ಚಿಕ್ಕೋಡಿ: ಪರಸ್ಪರ ಹೊಡೆದಾಡಿಕೊಂಡು ಅಣ್ಣ ತಮ್ಮಂದಿರು ಸಾವು, ಕಾರಣ?

By Girish Goudar  |  First Published Jul 23, 2024, 3:06 PM IST

ಭೂ ವಿವಾದ ಹಿನ್ನೆಲೆಯಲ್ಲಿ ಸಹೋದರ ಸಂಬಂಧಿಕರ ಮಕ್ಕಳ ನಡುವೆ ಗಲಾಟೆ ನಡೆದಿತ್ತು. ತಡರಾತ್ರಿ ನಡೆದ ಗಲಾಟೆಯಲ್ಲಿ ಒಬ್ಬರಿಗೊಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ. ಪರಸ್ಪರ ಹೊಡೆದಾಟದಲ್ಲಿ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಮಹಾರಾಷ್ಟ್ರದ ಮೀರಜ್‌ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ.  


ಚಿಕ್ಕೋಡಿ(ಜು.23):  ಪರಸ್ಪರ ಹೊಡೆದಾಡಿಕೊಂಡು ಅಣ್ಣ ತಮ್ಮಂದಿರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಖೋತವಾಡಿ ಗ್ರಾಮದಲ್ಲಿ ನಿನ್ನೆ(ಸೋಮವಾರ) ನಡೆದಿದೆ. ಹಣಮಂತ ರಾಮಚಂದರ ಖೋತ (35) ಖಂಡೋಭಾ ತಾನಾಜಿ ಖೋತ (30) ಮೃತಪಟ್ಟ ಸಹೋದರರು. 

ಭೂ ವಿವಾದ ಹಿನ್ನೆಲೆಯಲ್ಲಿ ಸಹೋದರ ಸಂಬಂಧಿಕರ ಮಕ್ಕಳ ನಡುವೆ ಗಲಾಟೆ ನಡೆದಿತ್ತು. ತಡರಾತ್ರಿ ನಡೆದ ಗಲಾಟೆಯಲ್ಲಿ ಒಬ್ಬರಿಗೊಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ.  

Tap to resize

Latest Videos

undefined

ಮಾಗಡಿ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರವಸಗಿ ಕೊಲೆಗೈದ ಕಾಮುಕ, ಸಂಬಂಧಿಕನಿಂದಲೇ ಹೇಯಕೃತ್ಯ..!

ಪರಸ್ಪರ ಹೊಡೆದಾಟದಲ್ಲಿ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಮಹಾರಾಷ್ಟ್ರದ ಮೀರಜ್‌ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ.   ಘಟನಾ ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಭೀಮಾಶಂಕರ್ ಗುಳೇದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

click me!