ಕೊಡಿಗೇಹಳ್ಳಿ ಮತ್ತು ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬೆಂಗಳೂರು(ಮೇ.08): ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
ಕೊಡಿಗೇಹಳ್ಳಿ ಮತ್ತು ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
undefined
ಕೊಡಿಗೇಹಳ್ಳಿಯಲ್ಲಿ ಬಂಧಿಸಿರುವ ವಿದೇಶಿ ಮಹಿಳೆಯು ಚಿಕಿತ್ಸೆಗಾಗಿ ವೈದ್ಯಕೀಯ ವೀಸಾ ಪಡೆದು 2023ರಲ್ಲಿ ಭಾರತಕ್ಕೆ ಬಂದಿದ್ದರು. ಅದೇ ರೀತಿ ಬಸವನಗುಡಿಯಲ್ಲಿ ಬಂಧಿಸಿರುವ ವಿದೇಶಿ ಪ್ರಜೆಯು ಸಹ ವೈದ್ಯಕೀಯ ವೀಸಾ ಪಡೆದು 2023ರಲ್ಲಿ ನಗರಕ್ಕೆ ಬಂದಿದ್ದರು. ಇಬ್ಬರೂ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ. ಈ ಇಬ್ಬರನ್ನು ಎಫ್‌ಆರ್‌ಸಿ ಸೆಂಟರ್‌ನಲ್ಲಿ ಇರಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.