
ದಾವಣಗೆರೆ(ಜು.30): ಸಹೋದರಿಯರಿಬ್ಬರ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ನಗರದ ಹೊರವಲಯದ ಆಂಜನೇಯ ಕಾಟನ್ ಮಿಲ್ ಬಳಿ ಇಂದು(ಶುಕ್ರವಾರ) ನಡೆದಿದೆ. ಗೌರಮ್ಮ (34) ಹಾಗೂ ರಾಧಮ್ಮ (32) ಸಾವನ್ನಪ್ಪಿರುವ ಸಹೋದರಿಯರಾಗಿದ್ದಾರೆ.
ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿದ್ದು, ಕೆಟ್ಟ ವಾಸನೆ ಬಂದ ಹಿನ್ನೆಲೆಯಲ್ಲಿ ಘಟನೆ ನಡೆದು ಮೂರರಿಂದ ನಾಲ್ಕು ದಿನಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಯಾರೋ ದುಷ್ಕರ್ಮಿಗಳು ಇವರನ್ನ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹರಪನಹಳ್ಳಿ RTI ಕಾರ್ಯಕರ್ತ ಶ್ರೀಧರ್ ಹತ್ಯೆ ಪ್ರಕರಣ: ಮತ್ತೆ ಮೂವರ ಬಂಧನ
ಮೃತ ಸಹೋದರಿಯರು ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಬೆನಕನಹಳ್ಳಿಯ ಗ್ರಾಮದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಕೆಲ ತಿಂಗಳ ಹಿಂದೆ ಆಂಜನೇಯ ಕಾಟನ್ ಮಿಲ್‌ನಲ್ಲಿ ಕೆಲಸಕ್ಕೆಂದು ಇಬ್ಬರೂ ಸಹೋದರಿಯರು ಸೇರಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನೆ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ