ಸಾರ್ವಜನಿಕ ಶೌಚಾಲಯ ಕುಸಿತ ಪ್ರಕರಣ; ಮೃತರ ಸಂಖ್ಯೆ ಎರಡಕ್ಕೆ ಏರಿಕೆ!

By Ravi Janekal  |  First Published May 18, 2024, 8:18 AM IST

ತಾವರಗೇರಾ ಪಟ್ಟಣದ ಸಾರ್ವಜನಿಕ ಶೌಚಾಲಯ ಕುಸಿದುಬಿದ್ದು ಪ್ರಕರಣದಲ್ಲಿ ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಬಾನು ಬೇಗಂ(40),  ಉಮಾಬಾಯಿ ಬಪ್ಪರಗಿ(35) ಮೃತರು.


ಕೊಪ್ಪಳ (ಮೇ.18): ತಾವರಗೇರಾ ಪಟ್ಟಣದ ಸಾರ್ವಜನಿಕ ಶೌಚಾಲಯ ಕುಸಿದುಬಿದ್ದು ಪ್ರಕರಣದಲ್ಲಿ ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

ತಾವರಗೇರಾ ಪಟ್ಟಣದ 5ನೇ ವಾರ್ಡ್‌ನಲ್ಲಿರುವ ಸಾರ್ವಜನಿಕ ಶೌಚಾಲಯ. ನಿನ್ನೆ ರಾತ್ರಿ ಶೌಚಕ್ಕೆ ಹೋಗಿದ್ದ ಸಂದರ್ಭದಲ್ಲಿ ಏಕಾಏಕಿ ಶೌಚಾಲಯದ ಕಟ್ಟಡ ಕುಸಿದುಬಿದ್ದಿತ್ತು. ಈ ವೇಳೆ ಸ್ಥಳದಲ್ಲೇ ಬಾನು ಬೇಗಂ(40) ಮೃತಪಟ್ಟಿದ್ದರು. ಕಟ್ಟಡದ ಅವಶೇಷದಡಿ ಮೂವರು ಮಹಿಳೆಯರು ಸಿಲುಕಿದ್ದರು. ಅವರನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಉಮಾಬಾಯಿ ಬಪ್ಪರಗಿ(35) ಸಹ ಮೃತರಾಗಿದ್ದಾರೆ.

Latest Videos

undefined

ಸಾರ್ವಜನಿಕ ಶೌಚಾಲಯ ಕುಸಿದುಬಿಳಲು ಕಳಪೆ ಕಟ್ಟಡ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಜೊತೆಗೆ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

'ವಿಜಯದಾಸರು' ಚಿತ್ರದ ಸಹ ನಟ ವಿಜಯ್ ಹೇರೂರು ಹೃದಯಾಘಾತದಿಂದ ನಿಧನ 

ಮುನಿರಾಬಾದ್‌ ಬಳಿ ಟ್ರ್ಯಾಕ್ಟರ್‌-ಬಸ್‌ ಡಿಕ್ಕಿ, ಮೂವರ ಸಾವು

ಮುನಿರಾಬಾದ್: ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್‌ನಲ್ಲಿ ಮರಳುತ್ತಿದ್ದ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಶುಕ್ರವಾರ ಸಂಜೆ 9.15ಕ್ಕೆ ಇಲ್ಲಿನ ಸಮೀಪದ ರಿಲಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ ಭೀಕರ ರಸ್ತೆ ಅಪಘಾತ ನಡೆದಿದೆ.

ಕರಮುಡಿ ಗ್ರಾಮದ ಬಸವರಾಜ (22), ಮುತ್ತಪ್ಪ (22) ಹಾಗೂ ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ಕೊಂಡಪ್ಪ ತಿಮ್ಮಾಪುರ (60) ಮೃತಪಟ್ಟವರು. ಎಂಟು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕೊಪ್ಪಳದ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಅಂದಗೆಟ್ಟ ದೇಹ: ಆಧಾರವಿಲ್ಲದೆ ಜೀವನವೇ ದುಸ್ತರ, ಕರುಣಾಜನಕ ಸ್ಥಿತಿಯಲ್ಲಿರುವ ಯುವಕ..!

ಶುಕ್ರವಾರ ಪ್ರಯುಕ್ತ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮಸ್ಥರು ಹುಲಿಗೆಮ್ಮ ದೇವಿ ದರ್ಶನಕ್ಕೆ ಆಗಮಿಸಿದ್ದರು. ದರ್ಶನ ಮುಗಿಸಿಕೊಂಡು ತಮ್ಮ ಗ್ರಾಮಕ್ಕೆ ಟ್ರ್ಯಾಕ್ಟರ್‌ನಲ್ಲಿ ಮರಳುತ್ತಿರುವಾಗ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್ ಪಲ್ಟಿಯಾಗಿ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ 15 ಜನರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಎಂಟು ಜನರು ಗಾಯಗೊಂಡಿದ್ದು, ಅವರನ್ನು ಕೊಪ್ಪಳ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

click me!