ಕಾರ್ಕಳ ಹಿಂದೂ ಯುವತಿಗೆ ಡ್ರಗ್ಸ್ ಕೊಟ್ಟು ಅತ್ಯಾಚಾರವೆಸಗಿದ ಅಲ್ತಾಫ್; ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸರು!

By Sathish Kumar KH  |  First Published Aug 24, 2024, 5:14 PM IST

ಉಡುಪಿ ಜಿಲ್ಲೆಯ ಕಾರ್ಕಳದ ಹಿಂದೂ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಮಾಡಿದ ಅಲ್ತಾಫ್ ಬಗ್ಗೆ ಪೊಲೀಸರು ಇಂಚಿಂಚು ಮಾಹಿತಿ ಬಿಚ್ಚಿಟ್ಟಿದ್ದಾರೆ. 


ಉಡುಪಿ (ಆ.24): ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಹಿಂದೂ ಯುವತಿಯನ್ನು ಕೇವಲ 3 ತಿಂಗಳಲ್ಲಿ ಪುಸಲಾಯಿಸಿದ ಮುಸ್ಲಿಂ ಸಮುದಾಯದ ಯುವಕರಿಬ್ಬರು, ಕಾರಿನಲ್ಲಿ ಪಾರ್ಟಿ ಮಾಡುವುದಾಗಿ ಕರೆದೊಯ್ದು ಬಿಯರ್‌ನಲ್ಲಿ ಡ್ರಗ್ಸ್ ಮಿಶ್ರಣ ಮಾಡಿ ಕೊಟ್ಟು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾರೆ. ಇದರಲ್ಲಿ ಯುವಕ ಅಲ್ತಾಫ್ ಅತ್ಯಾಚಾರ ಮಾಡಿದ್ದು, ಇದು ಗ್ಯಾಂಗ್ ರೇಪ್ ಅಲ್ಲವೆಂದು ಉಡುಪಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಹೇಳಿದ್ದಾರೆ.

ಕಾರ್ಕಳದಲ್ಲಿ ನಡೆದಿರುವ ಅತ್ಯಾಚಾರ ಘಟನೆಯ ಬಗ್ಗೆ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ಅತ್ಯಾಚಾರ ಸಂತ್ರಸ್ತೆಯಾಗಿರುವ ಯುವತಿಗೂ ಅತ್ಯಾಚಾರ ಮಾಡಿದ ಯುವಕನಿಗೂ ಪರಸ್ಪರ ಮೂರು ತಿಂಗಳಿಂದ ಇನ್ ಸ್ಟ್ರಾಗ್ರಾಂ ನಲ್ಲಿ ಪರಿಚಯ ಇತ್ತು. ಆದರೆ, ಸಂತ್ರಸ್ತೆಯ ತಂದೆಯ ಜೊತೆ ಆರೋಪಿಗೆ ಹಲವು ವರ್ಷಗಳ ಪರಿಚಯ ಇತ್ತು. ಇನ್ನು ತಂದೆಗೆ ಆರೋಪಿ ಪರಿಚಯ ಇದ್ದ ಕಾರಣ, ಯುವತಿ ಇನ್‌ಸ್ಟಾಗ್ರಾಮ್‌ ಮೂಲಕ ಪರಿಚಯವಾಗಿದ್ದ ಆರೋಪಿಯ ಕಾರಿನಲ್ಲಿ ಬರಲು ಒಪ್ಪಿಕೊಂಡಿದ್ದಳು. ಆದರೆ, ಆತನ ಇಬ್ಬರು ಸ್ನೇಹಿತರು ಬಂದು ಬಿಯರ್ ಕೊಟ್ಟಿದ್ದರು.

Tap to resize

Latest Videos

undefined

ಬಾಳೆ ಗಿಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಕಾಮತೃಷೆ ತೀರಿಸಿಕೊಂಡು ಕೊಲೆಗೈದನಾ ತೋಟದ ಮಾಲೀಕ!

ಆದರೆ, ಯುವತಿಗೆ ಬಿಯರ್ ಕೊಡುವ ಮೊದಲೇ ಅದರಲ್ಲಿ ಡ್ರಗ್ಸ್ ಮಿಶ್ರಣ ಮಾಡಿ ಕೊಡಲಾಗಿದೆ. ಇದರಿಂದ ಬಿಯರ್ ಸೇವನೆ ಮಾಡುತ್ತಿದ್ದಂತೆಯೇ ಯುವತಿ ಮೂರ್ಚೆ ಹೋಗಿದ್ದಾಳೆ. ನಂತರ ಆಕೆ ಅಮಲಿನಲ್ಲಿರುವುದನ್ನು ದುರ್ಬಳಕೆ ಮಾಡಿಕೊಂಡ ಆರೋಪಿ ಅತ್ಯಾಚಾರ ಮಾಡಿದ್ದಾರೆ. ತಮ್ಮ ಕಾಮತೃಷೆ ತೀರಿಸಿಕೊಂಡ ನಂತರ ನಿನ್ನೆ ಸಂಜೆ 5:30ರ ವೇಳೆಗೆ ಮದ್ಯದ ಅಮಲಿನಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ಮನೆಗೆ ಬಿಟ್ಟು ಹೋಗಿದ್ದಾರೆ. ಆದರೆ, ಯುವತಿಯ ಸ್ಥಿತಿಯನ್ನು ನೋಡಿದ ಮನೆಯವರು ಕೂಡಲೇ ವಿಚಾರಣೆ ಮಾಡಿದಾಗ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾಳೆ.

ಕೂಡಲೇ ಮನೆಯವರು ಯುವತಿಯನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಿದ್ದಾರೆ. ಅಲ್ಲಿ ಚಿಕಿತ್ಸೆ ನೀಡುವ ಮುಂಚೆ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಗ ಯುವತಿ ಕುಟುಂಬಸ್ಥರಿಗೆ ವಿಚಾರಣೆ ಮಾಡಿದಾಗ ಅತ್ಯಾಚಾರ ಆಗಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ಯುವತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಯುತ್ತಿದೆ. ಇನ್ನು ಸಂತ್ರಸ್ತ ಯುವತಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದು ಹೇಳಿಕೆ ಕೊಡುವ ಸ್ಥಿತಿಯಲ್ಲಿಲ್ಲ. ಆದರೆ, ಯಾವ ಮಾದರಿಯ ಡ್ರಗ್ಸ್ ನೀಡಲಾಗಿದೆ ಎಂಬುದರ ಮಾಹಿತಿ ಈವರೆಗೆ ಲಭ್ಯವಾಗಿಲ್ಲ. 

ಡ್ರಗ್ಸ್ ಮಾದರಿಯನ್ನು ಪತ್ತೆ ಮಾಡಲು ಆಸ್ಪತ್ರೆಯಲ್ಲಿ ಯುವತಿಯ ರಕ್ತ ಪರಿಕ್ಷೆ ಮಾಡಿಸಲಾಗುತ್ತಿದ್ದು, ಇನ್ನೂ ವರದಿ ಬಂದಿಲ್ಲ. ರಕ್ತ ಪರೀಕ್ಷೆ ವರದಿ ಬಂದ ಬಳಿಕ ಯಾವ ರೀತಿಯ ಡ್ರಗ್ಸ್ ಅನ್ನೋದು ಗೊತ್ತಾಗುತ್ತದೆ. ನಂತರ, ಮಾದಕ ವಸ್ತುವನ್ನು ಎಲ್ಲಿಂದ ತಂದಿದ್ದರು ಅನ್ನೋದು ನಂತರ ತನಿಖೆ ಮಾಡುತ್ತೇವೆ. ಆದರೆ, ಆತ ಡ್ರಗ್ ಪೆಡ್ಲರ್  ಎಂದು ಈಗಲೇ ಹೇಳಲು ಸಾಧ್ಯವಿಲ್ಲ, ಅಥವಾ ಅದನ್ನು ತಳ್ಳಿ ಹಾಕಲು ಸಾಧ್ಯವಿಲ್ಲ. ಆದರೆ, ಯುವತಿ ಪೋಷಕರ ದೂರಿನ ಪ್ರಕಾರ ಅಲ್ತಾಫ್ ಅತ್ಯಾಚಾರ ಮಾಡಿದ್ದಾನೆ ಎಂಬುದು ತಿಳಿದುಬಂದಿದೆ.

ಕಾರ್ಕಳದ ಹಿಂದೂ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಭುಗಿಲೆದ್ದ ಆಕ್ರೋಶ!

ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯ ಮಾಡಿಕೊಂಡು ಪುಸಲಾಯಿಸಿಕೊಂಡು ಕರೆದುಕೊಂಡು ಹೋದ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಮಾಡಲು ಆತನಿಗೆ ಇಬ್ಬರು ಬಿಯರ್ ತಂದುಕೊಡಲು ಸಹಕಾರ ನೀಡಿದ್ದಾರೆ ಎಂಬುದು ಗೊತ್ತಾಗಿದೆ. ಆದರೆ, ಆತನೊಂದಿಗೆ ಕಾರಿನಲ್ಲಿ ಬೇರೆ ಯಾರಾದರೂ ಹೋಗಿದ್ದರಾ, ಅತ್ಯಾಚಾರ ಮಾಡಿದ್ದರಾ ಎಂಬುದರ ಬಗ್ಗೆ ತನಿಖೆಯಿಂದ ಗೊತ್ತಾಗಬೇಕು. ಇನ್ನು ಎಫ್ಐಆರ್ ಪ್ರಕಾರ ಇದು ಗ್ಯಾಂಗ್ ರೇಪ್ ಅನಿಸುವುದಿಲ್ಲ. ಅತ್ಯಾಚಾರ ಪ್ರಕರಣದ ಬಗ್ಗೆ ದೂರು ಬಂದಿದೆ. ಸಂತ್ರಸ್ತೆ ಈಗ ಹೇಳಿಕೆ ಕೊಡುವ ಸ್ಥಿತಿಯಲ್ಲಿ ಇಲ್ಲ. ಆಕೆಯ ಹೇಳಿಕೆ ಬಂದ ನಂತರ ಪೂರ್ಣವಿವರ ತಿಳಿಯಬಹುದು ಎಂದು ಮಾಹಿತಿ ನೀಡಿದರು.

click me!