
ಬೆಂಗಳೂರು(ಜ.09): ನಗರದಲ್ಲಿ ಮನೆ ಕೆಲಸದವರ ಸೋಗಿನಲ್ಲಿ ಚಿನ್ನಾಭರಣ ಕಳವು ಮಾಡಿದ ಚಾಲಾಕಿ ಮಹಿಳೆಯರನ್ನ ಪೊಲೀಸರು ಬಂಧಿಸಿದ್ದಾರೆ. ವನಿತಾ (38) ಹಾಗೂ ಯಶೋಧ(40) ಬಂಧಿತ ಮಹಿಳೆಯರಾಗಿದ್ದಾರೆ. ಇವರು ಮುಂಬೈಯಿಂದ ಬೆಂಗಳೂರಿಗೆ ಬಂದು ಚಿನ್ನಾಭರಣ ಕಳವು ಮಾಡುತ್ತಿದ್ದರು.
ದೊಡ್ಡಕನ್ನಹಳ್ಳಿಯ SJR ಪ್ಲಾಜಾ ಸಿಟಿಯ ಅಪಾರ್ಟ್‌ಮೆಂಟ್‌ನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಶೇಖರ್ ಎಂಬುವವರ ಮನೆಯಲ್ಲಿ ಕೆಲಸಕ್ಕೆ ಸೇರಿಕೊಂಡು ಚಿನ್ನಾಭರಣ ದೋಚಿದ್ದಾರೆ. ಕೆಲಸಕ್ಕೆ ಸೇರಿದ ಮರುದಿನವೇ ಮನೆಯಲ್ಲಿದ್ದ ಚಿನ್ನವನ್ನು ಎಗರಿಸಿದ್ದಾರೆ ಈ ಖರ್ತನಾಕ್ ಕಳ್ಳಿಯರು.
ಕಲಬುರಗಿ: 255 ಗ್ರಾಂ ಚಿನ್ನಾಭರಣ ದೋಚಿದ್ದ ಕಳ್ಳನ ಸೆರೆ
ಈ ಇಬ್ಬರು ಮಹಿಳೆಯರು ದೊಡ್ಡ ದೊಡ್ಡ ಅಪಾರ್ಟ್‌ಮೆಂಟ್ ಬಳಿ ಸುತ್ತಾಡಿ ಸೆಕ್ಯೂರಿಟಿ ಗಾರ್ಡ್ ಮುಖಾಂತರ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. ಬಳಿಕ ಮನೆ ಕೆಲಸಕ್ಕೆ ಸೇರಿಕೊಂಡು ಮನೆಯಲ್ಲಿದ್ದ ಚಿನ್ನಾಭರಣಗಳನ್ನ ಕಳವು ಮಾಡುತ್ತಿದ್ದರು
ಬೆಳ್ಳಂದೂರು ಪೊಲೀಸ್ ಠಾಣೆ ಪೊಲೀಸರು ಇಬ್ಬರು ಮಹಿಳೆಯರನ್ನ ಬಂಧಿಸಿದ್ದಾರೆ. ಬಂಧಿತ ಮಹಿಳೆಯರಿಂದ 127 ಗ್ರಾಂ ತೂಕದ ಚಿನ್ನಾಭರಣವನ್ನ ವಶಕ್ಕೆ ಪಡೆಯಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ