ಬೆಳ್ಳಂಬೆಳಗ್ಗೆ ಕುಣಿಗಲ್ ಬಳಿ ಭೀಕರ ಅಪಘಾತ: ರಾಯಚೂರು ಮೂಲದ ಇಬ್ಬರು ಸಾವು, ನಾಲ್ವರಿಗೆ ಗಾಯ

By Ravi Janekal  |  First Published May 25, 2023, 11:33 AM IST

ನಿಂತಿದ್ದ ಬಸ್‌ಗೆ ಟೆಂಪೋ ಟ್ರಾವಲ್ಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ಕು ಮಂದಿ ಗಾಯಗೊಂಡಿರುವ ದುರ್ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ರಾಜ್ಯ ಹೆದ್ದಾರಿ 33 ಹುಲಿಯೂರುದುರ್ಗ ಹೋಬಳಿ ಡಿ.ಹೊಸಹಳ್ಳಿ ಗ್ರಾಮದ ಬಳಿ ನಡೆದಿದೆ.


ತುಮಕೂರು (ಮೇ.25) : ನಿಂತಿದ್ದ ಬಸ್‌ಗೆ ಟೆಂಪೋ ಟ್ರಾವಲ್ಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ಕು ಮಂದಿ ಗಾಯಗೊಂಡಿರುವ ದುರ್ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ರಾಜ್ಯ ಹೆದ್ದಾರಿ 33 ಹುಲಿಯೂರುದುರ್ಗ ಹೋಬಳಿ ಡಿ.ಹೊಸಹಳ್ಳಿ ಗ್ರಾಮದ ಬಳಿ ನಡೆದಿದೆ.

ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿ ಟಿಟಿ ಚಾಲಕ ವೀರೇಶ್ (30), ಶಶಿಕಲಾ (69) ಮೃತಪಟ್ಟಿದ್ದು, ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ, ಪ್ರತೀಕ್ಷಾ ಗಾಯಗೊಂಡಿದ್ದಾರೆ. ಗಾಯಾಳುಗಳು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Latest Videos

undefined

ಬಸವಕಲ್ಯಾಣ: ರಸ್ತೆ ಅಪಘಾತದಲ್ಲಿ ಪತಿ-ಪತ್ನಿ ಸಾವು, ಮಗು ಬಚಾವ್‌

ಶಶಿಕಲಾ ಹಾಗೂ ಅವರ ಕುಟುಂಬದ 11 ಮಂದಿ ಸಿಂಧನೂರಿನಿಂದ ಮೈಸೂರು ಜಿಲ್ಲೆ ಪ್ರವಾಸಕ್ಕೆಂದು ಬುಧವಾರ ರಾತ್ರಿ 10 ಗಂಟೆಗೆ ಹೊರಟಿದ್ದರು. ಕುಣಿಗಲ್ ಮಾರ್ಗವಾಗಿ ಮೈಸೂರಿಗೆ ಹೋಗುವ ಸಂದರ್ಭ ಗುರುವಾರ ಬೆಳಗ್ಗೆ ಡಿ.ಹೊಸಹಳ್ಳಿ ಗ್ರಾಮದ ಬಳಿ ನಿಂತಿದ್ದ ಖಾಸಗಿ  ಬಸ್ ಗೆ ಟಿಟಿ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಚಾಲಕ ವೀರೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಶಶಿಕಲಾ ಮೃತಪಟ್ಟಿದ್ದಾರೆ.

ಟೈಯರ್‌ ಬ್ಲಾಸ್ಟ್‌ ಆಗಿ ಪ್ಯಾಸೆಂಜರ್‌ ಟೆಂಪೋ ಪಲ್ಟಿ 31 ಪ್ರಯಾಣಿಕರಿಗೆ ಗಾಯ

ಹೊನ್ನಾವರ:  ತಾಲೂಕಿನ ಕಲ್ಲಾಟ ಸಮೀಪ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಗೇರುಸೊಪ್ಪಾ ಕಡೆಯಿಂದ ಹೊನ್ನಾವರ ಕಡೆ ಪ್ರಯಾಣಿಕರನ್ನು ಕರೆತರುತ್ತಿದ್ದ ಪ್ಯಾಸೆಂಜರ್‌ ಟೆಂಪೋ ಟೈಯರ್‌ ಬ್ಲಾಸ್ಟ್‌ ಆಗಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬುಧವಾರ ನಡೆದಿದೆ.

ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ 31 ಮಂದಿಗೂ ಸಣ್ಣಪುಟ್ಟಗಾಯವಾಗಿದೆ. ಗಾಯಾಳುಗಳನ್ನು ಹೊನ್ನಾವರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ರಸ್ತೆ ಮಧ್ಯೆ ಟೆಂಪೊ ಪಲ್ಟಿಯಾಗಿದ್ದರಿಂದ ಕೆಲ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವುಗೊಳಿಸಿದರು. ಸಾರ್ವಜನಿಕರ ಸಹಕಾರದ ಮೇರೆಗೆ ಗಾಯಾಳುಗಳನ್ನು ಆ್ಯಂಬುಲೆನ್ಸ್‌ ಮೂಲಕ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಯಿತು. ಟೆಂಪೋ ಪಲ್ಟಿಯಾದ ಪರಿಣಾಮ ಸಂಪೂರ್ಣ ಜಖಂಗೊಂಡಿದೆ.

ರಾಯಚೂರಿನಲ್ಲಿ ಭೀಕರ ಅಪಘಾತ: ಕಾರ್-ಬೈಕ್‌ ಮಧ್ಯೆ ಡಿಕ್ಕಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

 

ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಕುರಿತು ಹೊನ್ನಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲ್ಲಾಟದ ತಿರುವು ತೀರಾ ಅಪಾಯಕಾರಿಯಾಗಿದ್ದು, ಅವೈಜ್ಞಾನಿಕವಾಗಿದೆ. ಬಹಳಷ್ಟು

click me!