ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ ಹಳೇ ಆಟೋದಲ್ಲಿ ಗಾಂಧಿ ಎಂಬ ವ್ಯಕ್ತಿಯ ಶವ ಪತ್ತೆಯಾಗಿದೆ. ಇನ್ನು ಬಸ್ ನಿಲ್ದಾಣದ ಆವರಣದಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ.
ವಿಜಯಪುರ(ಆ.26): ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಶುಕ್ರವಾರ ಪ್ರತ್ಯೇಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳ ಶವ ಪತ್ತೆಯಾಗಿವೆ. ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ ಹಳೇ ಆಟೋದಲ್ಲಿ ಗಾಂಧಿ ಎಂಬ ವ್ಯಕ್ತಿಯ ಶವ ಪತ್ತೆಯಾಗಿದೆ. ಇನ್ನು ಬಸ್ ನಿಲ್ದಾಣದ ಆವರಣದಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ.
ಮೃತಪಟ್ಟ ವ್ಯಕ್ತಿ ಅಂದಾಜು 45- 50 ವಯಸ್ಸಿನವನಾಗಿದ್ದು, ಹೆಸರು ವಿಳಾಸ ಪತ್ತೆಯಾಗಿಲ್ಲ. ಈ ಇಬ್ಬರ ಸಾವು ಕೊಲೆಯೋ, ಸಹಜವೋ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
Mangaluru crime: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ!
ಈ ಸಂಬಂಧ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.