ಬೆಂಗಳೂರು: ಟ್ರಕ್‌ ಚಾಲಕರಿಂದ ಹಫ್ತಾ ವಸೂಲಿ, ಇಬ್ಬರು ಪೇದೆ ಜೈಲುಪಾಲು

Published : May 30, 2023, 12:30 PM IST
ಬೆಂಗಳೂರು: ಟ್ರಕ್‌ ಚಾಲಕರಿಂದ ಹಫ್ತಾ ವಸೂಲಿ, ಇಬ್ಬರು ಪೇದೆ ಜೈಲುಪಾಲು

ಸಾರಾಂಶ

ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಇಬ್ಬರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರು(ಮೇ.30):  ಭ್ರಷ್ಟಾಚಾರ ಆರೋಪದಡಿ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್‌ ಠಾಣೆಯ ಇಬ್ಬರು ಕಾನ್ಸ್‌ಟೇಬಲ್‌ಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ.

ಸಂಚಾರ ಪೊಲೀಸ್‌ ಕಾನ್ಸ್‌ಟೇಬಲ್‌ಗಳಾದ ಭರತ್‌ ಮತ್ತು ವಿರೂಪಣ್ಣ ಬಂಧಿತರು. ಇತ್ತೀಚೆಗೆ ಮಾಗಡಿ ರಸ್ತೆಯ ನೈಸ್‌ ರಸ್ತೆ ಜಂಕ್ಷನ್‌ನಲ್ಲಿ ಟ್ರಕ್‌ ಚಾಲಕರಿಗೆ ಮಾಸಿಕ ಹಫ್ತಾ ನಿಗದಿಗೊಳಿಸಿ, ಲಂಚ ಸ್ವೀಕರಿಸುವುದು ವಿಡಿಯೊದಲ್ಲಿ ಸೆರೆಯಾಗಿತ್ತು. ಮೊಬೈಲ್‌ನಲ್ಲಿ ವಿಡಿಯೊ ಮಾಡುತ್ತಿರುವುದನ್ನು ಗಮನಿಸಿದ್ದ ಕಾನ್ಸ್‌ಟೇಬಲ್‌ಗಳು ರಸ್ತೆಯಲ್ಲಿ ಓಡಲಾರಂಭಿಸಿದ್ದರು. ಟ್ರಕ್‌ ಚಾಲಕ ಸಹ ಪೊಲೀಸರನ್ನು ಬೆನ್ನಟ್ಟಿ ವಿಡಿಯೊ ಮಾಡಿದ್ದ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಸಾರ್ವಜನಿಕರು ಸಂಚಾರ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

 183 ದಿನಗಳಿಂದ ಸಿಮೆಂಟ್ ಕಂಪನಿ ವಿರುದ್ಧ ಧರಣಿ ನಡೆಸುತ್ತಿದ್ದ ರೈತ ಸಾವು!

ಲಂಚ ಸ್ವೀಕಾರದ ವಿಡಿಯೊ ಸಾಕ್ಷ್ಯ ಲಭ್ಯವಾದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಈ ಇಬ್ಬರು ಕಾನ್ಸ್‌ಟೇಬಲ್‌ಗಳನ್ನು ಸೇವೆಯಿಂದ ಅಮಾನತುಗೊಳಿಸಿ ಇಲಾಖಾ ವಿಚಾರಣೆಗೆ ಆದೇಶಿಸಿದ್ದಾರೆ. ಅಷ್ಟೇ ಅಲ್ಲದೆ, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಇಬ್ಬರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?
ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ