ಮಧ್ಯಪ್ರದೇಶ: ಅಶ್ಲೀಲ ವೀಡಿಯೊ ಸೋರಿಕೆ ಬೆದರಿಕೆ: ಇಬ್ಬರು ಅಪ್ರಾಪ್ತ ಸಹೋದರಿಯರು ಆತ್ಮಹತ್ಯೆ

Published : Jun 07, 2022, 10:45 PM ISTUpdated : Jun 07, 2022, 10:50 PM IST
ಮಧ್ಯಪ್ರದೇಶ:  ಅಶ್ಲೀಲ ವೀಡಿಯೊ ಸೋರಿಕೆ ಬೆದರಿಕೆ:  ಇಬ್ಬರು ಅಪ್ರಾಪ್ತ ಸಹೋದರಿಯರು ಆತ್ಮಹತ್ಯೆ

ಸಾರಾಂಶ

ಮಧ್ಯಪ್ರದೇಶದ  ರೇವಾದಲ್ಲಿ 24ರ ಹರೆಯದ ಯುವಕನ ಬ್ಲ್ಯಾಕ್‌ಮೇಲ್‌ನಿಂದಾಗಿ 12 ಮತ್ತು 16 ವರ್ಷದ ಇಬ್ಬರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಪಿ ಈ ಯುವತಿಯರ ಅಶ್ಲೀಲ ವಿಡಿಯೋಗಳನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಮಧ್ಯಪ್ರದೇಶ (ಜೂ. 07): ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಸೋಮವಾರ ಇಬ್ಬರು ಅಪ್ರಾಪ್ತ ಸಹೋದರಿಯರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 24 ವರ್ಷದ ಯುವಕನೊಬ್ಬ ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದ ಮತ್ತು ಅವರ ಅಶ್ಲೀಲ ವಿಡಿಯೋಗಳನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಆರೋಪಿಸಲಾಗಿದೆ.  ನಾಯ್ ಗರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯ ದಿಹಿಯಾ ಪದಾನ್ ಗ್ರಾಮದಲ್ಲಿ ಇಬ್ಬರು ಅಪ್ರಾಪ್ತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅವರಲ್ಲಿ ಒಬ್ಬರು 12 ವರ್ಷ ವಯಸ್ಸಿನವರಾಗಿದ್ದರೆ, ಇನ್ನೊಬ್ಬರು 16 ವರ್ಷ ವಯಸ್ಸಿನವರಾಗಿದ್ದರು. 

ಮೇ 23 ರಂದು ದೇವಸ್ಥಾನಕ್ಕೆ ತೆರಳಲು ಹೋಗಿದ್ದಸಹೋದರಿಯರು ಹಿಂತಿರುಗಿರಲಿಲ್ಲ. ಮರುದಿನ ಅವರ ದೇಹಗಳು ಬಾವಿಯಲ್ಲಿ ಪತ್ತೆಯಾಗಿದ್ದವು. ಈ ಬಳಿಕ ಮೃತದೇಹಗಳನ್ನು ಬಾವಿಯಿಂದ ಹೊರತೆಗೆಯಲಾಯಿತು. ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಆರೋಪಿಗಳ ಪಾತ್ರ ಬೆಳಕಿಗೆ ಬಂದಿದೆ.

ಆರೋಪಿ ರವಿ ಚತುರ್ವೇದಿ (24) ಫೋನ್ ಮೂಲಕ ಅನುಚಿತವಾಗಿ ಮಾತನಾಡಿ ಮದುವೆಗೆ ಒತ್ತಾಯಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಪೊಲೀಸ್ ಠಾಣೆ ಪ್ರಭಾರಿ ಮಿಥಿಲೇಶ್ ಯಾದವ್ ಮಾತನಾಡಿ, “ಸಂತ್ರಸ್ತೆಯ ಸಹೋದರನಿಗೆ ಈ ವಿಷಯ ತಿಳಿದಾಗ, ಆರೋಪಿಗಳಿಗೆ ತೊಂದರೆ ನೀಡುವುದನ್ನು ನಿಲ್ಲಿಸಲು ಅವರು ಆರೋಪಿಗಳೊಂದಿಗೆ ಮಾತುಕತೆ ನಡೆಸಿದರು. ಇದಾದ ಬಳಿಕ ಆರೋಪಿಗಳು ಇಬ್ಬರು ಸಹೋದರಿಯರ ಅಶ್ಲೀಲ ವಿಡಿಯೋಗಳನ್ನು ಲೀಕ್ ಮಾಡುವುದಾಗಿ ಹೇಳಿ ಬೆದರಿಕೆ ಹಾಕಲು ಆರಂಭಿಸಿದ್ದಾರೆ" ಎಂದು ಹೇಳಿದ್ದಾರೆ.

ಆರೋಪಿ ಬಂಧನ: ಪೊಲೀಸರು ಆರೋಪಿ ಚತುರ್ವೇದಿಯನ್ನು ಬಂಧಿಸಿ ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 305 ರ ಅನ್ವಯ ಪ್ರಕರಣ ದಾಖಲಿಸಿದ್ದಾರೆ. "ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರೆ, ಅಂತಹ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ, ಅಥವಾ ಹತ್ತು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಮತ್ತು ಮತ್ತು ದಂಡಕ್ಕೆ ಸಹ ಹೊಣೆಗಾರರಾಗಿರುತ್ತಾರೆ" ಎಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 305 ಹೇಳುತ್ತದೆ.  ಆರೋಪಿಯನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ.

ಇದನ್ನೂ ಓದಿ: ಸಾಮಾಜಿಕ ಜಾಲಾತಾಣದಲ್ಲಿ ಅಶ್ಲೀಲ ವಿಡಿಯೋ, ಫೋಟೋ ಅಪ್‌ಲೋಡ್‌ ಮಾಡುತ್ತಿದ್ದ ವ್ಯಕ್ತಿ ಬಂಧನ

ಇದನ್ನೂ ಓದಿ: ಮಗನ ಹೆಂಡತಿಗೆ ಮಾವನಿಂದ ಅಶ್ಲೀಲ ಮೆಸೇಜ್, ಕಿರುಕುಳಕ್ಕೆ ಪ್ರಾಣಬಿಟ್ಟ ಸೊಸೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ