ವಿಷ ಸೇವಿಸಿ ಅಪ್ರಾಪ್ತ ಪ್ರೇಮಿಗಳಿಬ್ಬರು ಆತ್ಮಹತ್ಯೆ!

By Ravi Janekal  |  First Published Dec 14, 2023, 5:14 AM IST

ಅಪ್ರಾಪ್ತ ಪ್ರೇಮಿಗಳಿಬ್ಬರೂ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ತಾಪುರ ತಾಲೂಕಿನ ಕೊಲ್ಲೂರ ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.


ಚಿತ್ತಾಪುರ (ಡಿ.14): ಅಪ್ರಾಪ್ತ ಪ್ರೇಮಿಗಳಿಬ್ಬರೂ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ತಾಪುರ ತಾಲೂಕಿನ ಕೊಲ್ಲೂರ ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ನಾಲವಾರ ಹೊಬಳಿ ವ್ಯಾಪ್ತಿಯ ರಾಂಪುರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ತರಕಸ್‌ಪೇಠ ಗ್ರಾಮದ ರಾಧಿಕಾ ಮೆತ್ತನ್(೧೪) ಹಾಗೂ ಯಾದಗಿರಿಯಲ್ಲಿ ಐಟಿಐ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೊಲ್ಲೂರ ಗ್ರಾಮದ ನಿವಾಸಿ ಆಕಾಶ ಬೋವಿ(೧೯) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂದ್ದಾರೆ.

Tap to resize

Latest Videos

undefined

ಅನೈತಿಕ ಸಂಬಂಧಕ್ಕೆ ಅಡ್ಡಿಯಾದಳೆಂದು ಪತ್ನಿ ಕೊಲೆ? ಅನುಮಾನಾಸ್ಪದವಾಗಿ ಗೃಹಿಣಿ ಸಾವು!

ತರಕಸಪೇಠ್ ಸಮೀಪದ ಚೌಕಂಡಿ ತಾಂಡಾ ಪರಿಸರದ ನಿರ್ಜನ ಪ್ರದೇಶದಲ್ಲಿ ಸೇರಿದ್ದ ಈ ಪ್ರೇಮಿಗಳು ಏಕಕಾಲಕ್ಕೆ ಕೀಟನಾಶಕ ಸೇವಿಸಿದ್ದಾರೆ ಎನ್ನಲಾಗಿದ್ದು, ಸಾವು ಬದುಕಿನ ಮಧ್ಯೆ ಹೊರಾಡುತ್ತಿದ್ದ ಪ್ರೇಮಿಗಳನ್ನು ಗಮನಿಸಿದ ಸ್ಥಳೀಯರು ಖಾಸಗಿ ವಾಹನದಲ್ಲಿ ಕೊಲ್ಲೂರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಬ್ಬರು ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಭೀಕರ ಕೊಲೆ; ಅವೈಡ್ ಮಾಡಿದಾಳೆಂದು ಹತ್ಯೆ ಮಾಡಿದ ಪಾಪಿ! 

ಈ ಅಪ್ರಾಪ್ತ ಪ್ರೇಮಿಗಳ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿರುವ ವಾಡಿ ಪೊಲಿಸ್ ಠಾಣಿ ಪಿಎಸ್‌ಐ ತಿರುಮಲ್ಲೇಶ ಕುಂಬಾರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

click me!