ಬೈಕ್ ತಾಗಿದ್ದಕ್ಕೆ ಹಿಂದೂ ಯುವಕರಿಬ್ಬರಿಗೆ ಹಲ್ಲೆ

Published : Oct 10, 2022, 12:30 PM ISTUpdated : Oct 10, 2022, 12:33 PM IST
ಬೈಕ್ ತಾಗಿದ್ದಕ್ಕೆ ಹಿಂದೂ ಯುವಕರಿಬ್ಬರಿಗೆ ಹಲ್ಲೆ

ಸಾರಾಂಶ

ಬೈಕ್‌ ತಾಕಿದ ವಿಚಾರಕ್ಕೆ ಸಂಬಂಧಿಸಿ ಅನ್ಯಕೋಮಿನ ಯುವಕರು ಹಿಂದು ಯುವಕರಿಬ್ಬರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ ಘಟನೆ ರಾಮದುರ್ಗ ಪಟ್ಟಣದಲ್ಲಿ ಭಾನುವಾರ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಈಗಾಗಲೇ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಳಗಾವಿ (ಅ.10) : ಬೈಕ್‌ ತಾಕಿದ ವಿಚಾರಕ್ಕೆ ಸಂಬಂಧಿಸಿ ಅನ್ಯಕೋಮಿನ ಯುವಕರು ಹಿಂದು ಯುವಕರಿಬ್ಬರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ ಘಟನೆ ರಾಮದುರ್ಗ ಪಟ್ಟಣದಲ್ಲಿ ಭಾನುವಾರ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಈಗಾಗಲೇ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Uttara Kannada: ಮದುವೆಯ ವೀಳ್ಯ ಕೊಟ್ಟಿಲ್ಲ ಎಂದು ಊರಗೌಡನಿಂದ ಕುಟುಂಬದ ಮೇಲೆ ಬಹಿಷ್ಕಾರ!

ವಡ್ಡರ ಓಣಿಯ ಗೋಪಾಲ ತಿಮ್ಮರಡ್ಡಿ ಬಂಡಿವಡ್ಡರ, ರವಿ ನಾಗಪ್ಪ ಬಂಡಿವಡ್ಡರ ಮತ್ತು ನಂಜುಂಡಿ ಸಾಬಣ್ಣ ಬಂಡಿವಡ್ಡರ ಅವರಿಗೆ ಗಾಯಗಳಾಗಿದ್ದು, ಇಬ್ಬರೂ ಸರ್ಕಾರಿ ಆಸ್ಪತ್ರೆ ಹಾಗೂ ಒಬ್ಬ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಹಲ್ಲೆ ನಡೆಸಿದ ಅಮೀನ್‌ ರಾಜೇಸಾಬ್‌ ಜಂಗಲ್‌ಶೇಖ್‌ ಅವರನ್ನು ವಶಕ್ಕೆ ಪಡೆದ ಸ್ಥಳೀಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಘಟನೆ ವಿವರ: ಹಿಂದೂ ಯುವಕರು ಸೀಗೆ ಹುಣ್ಣಿಮೆ ನಿಮಿತ್ತ ಹೊಲಕ್ಕೆ ಚರಗ ಚೆಲ್ಲುವ ಸಲುವಾಗಿ ಬೈಕ್‌ನಲ್ಲಿ ಹೊರಟಿದ್ದ ಸಂದರ್ಭದಲ್ಲಿ ರಾಮದುರ್ಗ ಪಟ್ಟಣದ ಆರಿಬೆಂಚಿ ಪೆಟ್ರೋಲ್‌ ಪಂಪ್‌ ಬಳಿ ಇನ್ನೊಂದು ಕೋಮಿನವರ ಬೈಕ್‌ ತಾಕಿದೆ. ಆಗ ಎರಡೂ ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಅನ್ಯಕೋಮಿನ ಯುವಕರು ಹಿಂದೂ ಯುವಕರಿಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

500 ರೂ ವಿಚಾರಕ್ಕೆ ಸ್ನೇಹಿತನ ತಲೆ ಕತ್ತರಿಸಿದ ವ್ಯಕ್ತಿ; ಕ್ಷುಲ್ಲಕ ಕಾರಣಕ್ಕೆ ಈ ರೀತಿ ಪ್ರತಿಕ್ರಿಯೆ ಏಕೆ?

ಶಾಸಕರ ಭೇಟಿ: ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಮಹಾದೇವಪ್ಪ ಯಾದವಾಡ ಆಸ್ಪತ್ರೆಗೆ ಆಗಮಿಸಿ ಗಾಯಗೊಂಡ ಯುವಕರ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾತನಾಡಿದ ಅವರು, ಇತ್ತೀಚೆಗೆ ಇನ್ನೊಂದು ಕೋಮಿನವರ ಉಪಟಳ ಹೆಚ್ಚಾಗುತ್ತಿದೆ. ತಪ್ಪಿತಸ್ಥರ ಮೇಲೆ ಗುಂಡಾ ಕಾಯ್ದೆ ಅಡಿ ಪೊಲೀಸರು ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ