
ಸಂಭಾಲ್ (ಮೇ 23, 2023): ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಮೇ 16 ರಂದು 45 ವರ್ಷದ ವ್ಯಕ್ತಿಯೊಬ್ಬ ತನ್ನ 12 ವರ್ಷದ ಮಲ ಮಗಳ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಬಾಲಕಿಯ ವೈದ್ಯಕೀಯ-ಕಾನೂನು ಪರೀಕ್ಷೆಯು ಲೈಂಗಿಕ ದೌರ್ಜನ್ಯದ ಸಾಧ್ಯತೆಯನ್ನು ದೃಢಪಡಿಸಿದೆ ಎಂದು ವರದಿಯಾಗಿದೆ. ಅಲ್ಲದೆ, ಪ್ರಾಥಮಿಕ ತನಿಖೆಯ ನಂತರ ಆರೋಪ ನಿಜವೆಂದು ತಿಳಿದು ಬಂದಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ: ಉನ್ನಾವೋ ಗ್ಯಾಂಗ್‌ರೇಪ್ ಕೇಸ್ ಆರೋಪಿಗಳಿಗೆ ಜಾಮೀನು: ಸಂತ್ರಸ್ತೆ ಮನೆಗೆ ಬೆಂಕಿ ಹಚ್ಚಿ ಆಕ್ರೋಶ
ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ತಾಯಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಸುಮಾರು ಐದು ವರ್ಷಗಳ ಹಿಂದೆ ಬಾಲಕಿಯ ತಂದೆ ಮೃತಪಟ್ಟಿದ್ದು, ಆಕೆಯ ತಾಯಿ ಆರೋಪಿಯನ್ನು ಮದುವೆಯಾಗಿದ್ದಾಳೆ. ಇನ್ನು, ಮದುವೆಯ ನಂತರವೂ ಮಹಿಳೆ ತನ್ನ ಮೊದಲ ಗಂಡನ ಮನೆಯಲ್ಲಿ ವಾಸಿಸುತ್ತಿದ್ದಳು. ಬಳಿಕ ಆರೋಪಿಯೂ ಅಲ್ಲಿಗೆ ಸ್ಥಳಾಂತರಗೊಂಡಿದ್ದ ಎಂದೂ ತಿಳಿದುಬಂದಿತ್ತು.
ಮೇ 16ರಂದು ಬಾಲಕಿಯ ತಾಯಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ವೇಳೆ ಆರೋಪಿ ಮಲ ಮಗಳ ಮೇಲೆ ಅತ್ಯಾಚಾರ ಎಸಗಿದ್ದರು. ಮಹಿಳೆ ಹಿಂತಿರುಗಿದಾಗ, ಅಪ್ರಾಪ್ತ ಬಾಲಕಿ ತನಗಾದ ಕಷ್ಟವನ್ನು ವಿವರಿಸಿದಳು. ನಂತರ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾಳೆ.
ಇದನ್ನು ಓದಿ: ಉನ್ನಾವೋ ಗ್ಯಾಂಗ್‌ರೇಪ್ ಕೇಸ್ ಆರೋಪಿಗಳಿಗೆ ಜಾಮೀನು: ಸಂತ್ರಸ್ತೆ ಮನೆಗೆ ಬೆಂಕಿ ಹಚ್ಚಿ ಆಕ್ರೋಶ
ಆದರೆ, ಈ ಕೃತ್ಯ ಎಸಗಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಬಳಿಕ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ. ವರದಿಯ ಪ್ರಕಾರ, ಆತ ಈ ಹಿಂದೆಯೂ ಹಲವಾರು ಬಾರಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು, ಈ ಪ್ರಕರಣದ ವಿವರವಾದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.
ಹರ್ಯಾಣದಲ್ಲಿ ತಾಯಿ ಮೇಲೆ ಅತ್ಯಾಚಾರ ನಡೆಸಿದ್ದ ಮಗ
ಹರ್ಯಾಣದ ಗುರುಗ್ರಾಮ್‌ನ ನ್ಯಾಯಾಲಯವು ತನ್ನ ತಾಯಿಯ ಮೇಲೆ ಅತ್ಯಾಚಾರ ಎಸಗಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧಿಗೆ ಕಳೆದ ತಿಂಗಳು ಆತನ ಜೀವನಪರ್ಯಂತ ಕಠಿಣ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಹರ್ಯಾಣದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಹುಲ್ ಬಿಷ್ಣೋಯ್ ಅವರು ಅಪರಾಧಿಗೆ 20,000 ರೂ. ದಂಡ ವಿಧಿಸಿದ್ದಾರೆ.
ಇದನ್ನೂ ಓದಿ:Crime: ಮೃಗದಂತೆ ಹೆತ್ತ ತಾಯಿ ಮೇಲೆ ಅತ್ಯಾಚಾರ ಮಾಡಿದ ಪಾಪಿ: ಆತ್ಮಹತ್ಯೆ ಮಾಡಿಕೊಂಡ ಸಂತ್ರಸ್ತೆ
ಮಹಿಳಾ ಪಬ್ಲಿಕ್ ಪ್ರಾಸಿಕ್ಯೂಟರ್‌ನ ಮಗನಾಗಿರುವ ಅಪರಾಧಿ ಆಕೆಯನ್ನು ಇತರರಿಂದ ರಕ್ಷಣೆ ಮಾಡಬೇಕಿತ್ತು. ಆದರೆ, ಅವನೇ ತಾಯಿಯನ್ನು ಹಿಂಸೆ ಮಾಡಿ ಮತ್ತು "ಪ್ರಾಣಿಯಂತೆ ವರ್ತಿಸಿ" ಭಯಾನಕ ಕೃತ್ಯ ಎಸಗಿದ್ದಾನೆ. ಈ ಹಿನ್ನೆಲೆ, ಮಹಿಳೆಗೆ ತನ್ನ ಜೀವವನ್ನು ಕಳೆದುಕೊಳ್ಳುವುದನ್ನು ಬಿಟ್ಟು ಬೇರೆ ಯಾವ ಆಯ್ಕೆಯೂ ಇರಲಿಲ್ಲ ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದರು.
ಇದನ್ನೂ ಓದಿ: Crime: ರೇಪ್ ಮಾಡಿ ಮಹಿಳೆಗೆ ಬೆಂಕಿ ಹಚ್ಚಿದ ರಾಕ್ಷಸ: ಆಸ್ಪತ್ರೆಯಲ್ಲಿ ಬಲಿಯಾದ ಸಂತ್ರಸ್ತೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ