ಕ್ಲಿನಿಕಲ್ಲಿ 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೈದ್ಯನ ವಿರುದ್ಧ ಪೋಕ್ಸೋ ಕೇಸ್‌

Published : Sep 14, 2022, 06:19 PM ISTUpdated : Sep 14, 2022, 06:20 PM IST
ಕ್ಲಿನಿಕಲ್ಲಿ 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೈದ್ಯನ ವಿರುದ್ಧ ಪೋಕ್ಸೋ ಕೇಸ್‌

ಸಾರಾಂಶ

Doctor booked for molesting Girl: ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯನ ವಿರುದ್ಧ ಪ್ರಕರಣ ದಾಖಲಾಗಿದೆ 

ಉತ್ತರಪ್ರದೆಶ (ಸೆ.  14): 12 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯನ (Doctor) ವಿರುದ್ಧ ಮೀರತ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ವೈದ್ಯ ಗಗನ್ ಅಗರ್ವಾಲ್ ತಾನು ನಡೆಸುತ್ತಿರುವ ಕ್ಲಿನಿಕ್‌ನಿಂದ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಆರೋಪಿ ವಿರುದ್ಧ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (POCSO) ಕಾಯ್ದೆ ಮತ್ತು ಎಸ್‌ಸಿ-ಎಸ್‌ಟಿ ಕಾಯ್ದೆಯ ( SC-ST Act) ಸೆಕ್ಷನ್‌ಗಳ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಮೂಲಗಳ ಪ್ರಕಾರ, ಗಗನ್ ಅಗರ್ವಾಲ್ ಮೀರತ್‌ನ ಗಂಗಾ ನಗರ ಪ್ರದೇಶದಲ್ಲಿ ತಮ್ಮದೇ ಆದ ಕ್ಲಿನಿಕ್ ನಡೆಸುತ್ತಿದ್ದಾರೆ. ಸೆ.12ರ ಸೋಮವಾರದಂದು 12 ವರ್ಷದ ಬಾಲಕಿಯೊಬ್ಬಳು ಶಿಕ್ಷಕಿಯಾಗಿರುವ ತನ್ನ ತಾಯಿ ಹಾಗೂ ಚಿಕ್ಕಪ್ಪನೊಂದಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದಳು.

ಚಿಕಿತ್ಸೆ ಕೊಡಿಸುವ ನೆಪದಲ್ಲಿ ಕಿರುಕುಳ: ಆರೋಪಿ ಚಿಕಿತ್ಸೆ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ಕ್ಲಿನಿಕ್‌ನ ಕೊಠಡಿಗೆ ಕರೆದೊಯ್ದು ಬಾಲಕಿಯ ಖಾಸಗಿ ಅಂಗಗಳಿಗೆ ಸ್ಪರ್ಶಿಸಿದ್ದರು ಎನ್ನಲಾಗಿದೆ. ಮನೆಗೆ ಬಂದ ಸಂತ್ರಸ್ತ ಬಾಲಕಿ ತನ್ನ ಮನೆಯವರಿಗೆ ಈ ಘಟನೆಯ ಬಗ್ಗೆ ತಿಳಿಸಿದ್ದಾಳೆ. ಬಾಲಕಿಯ ಕುಟುಂಬಸ್ಥರು ಗಂಗಾನಗರ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ.

ತಾಯಿ ತನ್ನ ಪತಿಗೆ ವಿಚ್ಛೇದನ ನೀಡಿದ್ದಾಳೆ ಮತ್ತು ಮೀರತ್‌ನಲ್ಲಿ ತನ್ನ ಹೆತ್ತವರೊಂದಿಗೆ ವಾಸಿಸುತ್ತಿದ್ದಳು ಎಂದು ವರದಿಯಾಗಿದೆ. ಸೋಮವಾರ ಮಧ್ಯಾಹ್ನ 12 ವರ್ಷದ ಬಾಲಕಿ ಜ್ವರ, ವಾಂತಿ ಮತ್ತು ಗಂಟಲು ನೋವಿನಿಂದ ಬಳಲುತ್ತಿದ್ದಳು, ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. 

ಗಂಡನ ಮನೆಗೆ ಬರಲು ಒಲ್ಲೆ ಎಂದ ಪತ್ನಿ ಮೇಲೆ ಫೈರಿಂಗ್‌..!

“ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ. ಅವರ ಚಿಕಿತ್ಸಾಲಯದಲ್ಲಿ ವೈದ್ಯರು ಲಭ್ಯವಿಲ್ಲ. ಕ್ಲಿನಿಕ್‌ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ" ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಕಿರುಕುಳಕ್ಕೆ ಬೇಸತ್ತು ಕೆರೆಗೆ ಬಿದ್ದು ಗೃಹಿಣಿ ಆತ್ಮಹತ್ಯೆ:  ಗಂಡನ ಮನೆಯ ಸಂಬಂಧಿಕರ ಕಿರುಕುಳಕ್ಕೆ ಬೇಸತ್ತು ಗೃಹಿಣಿ ತಮ್ಮ ಹೊಲದಲ್ಲಿನ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ರೋಣ ತಾಲೂಕಿನ ಹೊನ್ನಾಪುರದಲ್ಲಿ ಭಾನುವಾರ ನಡೆದಿದೆ. ಮೃತ ಗೃಹಿಣಿ ರೇಣವ್ವ (ಶಾರದಾ) ಬಸಪ್ಪ ಕುರಿ (38). 

ಮೃತಳ ಗಂಡ ಬಸಪ್ಪನ ಕಿರಿಯ ಸಹೋದರ ಮಹೇಶ ಕುರಿ, ಸಹೋದರ ಹೆಂಡತಿ ರೇಖಾ ಕುರಿ ಮತ್ತು ಸಂಬಂಧಿ ಪ್ರಕಾಶ ಈ ಮೂವರು ನಿರಂತರ ನೀಡುತ್ತಿರುವ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತಳ ಕಿರಿಯ ಸಹೋದರ ರೋಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಸಿಪಿಐ ಶಿವಾನಂದ ವಾಲೀಕಾರ, ಪಿಎಸ್‌ಐ ಚಂದ್ರಶೇಖರ ಹೇರಕಲ್ಲ ಭೇಟಿ ನೀಡಿ ಪರಿಶೀಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ