ಜ.7ರಂದು ಬಂಟ್ಸ್ ಸರ್ಕಲ್ ಬಳಿಯ ಅಪಾರ್ಟ್‌ಮೆಂಟ್‌ಗೆ ದಾಳಿ ನಡೆಸಿದ್ದ ಪೊಲೀಸರು ನಿಷೇಧಿತ ಡ್ರಗ್ಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿದ್ದರು. ಗುರುವಾರ ವರೆಗೆ ಬಂಧಿಸಲಾಗಿದ್ದ 13 ಮಂದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಮಂಗಳೂರು(ಜ.14): ಮಂಗಳೂರಿನಲ್ಲಿ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಮಾರಾಟ, ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮೂರನೇ ದಿನವಾದ ಶುಕ್ರವಾರ ಪೊಲೀಸರು ಸರ್ಜನ್ ಸೇರಿ ಮತ್ತಿಬ್ಬರು ವೈದ್ಯರನ್ನು ಬಂಧಿಸಿದ್ದಾರೆ. ಇದರೊಂದಿಗೆ ಗಾಂಜಾ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ಬಂಧಿತರನ್ನು ಆಂಧ್ರದ ಅನಂತಪುರ ನಿವಾಸಿ ಹಾಗೂ ಹಾಲಿ ಅತ್ತಾವರದ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿರುವ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿ ಡಾ.ರಾಘವ ದತ್ತಾ (28), ಬೆಂಗಳೂರಿನ ಹಲಸೂರಿನ ಜೋಗುಪಾಳ್ಯ ನಿವಾಸಿ ಹಾಗೂ ಹಾಲಿ ಮಂಗಳೂರಿನ ಫಳ್ನೀರ್‌ನಲ್ಲಿ ವಾಸವಿರುವ ಸರ್ಜನ್ ಡಾ.ಬಾಲಾಜಿ (29) ಎಂದು ಗುರುತಿಸಲಾಗಿದೆ. ಬಂಧಿತರು ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಸುದ್ದಿಗಾರರಿಗೆ ಶುಕ್ರವಾರ ಮಾಹಿತಿ ನೀಡಿದರು.
ಕಡಲ ತಡಿಯಲ್ಲಿ ಗಾಂಜಾ ಘಾಟು: ಇದು ಮಂಗಳೂರು 'ಗಾಂಜಾ' ಕೇಸ್'ನ ಕಂಪ್ಲೀಟ್ ಕಹಾನಿ
ಜ.7ರಂದು ಬಂಟ್ಸ್ ಸರ್ಕಲ್ ಬಳಿಯ ಅಪಾರ್ಟ್‌ಮೆಂಟ್‌ಗೆ ದಾಳಿ ನಡೆಸಿದ್ದ ಪೊಲೀಸರು ನಿಷೇಧಿತ ಡ್ರಗ್ಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿದ್ದರು. ಗುರುವಾರ ವರೆಗೆ ಬಂಧಿಸಲಾಗಿದ್ದ 13 ಮಂದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಬಂಧಿತರಲ್ಲಿ 10 ಮಂದಿ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ. ಅವರು ನಗರದ ವಿವಿಧ ಕಾಲೇಜುಗಳಲ್ಲಿ ಶಿಕ್ಷಣ ಹಾಗೂ ಆಸ್ಪತ್ರೆಗಳಲ್ಲಿ ಪ್ರಾಕ್ಟೀಸ್ ಮಾಡುತ್ತಿದ್ದವರು. ಗುರುವಾರ ಬಂಧಿತರಾಗಿರುವ ಮತ್ತಿಬ್ಬರು ಆರೋಪಿಗಳಲ್ಲಿ ಒಬ್ಬರು ನಗರದಲ್ಲಿ ಪ್ರಾಕ್ಟೀಸ್ ಮಾಡುತ್ತಿದ್ದ ವೈದ್ಯರು ಹಾಗೂ ಮತ್ತೊಬ್ಬರು ಸ್ನಾತಕೋತ್ತರ ವಿದ್ಯಾರ್ಥಿ.
ಪಾರ್ಟಿಯಲ್ಲಿ ಗಾಂಜಾ:
ವೈದ್ಯನಾಗಿರುವ ಆರೋಪಿ ಮನೆಯಲ್ಲಿ ನಡೆಯುತ್ತಿದ್ದ ಸಣ್ಣ ಕಾರ್ಯಕ್ರಮಕ್ಕೆ ಬರುವ ವಿದ್ಯಾರ್ಥಿಗಳು, ಸ್ನೇಹಿತರಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಬಗ್ಗೆ ತನಿಖೆಯಲ್ಲಿ ತಿಳಿದುಬಂದಿದೆ. ತನಿಖೆ ಮುಂದುವರಿದಿದೆ. ಹಾಸ್ಟೆಲ್, ಪಿಜಿಗಳಲ್ಲಿ ಮತ್ತಷ್ಟು ಆರೋಪಿಗಳಿರುವುದು ತಿಳಿದುಬಂದಿದ್ದು, ನೋಟಿಸ್ ನೀಡಲು ಹೋದ ವೇಳೆ ಅವರೆಲ್ಲ ಜಾಗ ಖಾಲಿ ಮಾಡಿ ಹೋಗಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದರು.