
ಬೆಳಗಾವಿ, (ಮೇ.25): ಕಾರು ಹರಿದು ಮಹಿಳೆಯರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಮಾರಿಹಾಳ್ ಪೊಲೀಸ್ ಠಾಣೆ ವ್ಯಾಪ್ತಿಯ ಮುಥಗಾ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಸವಿತಾ ಪಾಟೀಲ್ (43) ಮತ್ತು ವಿದ್ಯಾ ಪಾಟೀಲ್ (54) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಪಾದಚಾರಿ ಶಾಂತಾ ಚೌಗಲ್ ಮತ್ತು ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಸಕ ಸಿ.ಟಿ. ರವಿ ಕಾರು ಅಪಘಾತ : ಇಬ್ಬರು ದುರ್ಮರಣ
ಮಹಿಳೆಯರು ನಿನ್ನೆ (ಭಾನುವಾರ) ರಾತ್ರಿ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಅವರ ಮೇಲೆ ಹರಿದಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಿಜೆಪಿ ಯುವ ಮೋರ್ಚದ ಮುಖಂಡ ಯುವರಾಜ ಜಾಧವ್ ಅವರ ಕಾರು ವಾಕ್ ಮಾಡುತ್ತಿದ್ದವರಿಗೆ ಡಿಕ್ಕಿ ಹೊಡೆದು ಹಾಗೇ ಮುಂದೆ ಹೋಗಿ ಮನೆಗೆ ಗುದ್ದಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಗ್ರಾಮೀಣ ಎಸಿಪಿ ಶಿವಾರೆಡ್ಡಿ, ಇನ್ಸ್‌ಪೆಕ್ಟರ್ ವಿಜಯಕುಮಾರ ಶಿನ್ನೂರ ಭೇಟಿ ನೀಡಿ ಪರಿಶೀಲಿಸಿದರು. ಮಾರಿಹಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ