* ಹೊಟ್ಟೆನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ
* ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ನಡೆದ ಘಟನೆ
* ಗ್ರಾಮದ ನಾಗರಾಜ ಮರಡಿ ಅವರ ಪುತ್ರಿ ಸುಚಿತ್ರಾ ( 17 ) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ .
* ದ್ವಿತೀಯ ವರ್ಷದ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಳು
ಶಿವಮೊಗ್ಗ(ಜು. 31) ಹೊಟ್ಟೆ ನೋವು ತಾಳಲಾರದೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಚಂದ್ರಗುತ್ತಿ ಗ್ರಾಮದ ನಾಗರಾಜ ಮರಡಿ ಅವರ ಪುತ್ರಿ ಸುಚಿತ್ರಾ (17) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸುಚಿತ್ರಾರಿಗೆ ಕೆಲವು ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿತ್ತು.
ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ಮನೆಗೆ ಬಿಎಸ್ ಯಡಿಯೂರಪ್ಪ ಭೇಟಿ
ಪೋಷಕರು ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಸುಚಿತ್ರಾಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಮನೆಯಲ್ಲಿ ಯಾರು ಇಲ್ಲದೇ ಇರುವುದರಿಂದ ಹೊಟ್ಟೆನೋವು ತಾಳಲಾರದೇ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಕೆಲ ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದ್ದು , ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಳು . ಕುಟುಂಬಸ್ಥರು ಕೃಷಿ ಚಟುವಟಿಕೆಗೆ ಹೊಲಕ್ಕೆ ಹೋದ ಸಂದರ್ಭದಲ್ಲಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ . ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.