ಇತ್ತೀಚಿನ ದಿನಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಕೊಲೆ, ಮಾರಣಾಂತಿಕ ಹಲ್ಲೆ, ಅತ್ಯಾಚಾರ, ಕಳ್ಳತನಂಥ ಪ್ರಕರಣಗಳು ಹೆಚ್ಚುತ್ತಿದ್ದು ಕಾನೂನು ಸುವ್ಯವಸ್ಥೆ ಮೇಲೆ ಅನುಮಾನ ಮೂಡಿಸುವಂತೆ ಮಾಡಿದೆ. ಕೂಲಿ ಕೆಲಸಕ್ಕೆ ಹೋಗಿದ್ದ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿ ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರಕವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಹೊರವಲಯದ ತಾವರಗೇರಾ ಕ್ರಾಸ್ ಬಳಿ ನಡೆದಿದೆ.
ಕಲಬುರಗಿ (ಏ.7): ಇತ್ತೀಚಿನ ದಿನಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಕೊಲೆ, ಮಾರಣಾಂತಿಕ ಹಲ್ಲೆ, ಅತ್ಯಾಚಾರ, ಕಳ್ಳತನಂಥ ಪ್ರಕರಣಗಳು ಹೆಚ್ಚುತ್ತಿದ್ದು ಕಾನೂನು ಸುವ್ಯವಸ್ಥೆ ಮೇಲೆ ಅನುಮಾನ ಮೂಡಿಸುವಂತೆ ಮಾಡಿದೆ. ಅಲ್ಲದೇ ನಾಗರಿಕರು ಸಹ ಓಡಾಡಲು ಭಯ ಪಡುವಂತಾಗಿದೆ. ಕಳೆದ ವಾರವಷ್ಟೇ ಕಿಡಿಗೇಡಿಗಳು ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು. ಇದೀಗ ಹಾಡಹಗಲೇ ಜಿಲ್ಲೆಯಲ್ಲಿ ಇಬ್ಬರ ಮಹಿಳೆಯರ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕೂಲಿ ಕೆಲಸಕ್ಕೆ ಹೋಗಿದ್ದ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿ ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರಕವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಹೊರವಲಯದ ತಾವರಗೇರಾ ಕ್ರಾಸ್ ಬಳಿ ನಡೆದಿದೆ.
undefined
ಪರೀಕ್ಷೆ ಬರೆಯಲು ತಂಗಿಗೆ ಚೀಟಿ ತಂದ ಅಣ್ಣ, ಬಿಡದ್ದಕ್ಕೆ ಪೊಲೀಸ್ ವಿರುದ್ಧ ಹಿಗ್ಗಾಮುಗ್ಗಾ ಥಳಿತ!
ಶರಣಮ್ಮ(51), ಚಂದಮ್ಮ(53) ಹತ್ಯೆಯಾಗಿರುವ ದುರ್ದೈವಿಗಳು. ಕೊಲೆಯಾದವರಿಬ್ಬರೂ ತಾಜ್ ಸುಲ್ತಾನ್ ಪುರ ನಿವಾಸಿಗಳು. ನಗರದ ಗಂಜ್ ಪ್ರದೇಶದಿಂದ ಬಸ್‌ನಲ್ಲಿ ಕೂಲಿ ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಅಟ್ಯಾಕ್ ಮಾಡಿರುವ ದುಷ್ಕರ್ಮಿಗಳು. ಗಂಭೀರವಾಗಿ ಹಲ್ಲೆ ನಡೆಸಿ ಬಳಿಕ ತಲೆಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.