ಬಂಧಿತ ಅಕ್ರಮ ವಲಸಿಗರು ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದರು. ಈ ವಲಸಿಗರಿಗೆ ನೆರವು ನೀಡಿದ ಇಬ್ಬರಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.
ಉಡುಪಿ(ಅ.16): ಜಿಲ್ಲೆಯಲ್ಲಿ ಇಂದು(ಬುಧವಾರ) ಮತ್ತೆ ಇಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಮೊದಲು ಮಲ್ಪೆ ಪೊಲೀಸರು ಜಿಲ್ಲೆಯಲ್ಲಿ ಏಳು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದರು. ಮಲ್ಪೆ ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿ ಇಂದು ಮತ್ತಿಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನ ವಶಕ್ಕೆ ಪಡೆಯಲಾಗಿದೆ. ಸದ್ಯ ಇಬ್ಬರನ್ನು ವಶದಲ್ಲಿರಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ಬಳಿಕ ಆರೋಪಿಗಳ ವಿವರ ಬಹಿರಂಗ ಪಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
undefined
ಅಕ್ರಮವಾಗಿ ಭಾರತ ಪ್ರವೇಶಿಸಿ ಬೆಂಗಳೂರಿಗೆ ಬರುತ್ತಿದ್ದ 14 ಅಕ್ರಮ ಬಾಂಗ್ಲಾ ವಲಸಿಗರು ಸೆರೆ
ಸದ್ಯ ಪೊಲೀಸ್ ವಶದಲ್ಲಿ ಏಳು ಮಂದಿ ಬಾಂಗ್ಲಾ ಅಕ್ರಮ ವಲಸಿಗರಿದ್ದಾರೆ. ಬಂಧಿತ ಅಕ್ರಮ ವಲಸಿಗರು ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದರು. ಈ ವಲಸಿಗರಿಗೆ ನೆರವು ನೀಡಿದ ಇಬ್ಬರಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ. ಕಾರ್ಕಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಬಗ್ಗೆ ಉಡುಪಿ ಎಸ್ ಪಿ ಡಾ.ಅರುಣ್ ಕುಮಾರ್ ಖಚಿತಪಡಿಸಿದ್ದಾರೆ.