
ಬೆಂಗಳೂರು(ಸೆ.24): ಹೊರ ರಾಜ್ಯಗಳ ಡ್ರಗ್ಸ್ ಪೆಡ್ಲರ್‌ಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತು ಖರೀದಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಹಾಗೂ ಈತನ ಪ್ರೇಯಸಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.
ನೈಜಿರಿಯಾ ಮೂಲದ ಮೈಕಲ್ ಡಿಕೆ ಓಕೋಲಿ(41) ಮತ್ತು ಈತನ ಪ್ರೇಯಸಿ ಸಹನಾ(25) ಬಂಧಿತರು. ಆರೋಪಿ ಗಳಿಂದ ₹1.50 ಕೋಟಿ ಮೌಲ್ಯದ 1 ಕೆ.ಜಿ. 50 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್, 3 ಮೊಬೈಲ್ ಹಾಗೂ ತೂಕದ ಯಂತ್ರ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಸಿಸಿಬಿ ಪೊಲೀಸರು ವಿದೇಶಿ ಡ್ರಗ್ಸ್ ಪೆಡ್ಡರೊಬ್ಬನನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಈತ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಈ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೆಡಿಕಲ್ ಶಾಪ್‌ಗಳಲ್ಲಿ ಸಿಗುವ ಪೇನ್ ಕಿಲ್ಲರ್ ಮಾತ್ರೆಗಳಿಂದ ಡ್ರಗ್ಸ್ ದಂಧೆ ಆತಂಕ: ಗೃಹ ಸಚಿವ ಪರಮೇಶ್ವರ್
ಆರೋಪಿ ಮೈಕಲ್ ಆರು ವರ್ಷದ ಹಿಂದೆ ವ್ಯವಹಾರಿಕಾ ವೀಸಾ ಪಡೆದು ನೈಜಿರಿಯಾದಿಂದ ಭಾರತಕ್ಕೆ ಬಂದಿದ್ದಾನೆ. ಬೆಂಗಳೂರಿನ ಗ್ರಾಮಾಂತರ ವ್ಯಾಪ್ತಿಯಯರಪ್ಪನಹಳ್ಳಿಯ ಬಾಲಾಜಿ ಲೇಔಟ್‌ನ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಮುಂಬೈ, ದೆಹಲಿಯಿಂದ ಡ್ರಗ್ಸ್ ಖರೀದಿ:
ಆರೋಪಿಯು ಮುಂಬೈ ಮತ್ತು ದೆಹಲಿಯಲ್ಲಿ ನೆಲೆಸಿರುವ ವಿದೇಶಿ ಡ್ರಗ್ಸ್ ಪೆಡ್ಲರ್ ಗಳಿಂದ ಕಡಿಮೆ ಬೆಲೆಗೆ ಮಾದಕವಸ್ತುಗಳನ್ನು ಖರೀದಿಸಿ ನಗರದ ಟೆಕ್ಕಿಗಳು, ವಿದ್ಯಾರ್ಥಿಗಳು ಹಾಗೂ ವ್ಯಸನಿಗಳಿಗೆ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.
ಲಿವಿಂಗ್ ಟುಗೆದರ್
ಆರೋಪಿ ಮೈಕಲ್ ಈ ಹಿಂದೆ ಕೆ.ಆರ್.ಪುರದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ ವೇಳೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಹನಾ ಪಕ್ಕದ ಮನೆಯಲ್ಲಿ ನೆಲೆಸಿದ್ದಳು. ಈ ವೇಳೆ ಇಬ್ಬರಿಗೂ ಪರಿಚಯವಾಗಿ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಒಂದೂವರೆ ವರ್ಷದಿಂದ ಇಬ್ಬರೂ ಯರಪ್ಪನ ಹಳ್ಳಿಯ ಬಾಲಾಜಿ ಲೇಔಟ್‌ನ ಬಾಡಿಗೆ ಮನೆಯಲ್ಲಿ ಸಹಜೀವನ ನಡೆಸುತ್ತಿದ್ದರು. ಪ್ರಿಯಕರ ಮೈಕಲ್ ಡ್ರಗ್ಸ್ ಮಾರಾಟ ದಂಧೆಗೆ ಸಹನಾ ಕೈ ಜೋಡಿಸಿದ್ದಳು. ತನಗೆ ಪರಿಚಿತವಿರುವ ಸಾಫ್ಟ್‌ವೇರ್ ಎಂಜಿನಿಯರ್‌ಗಳು, ವಿದ್ಯಾರ್ಥಿಗಳು ಹಾಗೂ ಗಿರಾಕಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದಳು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ