Udaipur Kanhaiya Lal Murder: ಕನ್ಹಯ್ಯಾ ಲಾಲ್ ಹತ್ಯೆಗೆ ವಿರೋಧಿಸಿ ರಾಜ್ಯಾದ್ಯಂತ ಹಿಂದೂ ಪರ ಸಂಘನೆಗಳು, ಟೇಲರ್ ಅಸೋಸಿಯೇಷನ್‌ಗಳು ಪ್ರತಿಭಟನೆ ಹಮ್ಮಿಕೊಂಡಿದ್ದವು, ಎಲ್ಲೆಲ್ಲಿ ಏನೆನಾಯ್ತು? ಇಲ್ಲಿದೆ ಮಾಹಿತಿ
ಬೆಂಗಳೂರು (ಜೂ. 30): ರಾಜಸ್ಥಾನದ ಉದಯಪುರದಲ್ಲಿ ನಡೆದ ಕನ್ಹಯ್ಯಾ ಲಾಲ್ ಹತ್ಯೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಗುರುವಾರದಂದು ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಪ್ರವಾದಿ ಮೊಹಮ್ಮದರ ಕುರಿತು ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಆಡಿದ್ದ ಮಾತು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದ ಪೋಸ್ಟ್‌ವೊಂದನ್ನು ಶೇರ್ ಮಾಡಿದ್ದ ಕನ್ಹಯ್ಯಾ ಲಾಲ್ ಎಂಬ ವ್ಯಕ್ತಿಯನ್ನು ರಾಜಸ್ಥಾನದ ಉದಯ್‌ಪುರದಲ್ಲಿ ಇಬ್ಬರು ಧರ್ಮಾಂಧ ವ್ಯಕ್ತಿಗಳು ಐಸಿಸ್ ಮಾದರಿಯಲ್ಲಿ ಶಿರಚ್ಛೇದಗೊಳಿಸಿ ಹತ್ಯೆ ಮಾಡಿದ್ದರು. ಜೊತೆಗೆ ಇಡೀ ಘಟನೆಯನ್ನು ವಿಡಿಯೋ ಮಾಡಿ ಹರಿಯಬಿಟ್ಟಿದ್ದೂ, ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಸಿಕ್ಕರೆ ಅವರನ್ನೂ ಹತ್ಯೆ ಮಾಡುವ ಬೆದರಿಕೆ ಹಾಕಿದ್ದರು.
ಮಂಗಳವಾರ ಮಧ್ಯಾಹ್ನ ನಡೆದ ಈ ಭೀಕರ ಘಟನೆ ಇಡೀ ದೇಶವನ್ನು ತಲ್ಲಣಗೊಳಿಸಿದ್ದು, ಧರ್ಮಾಂಧರ ಕೃತ್ಯದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಘಟನೆ ನಡೆದ ಕೆಲ ಹೊತ್ತಿನಲ್ಲೇ ನೆರೆಯ ರಾಜ್‌ಸಮಂದ್ ಜಿಲ್ಲೆಯಲ್ಲಿ ಆರೋಪಿಗಳಾದ ಮಹಮ್ಮದ್ ರಿಯಾಜ್ ಅಖ್ತಾರಿ ಮತ್ತು ಮಹಮ್ಮದ್ ಎಂಬಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕನ್ಹಯ್ಯಾ ಲಾಲ್ ಹತ್ಯೆಗೆ ವಿರೋಧಿಸಿ ರಾಜ್ಯಾದ್ಯಂತ ಹಿಂದೂ ಪರ ಸಂಘನೆಗಳು ಪ್ರತಿಭಟನೆ ಹಮ್ಮಿಕೊಂಡಿದ್ದವು, ಎಲ್ಲೆಲ್ಲಿ ಏನೆನಾಯ್ತು? ಇಲ್ಲಿದೆ ಮಾಹಿತಿ
ಉತ್ತರಕನ್ನಡ: ರಾಜಸ್ಥಾನದ ಉದಯಪುರದಲ್ಲಿ ಟೈಲರ್‌ನ ಅಮಾನುಷ ಕೊಲೆ ಹಿನ್ನೆಲೆ, ಜಿಲ್ಲೆಯಲ್ಲಿ ಟೈಲರ್‌ಗಳು ಮೌನ ಪ್ರತಿಭಟನೆ ನಡೆಸಿದರು.
ಕುಮಟಾ, ಶಿರಸಿ, ಸಿದ್ಧಾಪುರ ಭಾಗದ ಟೈಲರ್‌ಗಳಿಂದ ಮೌನ ಪ್ರತಿಭಟನೆ ನಡೆಯಿತು. "ನಾನು ಸತ್ಯ ಹೇಳಲ್ಲ, ಹೇಳಿದವರ ಪರ ನಿಲ್ಲುವುದೂ ಇಲ್ಲ", "ನಾನು ಬಡವ, ನನ್ನ ಕುಟುಂಬ ನನ್ನನ್ನೇ ನಂಬಿಕೊಂಡಿದೆ" "ನನ್ನ ಕತ್ತನ್ನು ಸೀಳಬೇಡಿ" ಎಂಬ ಪೋಸ್ಟರ್ ಹಿಡಿಯುವ ಮೂಲಕ ಟೈಲರ್‌ಗಳು ಮೌನ ಪ್ರತಿಭಟನೆ ನಡೆಸಿದರು. ಪೋಸ್ಟರ್ ಮೂಲಕ ದುರ್ಘಟನೆಯನ್ನು ವಿರೋಧಿಸಿರುವ ದರ್ಜಿಗಳು ಮೌನ ಹೋರಾಟ ಮಾಡಿದರು.
ಇದನ್ನೂ ಓದಿ: ಮುಂಬೈ ದಾಳಿ ದಿನಾಂಕವೇ ರಿಯಾಜ್ ಬೈಕ್ ನಂಬರ್, ಕನ್ಹಯ್ಯನ ಕತ್ತು ಕುಯ್ದ ಕತ್ತಿಯನ್ನು ತಾನೇ ತಯಾರಿಸಿದ್ದ!
ಮಂಡ್ಯ: ಉದಯಪುರದಲ್ಲಿ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಮಂಡ್ಯದಲ್ಲೂ ಪ್ರತಿಭಟನೆ ನಡೆಸಲಾಯಿತು. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಹತ್ಯೆ ಮಾಡಿರುವ ಆರೋಪಿಗಳಿಗೆ ಚಪ್ಪಲಿ ಹಾರ ಹಾಕಿ ಪ್ರತಿಭಟನಾಕಾರರು ಆಕ್ರೊಶ ಹೊರಹಾಕಿದರೂ. ಕನ್ಹಯ್ಯಲಾಲ್ ಹತ್ಯೆಗೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಹತ್ಯೆ ಖಂಡಿಸಿ ಕೆಲ ಕಾಲ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ ಪ್ರತಿಭಟನೆ ನಡೆಸಲಾಯಿತು. ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ರಾಮನಗರ : ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಪ್ರತಿಭಟನೆ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರು ರಾಮನಗರ ಜಿಲ್ಲಾಧಿಕಾರಿ ಕಛೇರಿ ಎದರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ನೂರಾರು ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರು ಭಾಗಿಯಾಗಿದ್ದರು. ರಾಜಸ್ತಾನ ಸರ್ಕಾರ ವಿರುದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು , ಕೊಲೆಗಡುಕರನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದ್ದಾರೆ.
ಬೆಳಗಾವಿ: ಟೇಲರ್ ಕನ್ಹಯ್ಯಲಾಲ್ ಹತ್ಯೆಗೆ ಖಂಡಿಸಿ, ಬೆಳಗಾವಿಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರತಿಭಟನೆ ನಡೆಸಿದೆ. ಕಾರ್ಯಕರ್ತರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಿದ್ದು, ಕನ್ಹಯ್ಯಲಾಲ್ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ವಿಹೆಚ್‌ಪಿ ಮುಖಂಡ ಕೃಷ್ಣ ಭಟ್, ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್, ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಸೇರಿ ಹಲವರು ಭಾಗಿಯಾಗಿದ್ದರು.
ಇದನ್ನೂ ಓದಿ: ಇಂದು ನನ್ನ ಗಂಡ ನಾಳೆ ಇತರರು, ಹಿಂದೂ ಸಮಾಜಕ್ಕೆ ಕನ್ಹಯ್ಯಾ ಪತ್ನಿ ಎಚ್ಚರಿಕೆ!
200ಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಜಿಹಾದಿಗಳಿ ಧಿಕ್ಕಾರ, ದೇಶದ್ರೋಹಿಗಳಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದ್ದಾರೆ. ಕನ್ಹಯ್ಯಲಾಲ್ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಅಪ್ಡೇಟ್ ಇನು ವಿಶ್ವಹಿಂದೂ ಪರಿಷತ್, ಬಜರಂಗದಳ ಪ್ರತಿಭಟನೆ ಹಿನ್ನೆಲೆ ಭಾರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿತ್ತು.
ಉಡುಪಿ: ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಉಡುಪಿಯಲ್ಲೂ ಬೃಹತ್ ಪ್ರತಿಭಟನೆ ಅಯೋಜಿಸಲಾಗಿತ್ತು. ಹಿಂದೂ ಜಾಗರಣ ವೇದಿಕೆಯಿಂದ ಜಡಿ ಮಳೆಯ ನಡುವೆಯೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಉಡುಪಿಯ ಬೋರ್ಡ್ ಹೈಸ್ಕೂಲ್ ಸಮೀಪದಿಂದ ಅಜ್ಜರಕಾಡು ಹುತಾತ್ಮ ಸ್ಮಾರಕದ ವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿದ್ದು, ಕನ್ಹಯ್ಯ ಲಾಲ್ ಹಂತಕರನ್ನು ಗಲ್ಲಗೇರಿಸುವಂತೆ ಆಗ್ರಹಿಸಲಾಯಿತು.
ನಗರದಾದ್ಯಂತ ಮೆರವಣಿಗೆ ನಡೆಸಿ ಅಜ್ಜರಕಾಡು ಹುತಾತ್ಮವೇದಿಕೆ ಎದುರು ಖಂಡನಾ ಸಭೆ ನಡೆಸಿದೆ. ಪ್ರತಿಭಟನೆಯಲ್ಲಿ ಮಾತಾನಡಿದ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಹಸಂಯೋಜಕ ಸತೀಶ್ ದಾವಣಗೆರೆ " ಹದೀಸ್ ನಲ್ಲಿರುವ ಸತ್ಯ ನೂಪುರ್ ಶರ್ಮಾ ಹೇಳಿದ್ರು, ಸತ್ಯ ಒಪ್ಪದ ಧರ್ಮ ಅದು ಇಸ್ಲಾಂ, ಯಹೂದಿಗಳಿಗೆ ಎರಡು ಸಾವಿರ ವರ್ಷಗಳ ಕಾಲ ಉಳಿಗಾಲ ಕೊಟ್ಟ ಜಾಗ ನನ್ನ ಭಾರತ, ಹದೀಸ್ ಹಾಗೂ ಕುರಾನ್ ಪಂತಾಹ್ವಾನದ ಮೇಲೆ ಚರ್ಚೆಯಾದರೆ ಈ ಸತ್ಯ ಹೊರಬರುವ ಭಯವಿದೆ, ಈ ಭಯದಿಂದಲೇ ಹಿಂದೂಗಳನ್ನ ಹತ್ಯೆ ಮಾಡುತ್ತಿದ್ದಾರೆ" ಎಂದರು.
ಕೊಡಗು: ಕನ್ಹಯ್ಯ ಲಾಲ್ ಹತ್ಯೆ ವಿರೋಧಿಸಿ ಹಿಂದೂ ಸಂಘಟನೆಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದವು. ವಿಶ್ವ ಹಿಂದೂ ಪರಿಷತ್ ಭಜರಂಗದಳ, ಹಿಂದೂಜಾಗರಣ ವೇದಿಕೆ ಸೇರಿದಂತೆ ಇತರ ಸಂಘನೆಗಳು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತದಲ್ಲಿ ಪ್ರತಿಭಟನೆ ನಡೆಸಿದವು. ಈ ವೇಳೆ ನೂರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಭಾಗಿಯಾದ್ದರು. ಹಿಂದೂ ಪರ ಕಾರ್ಯಕರ್ತರು ಅರೋಪಿಗಳ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.
ಹಾಸನ: ರಾಜಸ್ಥಾನದಲ್ಲಿ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಹಾಸನದಲ್ಲಿಯೂ ಹಿಂದೂ ಪರ ಕಾರ್ಯಕರ್ತರು ಪ್ರತಿಭಟಿಸಿದರು. ಹಾಸನದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಸಾಗಿ ಎನ್.ಆರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು. ಹಿಂದೂ ಪರ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು. ಮೆರವಣಿಗೆಯಲ್ಲಿ ನೂರಾರು ಹಿಂದೂ ಪರ ಕಾರ್ಯಕರ್ತರು ಭಾಗಿಯಾಗಿದ್ದು, ಎನ್.ಆರ್ ವೃತ್ತದಲ್ಲಿ ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಟೇಲರ್ ಹತ್ಯೆ ಅರೋಪಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿದರು.
"ಈ ಹಿಂದೆ ಹಲವಾರು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ, ಹಿಂದೂಗಳು ಈಗಲಾದರೂ ಎಚ್ಚೆತ್ತುಕೊಳ್ಳಬೇಕು, ಮುಸ್ಲಿಂರ ವಿರುದ್ಧ ಆರ್ಥಿಕ ನಿರ್ಬಂಧ ಹೇರಬೇಕು, ಯಾವುದೇ ರೀತಿಯ ವಸ್ತುಗಳನ್ನು ಮುಸ್ಲಿಂರ ಅಂಗಡಿಯಲ್ಲಿ ಕೊಳ್ಳಬಾರದು" ಎಂದು ಕಾರ್ಯಕರ್ತರು ಆಗ್ರಹಿಸಿದರು. ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಮುಚ್ಚಿ ವರ್ತಕರು ಪ್ರತಿಭಟನೆಗೆ ಸಾಥ್ ನೀಡಿದರು.
ದಾವಣಗೆರೆ: ಟೈಲರ್ ಕನ್ಯಯ್ಯಲಾಲ್ ಹತ್ಯೆ ಖಂಡಿಸಿ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ದಾವಣಗೆರೆ ಜಯದೇವ ಸರ್ಕಲ್ ನಲ್ಲಿ ಪ್ರತಿಭಟನೆ ನಡೆದಿದ್ದು, ಕರ್ನಾಟಕ ರಾಜ್ಯ ಟೈಲರ್‌ಗಳ ಸಂಘ ಕನ್ಹಯ್ಯಾ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿತು. ಮೃತ ಕನ್ಹಯ್ಯಾ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡುವಂತೆ ಹಾಗೂ ಕನ್ಹಯ್ಯಾ ಕೊಂದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಲಾಯಿತು.
ಇದನ್ನೂ ಓದಿ: ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹಿಂದೂ ವ್ಯಕ್ತಿಯ ಶಿರಚ್ಛೇದ, ಭಾರತಕ್ಕೂ ಕಾಲಿಡ್ತು ಐಸಿಸ್ ಕ್ರೌರ್ಯ
ಧಾರವಾಡ: ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯ ಲಾಲ್ ಹತ್ಯೆ ವಿರೋಧಿಸಿ ಧಾರವಾಡದಲ್ಲಿ ಭಜರಂಗದಳದಿಂದ ಪ್ರತಿಭಟನೆ ನಡೆಸಿತು. ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ನಾನು ಕನ್ಹಯ್ಯ ಎನ್ನುವ ಪತ್ರಗಳನ್ನ ಹಿಡಿದು ಪ್ರತಿಭಟನೆ ನಡೆಸಲಾಯುತು. ಧಾರವಾಡದ ವಿವೇಕಾನಂದ ವೃತ್ತದಲ್ಲಿ ಧರಣಿ ಹಿಂದೂ ಕಾರ್ಯಕರ್ತರು ಧರಣಿ ನಡೆಸಿದ್ದು, ಘಟನೆ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಜನ ಭಾಗವಹಿಸಿದ್ದು ಘಟನೆಗೆ ಕಾರಣರಾದ ಯುವಕರನ್ನ ಗಲ್ಲಿಗೇರಿಸುವಂತೆ ಒತ್ತಾಯಿಸಲಾಯಿತು.
ಹುಬ್ಬಳ್ಳಿ: ಕನ್ಹಯ್ಯ ಲಾಲ್ ಶಿರಚ್ಛೇದನಕ್ಕೆ ಖಂಡಿಸಿ ಹುಬ್ಬಳ್ಳಿಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಗಿದ್ದು ಹಿಂದೂ ಪರ ಕಾರ್ಯಕರ್ತರು ಕೊಲೆಗಡುಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಕಲಬುರಗಿ: ಉದಯಪುರದಲ್ಲಿ ಹಿಂದೂ ವ್ಯಕ್ತಿಯ ಕತ್ತು ಕೊಯ್ದು ಹತ್ಯೆ ಪ್ರಕರಣ ವಿರೋಧಿಸಿ ಕಲಬುರಗಿಯಲ್ಲೂ ಆಕ್ರೋಶ ಭುಗಿಲೆದ್ದಿದೆ. ಹಿಂದೂ ಪರ ಸಂಘಟನೆಗಳಿಂದ ನಗರದ ಎಸ್ ವಿಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿವೆ. ಪ್ರತಭಟನಾಕಾರರು ಹಂತಕರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಾಹಿದ್ದಾರೆ. ಹಿಂದೂ ರಕ್ಷಕ ಶಿವಾಜಿ ಬ್ರಿಗೇಡ್ ಸಂಘಟನೆಯ ಸದಸ್ಯರಿಂದ ಪ್ರತಿಭಟನೆ ನಡೆದಿದ್ದು, ಇಬ್ಬರೂ ಹಂತಕರನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿದ್ದಾರೆ.
ಇನ್ನು ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ಸರ್ಕಲ್ ನಲ್ಲಿ ಪ್ರತಿಭಟನಾಕಾರರು ಕನ್ಹಯ್ಯ ಹಂತಕರ ಪ್ರತಿಕೃತಿ ನೇಣಿಗೇರಿಸಿ ಆಕ್ರೋಶ ಹೊರಹಾಕಿದ್ದಾರೆ. ಮಾನವ ಸರಪಳಿ ರಚಿಸಿ ಬೃಹತ್ ಪ್ರತಿಭಟನೆ ನಡೆಸಲಾಗಿದ್ದು " ಸಮಾಜದಲ್ಲಿ ಶಾಂತಿ ಕದಡುವ ಇಂತಹವರನ್ನು ವಿಚಾರಣೆ ಮಾಡದೇ ಗಲ್ಲಿಗೇರಿಸಬೇಕು, ಹಂತಕರೊಂದಿಗೆ ನಂಟು ಹೊಂದಿರುವ ಎಲ್ಲರನ್ನೂ ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸಬೇಕು" ಎಂದು ಪ್ರತಿಭಟನಾ ನಿರತ ಭಜರಂಗ ದಳದ ಕಾರ್ಯಕರ್ತರ ಆಗ್ರಹಿಸಿದ್ದಾರೆ.
ಬಾಗಲಕೋಟೆ: ಉದಯಪುರ ಟೇಲರ್ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಬಾಗಲಕೋಟೆಯಲ್ಲಿಟೇಲರ್ ಅಸೋಸಿಯೇಶನ್ ಪ್ರತಿಭಟನೆ ನಡೆಸಿದೆ. ನವನಗರದ ಜಿಲ್ಲಾಡಳಿತ ಭವನದ ಎದುರು ನಡೆದ ಪ್ರತಿಭಟನೆ ನಡೆಸಲಾಗಿದ್ದು, ಬಾಗಲಕೋಟೆ ಜಿಲ್ಲೆಯ ಟೇಲರ್‌ಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನಾಕಾರರು ಕನ್ಹಯ್ಯಲಾಲ್ ಅಮರ್ ರಹೇ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.
ಪ್ರಧಾನಿ ಮೋದಿಗೆ ಜೀವ ಬೆದರಿಕೆ ಹಾಕಿದ ಪಾತಕಿಗಳಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದ್ದು, ಪಾತಕಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಕನ್ಹಯ್ಯಲಾಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ, ಮಕ್ಕಳಿಗೆ ಸಕಾ೯ರಿ ನೌಕರಿ ನೀಡಲು ರಾಜಸ್ಥಾನ ಸಕಾ೯ರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಬಾಗಲಕೋಟೆ ಜಿಲ್ಲಾಡಳಿತಕ್ಕೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದ್ದಾರೆ.
ಚಾಮರಾಜನಗರ: ಹಿಂದೂ ವ್ಯಕ್ತಿಯ ಕಗ್ಗೊಲೆ ಖಂಡಿಸಿ, ಚಾಮರಾಜನಗರದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ ನಡೆಸಿವೆ. ನಗರದ ಪ್ರಮುಖ ರಸ್ತೆಗಳಲ್ಲು ಪ್ರತಿಭಟನಾ ಮೆರವಣಿಗೆ ಸಾಗಿದ್ದು, ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನಕಾರರು ಧರಣಿ ನಡೆಸಿದ್ದಾರೆ. ದೇಶದಲ್ಲಿ ಗಲಭೆ ಸೃಷ್ಟಿಸಲು ಹುನ್ನಾರ. ಇದು ಭಯೋತ್ಪಾದಕರ ಕೃತ್ಯ ವಿದೇಶಿ ಸಂಘಟನೆಗಳ ಕೈವಾಡ. ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಪ್ರತಿಭಟನಾನಿರತ ಹಿಂದೂ ಸಂಘಟನೆಗಳ ಕಾರ್ಯಕರ್ತರ ಆಗ್ರಹಿಸಿದ್ದಾರೆ. ಪ್ರತಿಭಟನೆಗೂ ಮೊದಲು ಮೃತ ಹಿಂದೂ ವ್ಯಕ್ತಿಯ ಆತ್ಮ ಕ್ಕೆ ಶಾಂತಿ ಕೋರಿ ಮೌನಾಚರಣೆ ನಡೆಸಲಾಗಿತ್ತು.
ಬಳ್ಳಾರಿ: ರಾಜಸ್ಥಾನದ ಹಿಂದೂ ವ್ಯಕ್ತಿ ಹತ್ಯೆ ಖಂಡಿಸಿ ಸಿರಗುಪ್ಪದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಲಲಾಗಿತ್ತು. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಟೈಲರ್ ಕನ್ಹಯ್ ಲಾಲ್ ಬರ್ಬರ ಹತ್ಯೆಗೆ ಖಂಡಿಸಿರುವ ಸಂಘಟನೆಗಳು, ರಾಜಸ್ಥಾನ ಸರ್ಕಾರ ವಿರುದ್ದ ಆಕ್ರೋಶ ಭದ್ರತೆ ಸಾವು ತಡೆಯುವಲ್ಲಿ ಸರ್ಕಾರದ ವೈಫಲ್ಯ ಎದ್ದು ಕಾಣ್ತಿದೆ, ಹತ್ಯೆ ಆರೋಪಗಳನ್ನು ಸಾರ್ವಜನಿಕವಾಗಿ ಗಲ್ಲಿಗೆ ಹಾಕಬೇಕೆಂದು ಆಗ್ರಹಿಸಿವೆ. ಗಾಂಧಿ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ಕನ್ಹಯ್ ಲಾಲ್ ಅವರಿಗಾಗಿ ಮೌನ ಅಚರಣೆ ಮಾಡಲಾಯಿತು. ಆರೋಪಿಗಳ ಪ್ರತಿಕೃತಿ ದಹನ ಮಾಡಿ ರಾಜಸ್ಥಾನ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ತುಮಕೂರು: ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಿವೆ. ವಿಶ್ವ ಹಿಂದು ಪರಿಷತ್ ಮತ್ತು ಭಜರಂಗ ದಳ ಜಿಲ್ಲಾ ಘಟಕದ ವತಿಯಿಂದ ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಮಾನವ ಸರಪಳಿ ನಿರ್ಮಿಸಿ, ಇಬ್ಬರು ಆರೋಪಿಗಳ ಪ್ರತಿಕೃತಿ ದಹಿಸಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ: ನೂಪುರ್ ಪರ ವ್ಯಾಟ್ಸಾಪ್ ಸ್ಟೇಟಸ್ ಹಾಕಿದ 8 ವರ್ಷದ ಪುತ್ರ, ಬರ್ಬರವಾಗಿ ಹತ್ಯೆಯಾದ ತಂದೆ!
ಯಾದಗಿರಿ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಹತ್ಯೆ ಪ್ರಕರಣ, ಯಾದಗಿರಿಯಲ್ಲಿ ವಿಶ್ವ ಹಿಂದು ಪರಿಷತ್, ಭಜರಂಗದಳ ಕಾರ್ಯಕರ್ತರು ಯಾದಗಿರಿಯ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆದಿಸಿದರು. ಪ್ರತಿಭಟನಾಕಾರರು ಆರೋಪಿಗಳಿಬ್ಬರ ಪ್ರತಿಕೃತಿ ಅಣಕು ಗಲ್ಲಿಗೇರಿಸುವ ಮೂಲಕ ಆಕ್ರೋಶ ಹೊರಹಾಕಿದರು. ಟೈರ್ ಗೆ ಬೆಂಕಿ ಹಚ್ಚಿ ಮಾನವ ಸರಪಳಿ ರಚಿಸಿ ಹಿಂದೂ ಕಾರ್ಯಕರ್ತರು ಆರೋಪಿಗಳನ್ನು ಗಲ್ಲಿಗೇರಿಸಲು ಆಗ್ರಹಿಸಿದರು.
ವಿಜಯಪುರ: ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು ಪ್ರತಿಭಟನೆ. ರಾಜಸ್ಥಾನದಲ್ಲಿ ಹಿಂದೂ ನಾಯಕರ ಬರ್ಭರ ಹತ್ಯೆಯಾಗುತ್ತಿದೆ. ಇಂತಹ ಪ್ರಕರಣದಲ್ಲಿ ಭಾಗಿಯಾದ ಆರೋಪಗಳಿಗೆ ಕಠಿಣ ಶಿಕ್ಷೆ ಕೊಡಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾದ ಅಲ್ಲಿನ ಸರ್ಕಾರ ವಜಾ ಮಾಡಬೇಕು ಎಂದು ಕೇಂದ್ರ ಗ್ರಹ ಸಚಿವರಿಗೆ ಜಿಲ್ಲಾಧಿಕಾರಿಗಳ ಮೂಲಕ ಪ್ರತಿಭಟನಾಕಾರು ಮನವಿ ಮಾಡಿದರು.
ಗದಗ: ರಾಜಸ್ಥಾನದ ಟೈಲರ್ ಕನ್ಹಯ್ಯ ಹತ್ಯೆ ಖಂಡಿಸಿ ಬಜರಂಗ ದಳದಿಂದ ಗದಗ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಧರಣಿ ನಡೆಸಿದರು. ಹತ್ಯೆ ಆರೋಪಿಗಳಾದ ಗೌಸ್ ಮೊಹಮ್ಮದ್, ರಿಯಾಜ್ ಅಖ್ತರ್ ಪ್ರತಿಕೃತಿ ಸುಟ್ಟು ಆಕ್ರೋಶ ಹೊರಹಾಕಲಾಯಿತು. ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಕಾರ್ಯಕರ್ತರು ಹಂತಕರಿಗೆ ಕಠಿಣ ಶಿಕ್ಷೆ ನೀಡುವಂತೆ ಕಾರ್ಯಕರ್ತರ ಆಗ್ರಹಿಸಿದರು.
ಚಿಕ್ಕಮಗಳೂರು: ಟೈಲರ್ ಕನ್ಹಯ್ಯಾ ಕೊಲೆ ಖಂಡಿಸಿ, ಟೈಲರ್ ಅಸೋಸಿಯೇಶನ್ ಗರದ ಅಜಾದ್ ಪಾರ್ಕನಲ್ಲಿ ಪ್ರತಿಭಟನೆ ನಡೆಸಿತು. ಆರೋಪಿಗಳನ್ನ ಗಲ್ಲಿಗೇರಿಸುವಂತೆ ಆಗ್ರಹಿಸಿರುವ ಟೈಲರ್ ಅಸೋಸಿಯೇಶನ, ರಾಜಸ್ಥಾನದ ಕಾಂಗ್ರೆಸ್ ಸರ್ಕಾರ, ಬುದ್ದಿ ಜೀವಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು. ತುಂತುರು ಮಳೆ ನಡುವೆಯೂ ಪ್ರತಿಭಟನೆಯಲ್ಲಿ ನೂರಾರು ಜನರು ಭಾಗಿಯಾಗಿದ್ದು, ಹತ್ಯೆಯ ಹಂತಕರನ್ನ ಗಲ್ಲಿಗೇರಿಸವಂತೆ ಒತ್ತಾಯಿಸಲಾಯಿತು.