
ಬೆಂಗಳೂರು(ಜ.17): ಬಾರ್ ಆ್ಯಂಡ್ ರೆಸ್ಟೋರೆಂಟ್‌ವೊಂದರ ಶೌಚಾಲಯದಲ್ಲಿ ಅಪರಿಚಿತ ವ್ಯಕ್ತಿ 'ನೀನು ಗೇ ನಾ' ಎಂದು ಪ್ರಶ್ನಿಸಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬ್ರಿಗೇಡ್ ರಸ್ತೆಯ ಪ್ಯಾಂಜೋ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಜ.10ರ ರಾತ್ರಿ ಈ ಘಟನೆ ನಡೆದಿದೆ. ಕಾಕ್ ಟೌನ್ ನಿವಾಸಿ ವಿನಯ್ ರೂಪಾನಿ (23) ಹಲ್ಲೆಗೆ ಒಳಗಾದವರು. ಇವರು ನೀಡಿದ ದೂರಿನ ಮೇರೆಗೆ ಅಪರಿಚಿತನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಬೆಂಗಳೂರು: ಅಪಾರ್ಟ್‌ಮೆಂಟಲ್ಲಿ ರೌಡಿಶೀಟರ್ ಹತ್ಯೆ, ತಮಿಳುನಾಡಿಗೆ ಶವ ಸಾಗಣೆ
ಏನಿದು ಘಟನೆ?:
ದೂರುದಾರ ವಿನಯ್ ರೂಪಾನಿ ಜ.10ರಂದು ರಾತ್ರಿ ಸುಮಾರು 10 ಗಂಟೆಗೆ ತನ್ನ ಇಬ್ಬರು ಸ್ನೇಹಿತೆಯರ ಜತೆಗೆ ಬ್ರಿಗೇಡ್ ರಸ್ತೆಯ ಪ್ಯಾಂಜೋ ಬಾರ್ ಆ್ಯಂಡ್ ರೆಸ್ಟೋರೆಂಟ್ ಗೆ ಊಟಕ್ಕೆ ತೆರಳಿದ್ದರು. ಊಟ ಮುಗಿಸಿದ ಬಳಿಕ ವಿನಯ್ ಶೌಚಾಲಯಕ್ಕೆ ತೆರಳಿದ್ದಾರೆ. ಈ ವೇಳೆ ಅಲ್ಲೇ ಇದ್ದ ಅಪರಿಚಿತ ವ್ಯಕ್ತಿ ವಿನಯ್ ಹತ್ತಿರಕ್ಕೆ ಬಂದು 'ನೀನು ಗೇ (ಸಲಿಂಗಿ)ನಾ' ಎಂದು ಪ್ರಶ್ನಿಸಿದ್ದಾನೆ. ಇದಕ್ಕೆ ವಿನಯ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ವೇಳೆ ಆ ಅಪರಿಚಿತ ವ್ಯಕ್ತಿ ವಿನಯ್‌ನನ್ನು ಅಡ್ಡಗಟ್ಟಿ ನೀನು ಗೇನಾ ಎಂದು ಹಲವು ಬಾರಿ ಪ್ರಶ್ನಿಸಿದ್ದಾನೆ.
ಬೆಂಗಳೂರು: ಸರಸಕ್ಕೆ ಪೀಡಿಸಿದ ಮಾವನೆದುರೇ ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ!
ತಲೆಗೆ ಹಲ್ಲೆ:
ಆಗಲೂ ವಿನಯ್ ಯಾವುದೇ ಪ್ರತಿಕ್ರಿಯೆ ನೀಡದೆ ಮುಂದೆ ಹೋಗಲು ಪ್ರಯತ್ನಿಸಿದ್ದಾರೆ. ಈ ವೇಳೆ ಅಪರಿಚಿತ ವ್ಯಕ್ತಿ ವಿನಯ್ ತಲೆ ಮೇಲೆ ಎರಡು ಬಾರಿ ಹೊಡೆದಿದ್ದಾನೆ. ಬಳಿಕ ಗೆಳತಿಯರ ಬಳಿ ಬಂದಿರುವ ವಿನಯ್, ಶೌಚಾಲಯದಲ್ಲಿ ನಡೆದ ಘಟನೆ ಬಗ್ಗೆ ಹೇಳಿಕೊಂಡಿದ್ದಾರೆ. ಈ ವೇಳೆ ಗೆಳತಿಯರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುವ ಮುನ್ನವೇ ಆ ಅಪರಿಚಿತ ವ್ಯಕ್ತಿ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ವಿನಯ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುವ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು, ಅಪರಿಚಿತ ವ್ಯಕ್ತಿಯ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ