ಬೆಂಗಳೂರು: 40 ಲಕ್ಷ ರು. ಮೌಲ್ಯದ 80 ವಜ್ರದ ಹರಳು ವಶ

Published : Sep 03, 2020, 07:25 AM IST
ಬೆಂಗಳೂರು: 40 ಲಕ್ಷ ರು. ಮೌಲ್ಯದ 80 ವಜ್ರದ ಹರಳು ವಶ

ಸಾರಾಂಶ

ಸಿ.ಟಿ.ಮಾರ್ಕೆಟ್‌ನಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿಗಳು| ಹರಳುಗಳ ಮೂಲದ ಪತ್ತೆಗೆ ಶೋಧನೆ| ತಲೆಮರೆಸಿಕೊಂಡಿರುವ ಮತ್ತೊಬ್ಬನ ಪತ್ತೆಗೆ ಬಲೆ ಬೀಸಿದ ಪೊಲೀಸರು| 

ಬೆಂಗಳೂರು(ಸೆ.03): ಅಕ್ರಮವಾಗಿ ವಜ್ರದ ಹರಳುಗಳನ್ನು ಮಾರಾಟಕ್ಕೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಸಿಟಿ ಮಾರ್ಕೆಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ತಾಲೂಕಿನ ಬಲ್ನಾಡ್‌ ಗ್ರಾಮದ ರವಿಕುಮಾರ್‌, ಬೆಳ್ತಂಗಡಿ ತಾಲೂಕಿನ ಅರಂಬೋಡಿ ಪ್ರವೀಣ್‌ ಕುಮಾರ್‌ ಹಾಗೂ ಸುಧೀರ್‌ ಬಂಧಿತರಾಗಿದ್ದು, ಆರೋಪಿಗಳಿಂದ 40 ಲಕ್ಷ ಮೌಲ್ಯದ 80 ವಜ್ರದ ಹರಳು ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ತಲೆಮರೆಸಿಕೊಂಡಿರುವ ಮತ್ತೊಬ್ಬನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಕೃಷಿ ಮಾರಾಟ ಮಂಡಳಿ 50 ಕೋಟಿ ವಂಚನೆ ಕೇಸ್‌: ಕಿಂಗ್‌ಪಿನ್‌ ಬಂಧನ

ಸಿ.ಟಿ.ಮಾರ್ಕೆಟ್‌ ಹತ್ತಿರ ಮಂಗಳವಾರ ರಾತ್ರಿ ಆರೋಪಿಗಳು ಅನುಮಾನಾಸ್ಪದವಾಗಿ ಓಡಾತ್ತಿದ್ದರು. ಆಗ ಅದೇ ವೇಳೆ ಗಸ್ತಿನಲ್ಲಿದ್ದ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಹರಳು ಮಾರಾಟ ಯತ್ನ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್‌ ಪಾಟೀಲ್‌ ತಿಳಿಸಿದ್ದಾರೆ.

ಮಾರಾಟ ಮಾಡಿಕೊಡುವಂತೆ ಪರಿಚಿತನೋರ್ವ ಆರೋಪಿಗಳಿಗೆ ಹರಳುಗಳನ್ನು ನೀಡಿದ್ದು, ಹರಳು ಮಾರಾಟವಾದರೆ ಹಣ ಸಿಗಲಿದೆ ಎಂಬ ಕಾರಣಕ್ಕೆ ಆರೋಪಿಗಳು ಸಿ.ಟಿ.ಮಾರ್ಕೆಟ್‌ ಹತ್ತಿರದ ಚಿನ್ನದ ವ್ಯಾಪಾರಿಗಳ ಸಂಪರ್ಕಕ್ಕೆ ಯತ್ನಿಸಿದ್ದರು. ಅಷ್ಟರಲ್ಲಿ ಸಿಕ್ಕಿಬಿದ್ದಿದ್ದಾರೆ. ಈಗ ತಲೆಮರೆಸಿಕೊಂಡಿರುವ ವ್ಯಕ್ತಿಗೆ ತನಿಖೆ ನಡೆದಿದೆ. ಈ ಹರಳುಗಳ ಬಗ್ಗೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳಿಗೆ ಕೂಡಾ ಮಾಹಿತಿ ನೀಡಲಾಗಿದೆ. ಹರಳುಗಳ ಮೂಲದ ಪತ್ತೆಗೆ ಶೋಧನೆ ಮುಂದುವರೆಸಲಾಗಿದೆ ಎಂದು ಡಿಸಿಪಿ ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ
Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!