ಮಹಿಳೆಯ ಮೇಲೆ ಅತ್ಯಾಚಾರ, ಭಜರಂಗದಳದ ಮುಖಂಡನ ಬಂಧನ!

By Santosh Naik  |  First Published Jan 7, 2025, 5:51 PM IST

ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಜರಂಗದಳದ ನಾಯಕ ದಿಲೀಪ್ ಸಿಂಗ್ ಬಜರಂಗಿ ಬಂಧನ. ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ ನಂತರ ಬಂಧನ.


ನವದೆಹಲಿ (ಜ.7): ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಜರಂಗದಳದ ನಾಯಕ ದಿಲೀಪ್ ಸಿಂಗ್ ಬಜರಂಗಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ಇಲ್ಲಿ ತಿಳಿಸಿದ್ದಾರೆ. ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿ ಸೋಮವಾರ ಗೋವಿಂದ್ ನಗರ ಪೊಲೀಸ್ ಠಾಣೆಯ ಹೊರಗೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ನಂತರ ದಿಲೀಪ್ ಸಿಂಗ್ ಬಜರಂಗಿಯನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ (ದಕ್ಷಿಣ) ಮಹೇಶ್ ಕುಮಾರ್ ತಿಳಿಸಿದ್ದಾರೆ. ನವೆಂಬರ್ 5, 2024 ರಂದು, ಭಜರಂಗಿ ತನ್ನೊಂದಿಗೆ ಸ್ನೇಹ ಬೆಳೆಸಿ, ಘಂಟಾಘರ್‌ನ ಹೋಟೆಲ್‌ಗೆ ಕರೆದೊಯ್ದು ಮದುವೆಯ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಕಲೆಕ್ಟರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಕುಮಾರ್ ಮಂಗಳವಾರ ಪಿಟಿಐಗೆ ತಿಳಿಸಿದರು.

ಬಜರಂಗಿ ಅಶ್ಲೀಲ ವೀಡಿಯೋಗಳನ್ನು ಕೂಡ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ತನಿಖೆ ಆರಂಭಿಸಲಾಗಿತ್ತು. ಆದರೆ, ಕಾನ್ಪುರದ ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕರಾಗಿದ್ದ ಬಜರಂಗಿ ಅವರು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿಸಲಾಗಿತ್ತು.

Tap to resize

Latest Videos

ಅಶ್ಲೀಲ ಚಿತ್ರದ ಶೂಟಿಂಗ್ ವೇಳೆ ನಟಿ ಸಾವು, ಸತ್ತು ಎರಡು ತಿಂಗಳಾದ್ರೂ ಮೆಸ್ಸೇಜ್ ಬರ್ತಾನೆ ಇತ್ತು!

ಸೋಮವಾರ, ಬಜರಂಗಿ ತನ್ನ ಬೆಂಬಲಿಗರು ಮತ್ತು ಬಜರಂಗದಳದ ಕಾರ್ಯಕರ್ತರೊಂದಿಗೆ ಗೋವಿಂದ್ ನಗರ ಪೊಲೀಸ್ ಠಾಣೆಗೆ ಆಗಮಿಸಿದರು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಲೈವ್ ಸ್ಟ್ರೀಮ್ ಮಾಡಿ ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್‌ ಠಾಣೆಯ ಹೊರಗೆ ಸಾರ್ವಜನಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನದಿಂದಾಗಿ ಅವರ ಮೇಲೆ ಇನ್ನೊಂದು ಎಫ್‌ಐಆರ್‌ ದಾಖಲು ಮಾಡಲಾಗಿದೆ. ಅತ್ಯಾಚಾರ ಯತ್ನ ಮಾಡುವ ಮೂಲಕ ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ.

ಭಗ್ನಪ್ರೇಮಿಯ ಕ್ರೈಂ ಡೈರಿ: ಬ್ರೇಕಪ್‌ ಮಾಡಿಸಿದವರ ಬಾಳು ಮುಗಿಸಲು ಗಿಫ್ಟ್‌ ಮಾಡಿದ್ದ ವಿಷದ ಲಡ್ಡು!


 

click me!