ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರ, ಕೊಲೆಗೈದು ಪರಾರಿಯಾಗಿದ್ದ ಆರೋಪಿ ಆಟೋ ಚಾಲಕ ಸೆರೆ

By Kannadaprabha NewsFirst Published Mar 2, 2024, 7:05 AM IST
Highlights

ಇತ್ತೀಚೆಗೆ ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿ ಪರಾರಿಯಾಗಿದ್ದ ಆಟೋ ಚಾಲಕನನ್ನು ಸಂಪಂಗಿರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಂಜನಪ್ಪ ಗಾರ್ಡನ್‌ ನಿವಾಸಿ ಮುಬಾರಕ್‌(38) ಬಂಧಿತ ಆರೋಪಿ.

ಬೆಂಗಳೂರು (ಮಾ.2): ಇತ್ತೀಚೆಗೆ ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿ ಪರಾರಿಯಾಗಿದ್ದ ಆಟೋ ಚಾಲಕನನ್ನು ಸಂಪಂಗಿರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಂಜನಪ್ಪ ಗಾರ್ಡನ್‌ ನಿವಾಸಿ ಮುಬಾರಕ್‌(38) ಬಂಧಿತ ಆರೋಪಿ.

ಫೆ.20ರಂದು ಬೆಳಗ್ಗೆ ಕೆ.ಎಚ್‌.ರಸ್ತೆಯ ನಿರ್ಮಾಣ ಹಂತದ ಕಟ್ಟಡದ ಕೆಳಗೆ ಸುಮಾರು 25 ವರ್ಷದ ಅಪರಿಚಿತ ಮಹಿಳೆಯ ಮೃತದೇಹ ಬಿದ್ದಿರುವ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸಂಪಂಗಿರಾಮನಗರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದರು.

ಬೆಂಗಳೂರು: ಮೂವರು ಡ್ರಗ್ಸ್ ಪೆಡ್ಲರ್ ಬಂಧನ; ₹90 ಲಕ್ಷದ ಡ್ರಗ್ಸ್‌ ಜಪ್ತಿ!

ಮೃತದೇಹದ ಮರಣೋತ್ತರ ಪರೀಕ್ಷೆ ವೇಳೆ ದುಷ್ಕರ್ಮಿಗಳು ಅತ್ಯಾಚಾರ ಮಾಡಿ ಬಳಿಕ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರು ಪ್ರಕರಣವನ್ನು ಭೇದಿಸಿ ಆರೋಪಿ ಆಟೋ ಚಾಲಕ ಮುಬಾರಕ್‌ನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆ.ಆರ್‌.ಮಾರ್ಕೆಟ್‌ ಬಳಿ ಪಿಕಾಪ್‌:

ಆರೋಪಿ ಮುಬಾರಕ್‌ ಫೆ.20ರಂದು ತಡರಾತ್ರಿ ಕೆ.ಆರ್‌.ಮಾರುಕಟ್ಟೆ ಬಳಿ ಅಪರಿಚಿತ ಮಹಿಳೆಯನ್ನು ಪರಿಚಯಿಸಿಕೊಂಡು ಆಟೋ ಹತ್ತಿಸಿಕೊಂಡಿದ್ದಾನೆ. ಬಳಿಕ ಸುಮಾರು ಎರಡು ತಾಸು ನಗರದ ವಿವಿಧೆಡೆ ಸುತ್ತಾಡಿಸಿ, ಸಂಪಂಗಿರಾಮನಗರ ಠಾಣಾ ವ್ಯಾಪ್ತಿಯ ಕೆ.ಎಚ್‌.ರಸ್ತೆಯ ನಿರ್ಜನಪ್ರದೇಶದ ನಿರ್ಮಾಣ ಹಂತದ ಕಟ್ಟಡದ 1ನೇ ಮಹಡಿಗೆ ಆ ಮಹಿಳೆಯನ್ನು ಕರೆದುಕೊಂಡು ಬಂದಿದ್ದಾನೆ. ಬಳಿಕ ಬಲವಂತವಾಗಿ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದು, ಬಳಿಕ ಆಕೆಯನ್ನು 1ನೇ ಮಹಡಿಯಿಂದ ಕೆಳಗೆ ನೂಗಿ ಪರಾರಿಯಾಗಿದ್ದಾನೆ. ತಲೆಗೆ ಗಂಭೀರ ಪೆಟ್ಟು ಬಿದ್ದು ಗಾಯಗೊಂಡಿದ್ದ ಮಹಿಳೆ ನರಳಾಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದಾರಿಹೋಕರ ಮಾಹಿತಿ

ನಿರ್ಮಾಣ ಹಂತದ ಕಟ್ಟಡದಲ್ಲಿ ಯಾರೂ ಇರಲಿಲ್ಲ. ಕಳೆದ ಐದು ವರ್ಷಗಳಿಂದ ಕಾಮಗಾರಿ ಅರ್ಧಕ್ಕೆ ನಿಂತಿದೆ. ಹೀಗಾಗಿ ಆ ಭಾಗದಲ್ಲಿ ಸಾರ್ವಜನಿಕರ ಸಂಚಾರ ಕಡಿಮೆ ಇದೆ. ಆದರೂ ಬೆಳಗ್ಗೆ ದಾರಿಹೋಕರು ಕಟ್ಟಡದ ಕೆಳಗೆ ಮಹಿಳೆಯ ಮೃತದೇಹ ಬಿದ್ದಿರುವುದನ್ನು ಗಮನಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲಿಸಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರವಾಗಿರುವುದು ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿ ತನಿಖೆ ಮಾಡಿದ ಸಂಪಂಗಿರಾಮನಗರ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆ ಗುರುತು ಪತ್ತೆಯಾಗಿಲ್ಲ

ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​: ಅಪ್ಪ ಶಾರುಖ್​ ಕುರಿತು ತನಿಖಾಧಿಕಾರಿ ವಾಂಖೆಡೆಯಿಂದ ಭಾರಿ ಹೇಳಿಕೆ!

ಕೊಲೆಯಾದ ಮಹಿಳೆ ಹೆಸರು, ವಿಳಾಸ, ಗುರುತು ಯಾವುದೂ ಪತ್ತೆಯಾಗಿಲ್ಲ. ಆಕೆಗೆ ಸುಮಾರು 25 ವರ್ಷ ಇರಬಹುದು. ಘಟನೆಯನ್ನು ನೋಡಿದಾಗ ಮೇಲ್ನೋಟಕ್ಕೆ ಆಕೆ ಲೈಂಗಿಕ ಕಾರ್ಯಕರ್ತೆಯ ರೀತಿ ಕಂಡು ಬಂದಿದ್ದಾಳೆ. ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರೇ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ನಿಯಮದ ಪ್ರಕಾರ ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ

click me!