನಕಲಿಯದ್ದು ಎಂಬುದು ಬಯಲಾಗಿದೆ. ಈ ಸಂಬಂಧ ಹೋಟೆಲ್ ಮಾಲೀಕ ನೀಡಿದ ದೂರಿನ ಮೇರೆಗೆ ಮಾರ್ಕೆಟ್ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಕಲಿ ನೋಟು ಕೊಟ್ಟು ಬಿರಿಯಾನಿ ತಿಂದಿದ್ದ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ: Karnataka Heatwave news: ರಾಯಚೂರಿನಲ್ಲಿ ಮತ್ತೆ ದಾಖಲೆಯ ತಾಪಮಾನ, ರಾಜ್ಯದಲ್ಲೇ ಅತಿ ಹೆಚ್ಚು!
ಇತ್ತೀಚೆಗೆ ರಾಯಚೂರು ಜಿಲ್ಲೆಯಲ್ಲಿ ಖೋಟಾ ನೋಟು ಜಾಲ ಪತ್ತೆಯಾದ ಬೆನ್ನಲ್ಲೇ ಮತ್ತೊಂದು ನಕಲಿ ನೋಟಿನ ಪ್ರಕರಣ ಜರುಗಿರುವುದು ವ್ಯಾಪಾರಸ್ಥರು, ಜನರಲ್ಲಿ ಆತಂಕ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ