
ಕಲಬುರಗಿ(ಜು.14): ಇಲ್ಲಿನ ಭರತನಗರ ತಾಂಡಾದ ಪಾಳುಬಿದ್ದ ಸರ್ಕಾರಿ ಹಾಸ್ಟೆಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಾಪು ನಗರದ ವಿಘ್ನೇಶ ಉಪಾಧ್ಯ (25) ಮತ್ತು ಚೆಂಗು ಪಾಟೀಲ ಎಂಬುವವರನ್ನು ಬ್ರಹ್ಮಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 4,880 ರೂ.ಮೌಲ್ಯದ 610 ಗ್ರಾಂ. ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು: ಆಂಧ್ರದಿಂದ ರೈಲಿನಲ್ಲಿ 20 ಕೇಜಿ ಗಾಂಜಾ ತಂದು ಸಿಕ್ಕಬಿದ್ದ ಪೆಡ್ಲರ್
ಉಪ ಪೊಲೀಸ್ ಆಯುಕ್ತ ಅಡ್ಡೂರು ಶ್ರೀನಿವಾಸಲು, ಎ.ಚಂದ್ರಪ್ಪ, ದಕ್ಷಿಣ ಉಪ-ವಿಭಾಗದ ಎಸಿಪಿ ಭೂತೇಗೌಡ ಅವರ ಮಾರ್ಗದರ್ಶನದಲ್ಲಿ ಪಂಚರೊಂದಿಗೆ ಬ್ರಹ್ಮಪುರ ಪೊಲೀಸ್ ಠಾಣೆ ಪಿಐ ಸಚಿನ್ ಎಸ್.ಚಲವಾದಿ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸತೀಶ, ರವಿ, ಸಂತೋಷಕುಮಾರ ಮತ್ತು ಕಲ್ಯಾಣಕುಮಾರ ಅವರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ