
ಲಖನೌ(ನ.18): ಕಳೆದ 10 ವರ್ಷಗಳಿಂದ ಅಪ್ರಾಪ್ತ ಮಕ್ಕಳನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಷ್ಟೇ ಅಲ್ಲದೆ ಆ ಅಶ್ಲೀಲ ವಿಡಿಯೋಗಳನ್ನು ಮಾರಾಟ ಮಾಡುತ್ತಿದ್ದ ಕಿರಾತಕ ಜೂನಿಯರ್ ಎಂಜಿನಿಯರ್ ಒಬ್ಬನನ್ನು ಮಂಗಳವಾರ ಸಿಬಿಐ ಬಂಧಿಸಿದೆ.
ಉತ್ತರ ಪ್ರದೇಶದ ನೀರಾವರಿ ಇಲಾಖೆಯಲ್ಲಿ ಜೂನಿಯರ್ ಇಂಜಿನಿಯರ್ ಆಗಿರುವ ರಾಮ್ ಭಾವನ್ ಎಂಬುವೇ ಈ ಕೃತ್ಯವೆಸಗಿದ ಆರೋಪಿ. ಚಿತ್ರಕೂಟ, ಬಾಂದಾ ಹಾಗೂ ಹಮೀರ್‌ಪುರ ಜಿಲ್ಲೆಯ 5ರಿಂದ 16 ವರ್ಷದೊಳಗಿನ 50 ಮಕ್ಕಳು ಈ ಜಾಲದ ಸಂತ್ರಸ್ತರಾಗಿದ್ದಾರೆ ಎಂದು ಸಿಬಿಐ ಹೇಳಿದೆ.
ವಿದೇಶದಿಂದ ಡ್ರಗ್ಸ್ ತಂದು ಬೆಂಗಳೂರಲ್ಲಿ ಮಾರಾಟ: ನೈಜೀರಿಯನ್ನರ ಬಂಧನ
ಚಿತ್ರಕೂಟ ಮೂಲದ ಆರೋಪಿ ರಾಮ್ ಭಾವನ್ ಸುತ್ತಮುತ್ತಲಿನ ಜಿಲ್ಲೆಗಳಲ್ಲಿನ ಹಣ ಮತ್ತು ಮೊಬೈಲ್ ಸೇರಿದಂತೆ ಇನ್ನಿತರ ವಿದ್ಯುನ್ಮಾನ ಸಲಕರಣೆಗಳನ್ನು ನೀಡುವ ಮೂಲಕ ಬಡ ಮಕ್ಕಳನ್ನು ಈ ದಂಧೆಗೆ ಸೆಳೆಯುತ್ತಿದ್ದ. ಈ ವೇಳೆ ಮಕ್ಕಳನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದ. ಜೊತೆಗೆ, ಈ ವಿಡಿಯೋಗಳನ್ನು ಮೊಬೈಲ್, ಲ್ಯಾಪ್‌ಟಾಪ್, ಪೆನ್‌ಡ್ರೈವ್ ಸೇರಿದಂತೆ ಇನ್ನಿತರ ಸಲಕರಣೆಗಳಲ್ಲಿ ರೆಕಾರ್ಡ್ ಮಾಡಿಟ್ಟುಕೊಂಡು, ಅವುಗಳನ್ನು ಡಾರ್ಕ್ನೆಟ್ ಮೂಲಕ ಮಾರಾಟ ಮಾಡುತ್ತಿದ್ದ ಎಂದಿದೆ ಸಿಬಿಐ.
ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ: ಪಿಎಸ್‌ಐ ಸಸ್ಪೆಂಡ್
ಹೀಗಾಗಿ, ಅವನ ನಿವಾಸದ ಮಂಗಳವಾರ ದಾಳಿ ಮಾಡಿದ ಸಿಬಿಐ 8 ಲಕ್ಷ ರು. ನಗದು, ಮೊಬೈಲ್‌ಗಳು, ಲ್ಯಾಪ್‌ಟಾಪ್‌ಗಳು, ವೆಬ್ ಕ್ಯಾಮೆರಾ, ಪೆನ್‌ಡ್ರೈವ್‌ಗಳು, ಮೆಮೊರಿ ಕಾರ್ಡ್ ಹಾಗೂ ಲೈಂಗಿಕ ಉತ್ತೇಜನಕ್ಕೆ ಬಳಸುವ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಬಿಐ ವಕ್ತಾರ ಆರ್.ಕೆ ಗೌರ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ