ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ ಪೊಲೀಸರು
ಮೈಸೂರು(ಆ.31): ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರವೆಸಗಿದೆ ಘಟನೆ ನಗರದ ವಿವಿ ಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಕಾಮುಕರು ಪೈಶಾಚಿಕ ಕೃತ್ಯವೆಸಗಿದ್ದಾರೆ.
ಬಾಲಕಿ ಅನಾರೋಗ್ಯಕ್ಕೆ ಒಳಗಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತ ಬಾಲಕಿ ತೀವ್ರ ಜ್ವರದಿಂದ ಬಳಲುತ್ತಿದ್ದಾಳೆ. ಹೀಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಯನ್ನ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
8 ವರ್ಷದ ಪಾಕ್ ಹಿಂದೂ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕಣ್ಣು ಕಿತ್ತ ದುರುಳರು!
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಘಟನೆ ಸಂಬಂಧ ಪೋಕ್ಸೋ ಕಾಯ್ದೆ ಪ್ರಕಾರ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಮೈಸೂರಿನ ವಿವಿಪುರಂ ಪೊಲೀಸರು ತನಿಖೆಯನ್ನ ಆರಂಭಿಸಿದ್ದಾರೆ.