
ಬೆಂಗಳೂರು(ಡಿ.26): ಕೂಲಿ ಹಣ ಹಂಚಿಕೊಳ್ಳುವ ವೇಳೆ ಉಂಟಾದ ಜಗಳ ವಿಕೋಪಕ್ಕೆ ಹೋಗಿ ಬಾಲಕನೊಬ್ಬನನ್ನು ಆತನ ಸ್ನೇಹಿತರು ಕೊಂದಿರುವ ದಾರುಣ ಘಟನೆ ಮೈಸೂರು ರಸ್ತೆಯ ಪಂತರಪಾಳ್ಯ ಸಮೀಪ ಶುಕ್ರವಾರ ರಾತ್ರಿ ನಡೆದಿದೆ.
14 ವರ್ಷದ ಬಾಲಕ ಹತ್ಯೆಗೀಡಾಗಿದ್ದು, ಈ ಕೊಲೆ ಪ್ರಕರಣ ಸಂಬಂಧ ಇಬ್ಬರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪತಿ-ಪತ್ನಿ ಕಲಹ: ಅಳಿಯನ ಕೊಲೆಯಲ್ಲಿ ಅಂತ್ಯ
ಮೃತನ ಪಾಲಕರು ಕೂಲಿ ಕೆಲಸಗಾರರಾಗಿದ್ದು, ಪಂತರಪಾಳ್ಯದಲ್ಲಿ ನೆಲೆಸಿದ್ದಾರೆ. ವಿದ್ಯಾಭ್ಯಾಸ ಮೊಟಕುಗೊಳಿಸಿದ್ದ ಬಾಲಕರು, ಸ್ಥಳೀಯವಾಗಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಹಣ ಸಂಪಾದಿಸುತ್ತಿದ್ದರು. ಎಂದಿನಂತೆ ಶುಕ್ರವಾರ ಸಹ ಅವರು ದುಡಿಮೆಗೆ ಹೋಗಿದ್ದರು. ಇದರಿಂದ ಗಳಿಸಿದ ಹಣವನ್ನು ಹಂಚಿಕೊಳ್ಳುವ ವಿಚಾರವಾಗಿ ಬಾಲಕರ ಮಧ್ಯೆ ಜಗಳವಾಗಿದೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೆರಳಿದ ಇಬ್ಬರು, ಮತ್ತೊಬ್ಬ ಸ್ನೇಹಿತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ