ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ವಾಹನ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.
ರಾಯಚೂರು (ಸೆ.5): ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ವಾಹನ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.
ಸಮರ್ಥ (7) ಹಾಗೂ ಶ್ರೀಕಾಂತ ( 12) ಸಾವು ಮೃತ ಬಾಲಕರು. ಇಂದು ಮುಂಜಾನೆ ನಡೆದಿರುವ ದುರ್ಘಟನೆ ಕಪ್‌ಗಲ್ ನಿಂದ ಮಾನ್ವಿ ಪಟ್ಟಣದತ್ತ ಹೊರಟಿದ್ದ ಶಾಲಾ ವಾಹನ. ಸಿಂಧನೂರು ಕಡೆಯಿಂದ ರಾಯಚೂರು ಕಡೆಗೆ ಹೊರಟಿದ್ದ ಸಾರಿಗೆ ಬಸ್. ಎರಡೂ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.
ರಾಯಚೂರಲ್ಲಿ ಭೀಕರ ಅಪಘಾತ: ಶಿಕ್ಷಕರ ದಿನಾಚರಣೆಯಂದೇ ಕಾಲು ಕಳೆದುಕೊಂಡ ನಾಲ್ವರು ಮಕ್ಕಳು!
ರಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ:
ಅಪಘಾತ ಪ್ರಕರಣ ಮಾಹಿತಿ ಪಡೆದ ಜಿಲ್ಲಾಧಿಕಾರಿ ನಿತೀಶ್ ಕೆ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತರಾಗಿದ್ದಾರೆ. ಇನ್ನೂ ಮೂವರ ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 40 ವಿದ್ಯಾರ್ಥಿಗಳ ಪೈಕಿ 17 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಅದೇ ರೀತಿ ಅಪಘಾತದಲ್ಲಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಜಿಲ್ಲಾಧಿಕಾರಿ. ಗಾಯಗೊಂಡ ಮಕ್ಕಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಎಲ್ಲ ರೀತಿಯಲ್ಲೂ ವೈದ್ಯರು ಚಿಕಿತ್ಸೆ ನೀಡಲಿದ್ದಾರೆ ಎಂದರು.