* ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಶ್ರೀಕಂಠೇಶ್ವರ ದೇವಾಲಯ
* ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
* ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು
ನಂಜನಗೂಡು(ಸೆ.27): ಅಪರಿಚಿತ ವ್ಯಕ್ತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಶ್ರೀಕಂಠೇಶ್ವರ ದೇವಾಲಯದ(Nanjundeshwara Temple) ಆವರಣದಲ್ಲಿ ಭಾನುವಾರ ನಡೆದಿದೆ
ದೇವಾಲಯದ ದಾಸೋಹ ಭವನದ ಹಿಂಬಂದಿಯಿರುವ ಮರವೊಂದಕ್ಕೆ ಬಟ್ಟೆಯಲ್ಲಿ ನೇಣು ಬಿಗಿದುಕೊಂಡು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ದೇವಾಲಯಕ್ಕೆ ಸೇರಿದ ಆವರಣದಲ್ಲಿ ವ್ಯಕ್ತಿ ಸಾವಿಗೀಡಾದ ಹಿನ್ನೆಲೆಯಲ್ಲಿ ಮೈಲಿಗೆಯಾದ ಕಾರಣ ಕೆಲಕಾಲ ದೇವಾಲಯದಲ್ಲಿ ಅಭಿಷೇಕ ಪೂಜೆ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿತ್ತು.
undefined
ಅಣ್ಣ-ತಮ್ಮ ಇಬ್ಬರೂ ಆತ್ಮಹತ್ಯೆಗೆ ಶರಣು: ಸಾವಲ್ಲೂ ಒಂದಾದ ಸಹೋದರರು
ಶವವನ್ನು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ ನಂತರ ದೇವಾಲಯವನ್ನು ಶುಚಿಗೊಳಿಸಿ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ನಂಜುಂಡೇಶ್ವರನ ಸನ್ನಿಧಿಯಲ್ಲಿ ಪ್ರಾಣತ್ಯಾಗ ಮಾಡಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ಮೂಢನಂಬಿಕೆಯಿಂದಾಗಿ ಆಗಿಂದಾಗೆ ಇಂತಹ ಸಾವಿನ ಪ್ರಕರಣಗಳು ಕಪಿಲಾ ನದಿಯ ಆಸುಪಾಸಿನಲ್ಲಿ ನಡೆಯುತ್ತಲೇ ಇರುತ್ತದೆ. ಘಟನಾ ಸ್ಥಳಕ್ಕೆ ನಂಜನಗೂಡು(Nanjungud) ಪಟ್ಟಣ ಠಾಣೆಯ ಎಸ್‌ಐ ವಿಜಯರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.