Dharwadaದಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ

Published : Oct 13, 2025, 12:34 PM IST
Pune-Bangalore highway accident

ಸಾರಾಂಶ

Pune-Bangalore highway accident: ಧಾರವಾಡ ತಾಲೂಕಿನ ಹೊಸ ತೇಗೂರು ಬಳಿ, ಕೊಲ್ಲಾಪುರ ಮಹಾಲಕ್ಷ್ಮಿ ದರ್ಶನ ಪಡೆದು ಮರಳುತ್ತಿದ್ದ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ದೆ ಮಂಪರಿನಿಂದಾದ ಈ ದುರ್ಘಟನೆಯಲ್ಲಿ ಗದಗ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.

ಧಾರವಾಡ (ಅ.13): ಮರಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿ, ಐವರು ಗಾಯಗೊಂಡ ಘಟನೆ ತಾಲೂಕಿನ ಹೊಸ ತೇಗೂರು ಗ್ರಾಮದ ಬಳಿ ಪೂನಾ-ಬೆಂಗಳೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ ಸಂಭವಿಸಿದೆ.

ಗದಗ ಮುಲದ ಸುರೇಶ ಬಸವಣ್ಣೆಪ್ಪ ತುಪ್ಪದ (65) ಮತ್ತು ಮಹಾಂತಮ್ಮ ಬಸವಣ್ಣೆಪ್ಪ ತುಪ್ಪದ (೫೨) ಸಾವನ್ನಪ್ಪಿದ್ದು, ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ಗೀತಾ ಸಿದ್ಧರಾಮ ಅಸುಂಡಿ, ಜನನಿ ಸುರೇಶ ತುಪ್ಪ, ಕೀರ್ತಿ ಸುರೇಶ ತುಪ್ಪದ, ವಿರಾಜ ಸಿದ್ಧಲಿಂಗಪ್ಪ ತುಪ್ಪದ ಮತ್ತು ಕ್ರೂಸರ್ ಚಾಲಕ ಚೇತನ ಜಾಧವ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗದಗ ಮೂಲದ ಇವರು ಕೊಲ್ಲಾಪೂರ ಮಹಾಲಕ್ಷ್ಮಿ ದರ್ಶನ ಪಡೆದು ಮರಳಿ ಬರುವಾಗ ಈ ಅವಘಡ ನಡೆದಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಗುಂಜನ ಆರ್ಯ, ಡಿಎಸ್‌ಪಿ ವಿನೋದ ಮುಕ್ತೇದಾರ, ಸಿಪಿಐ ಶಮೀರ ಮುಲ್ಲಾ ಭೇಟಿ ನೀಡಿದ್ದರು. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್‌ಐ ಸಿದ್ದರಾಮಪ್ಪ ಉನ್ನದ ಮತ್ತು ಸಿಬ್ಬಂದಿ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದರು. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ