Udupi: ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಕಳ್ಳಿಯರ ಕೈಚಳಕ: ಭಕ್ತೆಯ ಬ್ಯಾಗ್‌ನಿಂದ ₹80 ಸಾವಿರ ಕಳವು!

Published : Jul 06, 2026, 06:01 PM IST
Udupi News

ಸಾರಾಂಶ

Udupi: ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿದ್ದಾರೆ.

ಉಡುಪಿ (ಜು.06): ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಮಹಿಳಾ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಹಿಂದೆಯೂ ಹಲವು ಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಏನಿದು ಘಟನೆ?

ಮೂಕಾಂಬಿಕಾ ದೇವಿಯ ದರ್ಶನಕ್ಕೆ ಬಂದಿದ್ದ ನಿಮಿಶಾ ಎಂಬ ಭಕ್ತೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ₹80 ಸಾವಿರ ನಗದು ದೇವಸ್ಥಾನದ ಆವರಣದಲ್ಲೇ ಕಳ್ಳತನವಾಗಿತ್ತು. ಹಣ ಕಾಣೆಯಾಗಿರುವುದು ತಿಳಿದ ಬಳಿಕ ಅವರು ದೇವಸ್ಥಾನದ ಸುತ್ತಮುತ್ತ ಸಾಕಷ್ಟು ಹುಡುಕಾಡಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಬಳಿಕ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಬಂಧಿಸುವಲ್ಲಿ ಯಶಸ್ವಿ

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ದೇವಸ್ಥಾನದ ಸಿಸಿಟಿವಿ ದೃಶ್ಯಾವಳಿ ಹಾಗೂ ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದ ಫೋಟೋಗಳನ್ನು ಪರಿಶೀಲಿಸಿ ತನಿಖೆ ಆರಂಭಿಸಿದರು. ತಾಂತ್ರಿಕ ಮಾಹಿತಿ ಹಾಗೂ ದೃಶ್ಯ ಸಾಕ್ಷ್ಯಗಳ ಆಧಾರದಲ್ಲಿ ಆರೋಪಿಗಳನ್ನು ಕೇವಲ 24 ಗಂಟೆಗಳಲ್ಲೇ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದರು.

ಪೊಲೀಸ್ ತನಿಖೆಯಲ್ಲಿ ಬಹಿರಂಗ

ಬಂಧಿತ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ನಿವಾಸಿಗಳಾದ ನೇತ್ರಾವತಿ, ಶಾರದಾ ಹಾಗೂ ದುರ್ಗಮ್ಮ ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಈಗಾಗಲೇ ಹಲವು ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ದುರ್ಗಮ್ಮ ವಿರುದ್ಧ ಎರಡು ಹಾಗೂ ಶಾರದಾ ವಿರುದ್ಧ ಮೂರು ಪ್ರಕರಣಗಳಿರುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.

ಸುಳಿವು ಸಿಗುವ ಸಾಧ್ಯತೆ

ಪ್ರಸಿದ್ಧ ಯಾತ್ರಾ ಕ್ಷೇತ್ರಗಳಲ್ಲಿ ಭಕ್ತರನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸುತ್ತಿದ್ದ ಈ ಮಹಿಳಾ ತಂಡದ ಬಂಧನದಿಂದ ಮತ್ತಷ್ಟು ಪ್ರಕರಣಗಳ ಸುಳಿವು ಸಿಗುವ ಸಾಧ್ಯತೆ ಇದೆ. ಬಂಧಿತರಿಂದ ಹೆಚ್ಚಿನ ವಿಚಾರಣೆ ನಡೆಸುತ್ತಿರುವ ಕೊಲ್ಲೂರು ಪೊಲೀಸರು, ಇತರ ಜಿಲ್ಲೆಗಳಲ್ಲೂ ಇದೇ ತಂಡದ ಕೈವಾಡವಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಮ ಮಂದಿರದಲ್ಲಿ ಕಳ್ಳತನ ಘಟನೆ: ಭಾಗಿಯಾದವರ ಬಗ್ಗೆ ಶಾಕಿಂಗ್​ ಮಾಹಿತಿ ಬಾಯ್ದಿಟ್ಟ ಆರೋಪಿ
Viral Kiss Video: ಮದುವೆಯಾಗದೇ ಚುಂಬಿಸಿದ್ದಕ್ಕಾಗಿ ಜೋಡಿಗೆ 21 ಛಡಿಯೇಟಿನ ಕ್ರೂರ ಶಿಕ್ಷೆ- ನಾಲ್ಕು ತಿಂಗಳು ಜೈಲು