ಚಿಕ್ಕಮಗಳೂರು: ಹುಲಿ ಹತ್ಯೆ ಆರೋಪ, ಇಬ್ಬರ ಬಂಧನ ಇನ್ನೋರ್ವ ಪರಾರಿ

By Suvarna News  |  First Published Apr 19, 2024, 8:32 PM IST

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಮೂಡಿಗೆರೆ ತಾಲ್ಲೂಕು ತಳವಾರ ಗ್ರಾಮದ ದೀಕ್ಷಿತ್ (31 ವರ್ಷ) ಮತ್ತು ಕಳಸ ತಾಲ್ಲೂಕು ಮರಸಣಿಗೆ ಗ್ರಾಮದ ಆದಿತ್ಯ (19 ವರ್ಷ) ಬಂಧಿತ ಆರೋಪಿಗಳು.


ಚಿಕ್ಕಮಗಳೂರು (ಏ.19): ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಮೂಡಿಗೆರೆ ತಾಲ್ಲೂಕು ತಳವಾರ ಗ್ರಾಮದ ದೀಕ್ಷಿತ್ (31 ವರ್ಷ) ಮತ್ತು ಕಳಸ ತಾಲ್ಲೂಕು ಮರಸಣಿಗೆ ಗ್ರಾಮದ ಆದಿತ್ಯ (19 ವರ್ಷ) ಬಂಧಿತ ಆರೋಪಿಗಳು.

ಇನ್ನು ಹಲವರು ಹುಲಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದು  ಉಳಿದವರ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಬಲೆ ಬೀಸಿದ್ದಾರೆ.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಅರಣ್ಯ ಇಲಾಖೆ ವಾಚರ್ ಆಗಿರುವ ಕುಂಡ್ರ ಗ್ರಾಮದ ವ್ಯಕ್ತಿಯೊಬ್ಬ ಮುಖ್ಯ ಆರೋಪಿಯಾಗಿದ್ದು, ಆತ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Tap to resize

Latest Videos

undefined

ಪ್ರಚಾರದ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶ; ಕೂದಲೆಳೆ ಅಂತರದಲ್ಲಿ ನಟ ದರ್ಶನ್ ಪಾರು!

ತತ್ಕೊಳ ಮೀಸಲು ಅರಣ್ಯದಲ್ಲಿ : 

ತತ್ಕೊಳ ಮೀಸಲು ಅರಣ್ಯ ವ್ಯಾಪ್ತಿಯ ಕುಂಡ್ರ ಗ್ರಾಮದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಹುಲಿಯೊಂದನ್ನು ಹತ್ಯೆ ಮಾಡಿ ಅದರ ಬೆಲೆಬಾಳುವ ಅಂಗಾಂಗಗಳನ್ನು ತೆಗೆದು ಹುಲಿಯ ಕಳೆಬರವನ್ನು ಮಣ್ಣಿನಲ್ಲಿ ಹೂತಿಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಅರಣ್ಯ ಅಧಿಕಾರಿಗಳು ಬಂಧಿತ ಆರೋಪಿಗಳ ಜೊತೆ ಸ್ಥಳ ಮಹಜರು ನಡೆಸಿದ್ದು, ಪತ್ತೆಯಾದ ಪ್ರಾಣಿಯ ಪಳೆಯುಳಿಕೆಗಳನ್ನು ಸಂಗ್ರಹಿಸಿದ್ದಾರೆ.

ಚಿಕ್ಕಮಗಳೂರು: ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಡಬೂರು ಗ್ರಾಮಸ್ಥರು

ಪತ್ತೆಯಾಗಿರುವ ಪಳೆಯುಳಿಕೆಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗುತ್ತದೆ ಎಂದು ತಿಳಿದುಬಂದಿದೆ.ಈ ಭಾಗದಲ್ಲಿ ಸೋಲಾರ್ ಬೇಲಿ ನೋಡಿಕೊಳ್ಳುವ ಕೆಲಸ ಮಾಡುತ್ತಿರುವ ಕುಂಡ್ರ ಗ್ರಾಮದ ಅರಣ್ಯ ಇಲಾಖೆ ಅರೆಕಾಲಿಕ ನೌಕರನ ಮನೆಯ ಸಮೀಪವೇ ಹುಲಿಯ ಕಳೇಬರಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.ವನ್ಯಜೀವಿ ಹತ್ಯೆ ಕಾಯ್ದೆಯಡಿ ಮೂಡಿಗೆರೆ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಅರಣ್ಯ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.ಪ್ರಕರಣದ ಬಗ್ಗೆ ಗಂಭೀರ ತನಿಖೆ ಕೈಗೊಂಡು ತಪ್ಪಿತಸ್ತರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

click me!