
ಬೆಂಗಳೂರು(ಡಿ.03): ಡಾರ್ಕ್ ನೆಟ್ ಮೂಲಕ ಡ್ರಗ್ಸ್ ದಂಧೆ ನಡೆಸುತ್ತಿದ್ದ ಮತ್ತಿಬ್ಬರು ಪೆಡ್ಲರ್‌ಗಳು ಸಿಸಿಬಿ ಬಲೆಗೆ ಬಿದ್ದಿದ್ದಾರೆ.
ಬನಶಂಕರಿಯ ರಾಹುಲ್ ಹಾಗೂ ದರ್ಶನ್ ಬಂಧಿತರು. ಆರೋಪಿಗಳಿಂದ 50 ಲಕ್ಷ ಮೌಲ್ಯದ 1,000 ಎಲ್‌ಎಸ್‌ಡಿ ಪೇಪರ್ ಸ್ಟ್ರಿಫ್ಸ್ ಗಳು, ಎರಡು ಮೊಬೈಲ್‌ಗಳು ಹಾಗೂ 16,000 ವಶಪಡಿಸಿಕೊಳ್ಳಲಾಗಿದೆ. ಡಾರ್ಕ್ ನೆಟ್ ಬಳಸಿ ವಿದೇಶಗಳಿಂದ ಡ್ರಗ್ಸ್‌ಗಳನ್ನು ತಂದು ನಗರದಲ್ಲಿ ರಾಹುಲ್ ಹಾಗೂ ಆತನ ಸಹಚರ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಟ್ರಾವೆಲ್ಸ್ ಏಜೆನ್ಸಿ ಸೋಗಲ್ಲಿ ಡ್ರಗ್ಸ್ ಮಾಫಿಯಾ: 32 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ
ರಾಹುಲ್ ವೃತ್ತಿಪರ ಪೆಡ್ಲರ್ ಆಗಿದ್ದು, ಆತನ ಮೇಲೆ ಚನ್ನಮ್ಮನಕೆರೆ ಅಚ್ಚುಕಟ್ಟು ಸೇರಿದಂತೆ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಸಿಸಿಬಿ ಪೊಲೀಸರೇ ಆತನನ್ನು ಸೆರೆ ಹಿಡಿದು ಜೈಲಿಗೆ ಕಳುಹಿಸಿದ್ದರು. ಜಾಮೀನು ಪಡೆದು ಹೊರ ಬಂದು ಮತ್ತೆ ತನ್ನ ದಂಧೆಯಲ್ಲಿ ಆತ ನಿರತರಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ