Crime News: ಪೊಲೀಸರ ಮೇಲೆ ಹಲ್ಲೆ ಮಾಡಿದವರು ಅರೆಸ್ಟ್, ಅನುಮಾನಗಳಿಗೆ ಕಾರಣವಾಯ್ತು ಕೇಸ್

By Suvarna NewsFirst Published Dec 7, 2021, 11:09 PM IST
Highlights

* ಪೊಲೀಸರಿಗೆ ಹಿಗ್ಗಾ ಮುಗ್ಗಾ ಥಳಿತ ವಿಡಿಯೋ ವೈರಲ್
* ಆರೋಪಿಗಳನ್ನ ಅರೆಸ್ಟ್ ಮಾಡಿದ ಪೊಲೀಸರು
* ಮಾಸ್ಕ್ ಹಾಕದಿರುವುದನ್ನು ಪ್ರಶ್ನಿಸಿದಕ್ಕೆ ಪೊಲೀಸರ ಮೇಲೆ ಹಲ್ಲೆಆಗಿತ್ತಾ?

ಬೆಂಗಳೂರು, (ಡಿ. 07): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluur) ಪೊಲೀಸರ (Police) ಮೇಲೆಯೇ ಪುಂಡರ ಗುಂಪು ಗೂಂಡಾಗಿರಿ ಮಾಡಿದೆ. ಪೊಲೀಸರನ್ನು ಹಿಡಿದು ಹಿಗ್ಗಾಮಿಗ್ಗಾ ಥಳಿಸಿದ್ದಾರೆ. ಆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ(Social Media) ಫುಲ್ ವೈರಲ್ ಆಗಿದೆ.

ಯಲಹಂಕ ನ್ಯೂಟೌನ್ ಚಿಕ್ಕಬೆಟ್ಟಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಾಸ್ಕ್ ಹಾಕಿಲ್ಲ ಎಂಬುದನ್ನು ಪ್ರಶ್ನಿಸಿದಕ್ಕೆ ಪೊಲೀಸರ ಮೇಲೆ ಹಲ್ಲೆ (Assault) ಮಾಡಿದ್ದಾರೆ ಎನ್ನಲಾಗಿದೆ. 

ಈ ಸಂಬಂಧ ಪುಂಡರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಯಲಹಂಕ ನ್ಯೂಟೌನ್ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರ ಮೇಲೆ ಗೂಂಡಾಗಿರಿ, SI, ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿತ

ಪೊಲೀಸರ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಬೇರೆಯದ್ದೇ ಕಥೆ ಹೇಳುತ್ತದೆ. ಯುವಕನೊಬ್ಬ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ. ಇದಕ್ಕೆ ಯಾವುದೇ ಪ್ರತಿರೋಧ ತೊರದೇ ಠಾಣೆಗೆ ಎಳೆದುಕೊಂಡು ಹೋಗುವುದು ಬಿಟ್ಟು ಪೊಲೀಸ್ ಸಿಬ್ಬಂದಿ ಸಹಾಯಕರಂತೆ ಹೊಡೆಸಿಕೊಂಡಿದ್ದಾರೆ. 

ಕಾನ್ಸ್‌ಟೇಬಲ್ ಮಾತ್ರವಲ್ಲದೇ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ಪಿಎಸ್‌ಐ ಮೇಲೆ ಸಹ ಹಲ್ಲೆ ನಡೆದಿದೆ. ಇದಾದ ಬಳಿಕ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪೊಲೀಸ್ ಅಧಿಕಾರಿಗಳು ಯಾವುದೇ ಅಭಿಪ್ರಾಯ ಹಂಚಿಕೊಂಡಿಲ್ಲ. ಗಲಾಟೆ ವೇಳೆ ಮಹಿಳೆಯರು ಕಿರುಚುತ್ತಿರುವ ಸದ್ದು ವಿಡಿಯೋದಲ್ಲಿ ಕೇಳಿಸುತ್ತಿದ್ದು, ಮಾಸ್ಕ್ ವಿಚಾರವಾಗಿ ಜಗಳ ನಡೆಯಿತೇ ಇಲ್ಲವೇ ಬೇರೆಯದ್ದೇ ಕಾರಣಕ್ಕೆ ಈ ಘಟನೆ ನಡೆಯಿತಾ ಎನ್ನುವ ಅನುಮಾಗಳು ವ್ಯಕ್ತವಾಗಿವೆ.

ಸಿಸಿಬಿ ಪೊಲೀಸರಿಂದ ಡ್ರಗ್ ಪೆಡ್ಲರ್ಸ್ ಸೆರೆ: 
ವಿದ್ಯಾರ್ಥಿಗಳಿಗೆ ಮತ್ತು ಐಟಿ ಉದ್ಯೋಗಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಐವರು ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ಎಂಡಿಎಂಎ ಕ್ರಿಸ್ಟಲ್ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಹತ್ತು ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಐವರನ್ನು ಬಂಧಿಸಿದ್ದು, ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸರಣಿ ವಾಹನ ಅಪಘಾತ 
ಬೆಂಜ್ ಐಶರಾಮಿ ಕಾರು ಮತ್ತು ಎರಡು ಆಟೋ ಮತ್ತು ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಇಂದಿರಾನಗರದ 80 ಅಡಿ ರಸ್ತೆಯಲ್ಲಿ ವೇಗವಾಗಿ ಬಂದ ಬೆಂಜ್ ಕಾರು ಎರಡು ಆಟೋಗಳಿಗೆ ಅಪ್ಪಳಿಸಿದೆ. ಈ ವೇಳೆ ಮಿನಿ ಲಾರಿ ಸೇರಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ನಡೆದಿದೆ. ಈ ವೇಳೆ ಆಟೋ ಚಾಲಕ ಸಾವನ್ನಪ್ಪಿದ್ದು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲಸೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

click me!