
ಬಂಡಾ (ಫೆ.11): ಮಿಷನ್ ಶಕ್ತಿ ಅಭಿಯಾನದ ಅಡಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 9 ವರ್ಷದ ಸೋದರ ಸೊಸೆಯನ್ನು ರೇಪ್ ಮಾಡಿದ ಆರೋಪಿಯ ಮನೆಯನ್ನು ಪೊಲೀಸರು ಬುಲ್ಡೋಜರ್ ಬಳಸಿ ಕೆಡವಿದ್ದಾರೆ. ಉತ್ತರ ಪ್ರದೇಶದ ಬಂಡಾ ಜಿಲ್ಲೆಯ ಕಾಮಾಸಿನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ರೇಪ್ ಮಾಡಿದ್ದ ಕಾರಣಕ್ಕೆ ಸ್ವತಃ ಪೊಲೀಸರೇ ಈ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದಾರೆ. ಫೆ. 8 ರಂದು ಪುಟ್ಟ ಬಾಲಕಿಯನ್ನು ಆತ ರೇಪ್ ಮಾಡಿದ್ದ. ಈಗಾಗಲೇ ಆರೋಪಿಯನ್ನು ಬಂಧಿಸಿ ಪೊಲೀಸರು ಜೈಲಿಗೆ ಅಟ್ಟಿದ್ದಾರೆ. ರೇಪ್ ಮಾಡಿದ ಬಳಿಕ ಸ್ಥಳದಲ್ಲಿದ್ದವರಿಗೆ ಬೆದರಿಕೆ ಹಾಕಿ ಆರೋಪಿ ನಾಪತ್ತೆಯಾಗಿದ್ದ. ಇದರ ಬೆನ್ನಲ್ಲಿಯೇ ಮನೆಯವರು ಪೊಲೀಸ್ ಸ್ಟೇಷನ್‌ನಲ್ಲಿ ದೂರು ದಾಖಲಿಸಿದ್ದರು. ಅದಲ್ಲದೆ, ಸ್ವತಃ ಕುಟುಂಬದವರೇ ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಪೊಲೀಸರಲ್ಲಿ ಮನವಿ ಮಾಡಿದ್ದರು. ಮಹಿಳಾ ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಸರ್ಕಾರ ನಡೆಸುತ್ತಿರುವ ಮಿಷನ್ ಶಕ್ತಿ ಅಭಿಯಾನದ ಅಡಿಯಲ್ಲಿ, 9 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಅಕ್ರಮ ಕಟ್ಟಡದ ಮೇಲೆ ಕಾಮಾಸಿನ್ ಪೊಲೀಸ್ ಠಾಣೆಯ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡು, ಅದನ್ನು ಬುಲ್ಡೋಜರ್ ಬಳಸಿ ಧ್ವಂಸ ಮಾಡಿದ್ದಾರೆ.
ವರದಿಯ ಪ್ರಕಾರ ಬುಧವಾರ ಮಧ್ಯಾಹ್ನ ಸದಾ ಸನಿ ಗ್ರಾಮದ 19 ವರ್ಷದ ಪ್ರದೀಪ್ ಕುಮಾರ್ ರಾಯಿದಾಸ್, 9 ವರ್ಷದ ಬಾಲಕಿಗೆ ಚಾಕಲೆಟ್ ಕೊಡುವ ನೆಪದಲ್ಲಿ ಕೊಟ್ಟಿಗೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಆಕೆಯ ಮೇಲೆ ರೇಪ್ ಮಾಡಿದ್ದಾನೆ. ಇದೇ ಸಮಯದಲ್ಲಿ ಬಾಲಕಿಯ ತಾಯಿ ಕೊಟ್ಟಿಗೆಗೆ ಹೋಗಿದ್ದಾಳೆ. ಪುಟ್ಟ ಬಾಲಕಿಯ ಮೇಲೆ ರೇಪ್ ಮಾಡುತ್ತಿರುವುದುನ್ನು ನೋಡಿ ಕಿರುಚಿಕೊಂಡಿದ್ದಾಳೆ. ತಕ್ಷಣವೇ ಮಗಳೊಂದಿಗೆ ಮನೆಗೆ ಬಂದ ಆಕೆ ಆಗಿರುವ ವಿಚಾರಗಳನ್ನೆಲ್ಲಾ ಕೇಳಿದ್ದಾಳೆ. ಬಳಿಕ ಮನೆಯವರೆಲ್ಲರಿಗೂ ಈ ವಿಚಾರ ತಿಳಿಸಿದ್ದು, ಅದೇ ದಿನ ಪೊಲೀಸರಿಗೆ ದೂರು ಕೂಡ ದಾಖಲಿಸಲಾಗಿತ್ತು. ಪ್ರದೀಪ್ ಕುಮಾರ್ ಇದಕ್ಕೂ ಮುನ್ನ ಸಾಕಷ್ಟು ಬಾರಿ ಆಕೆಯ ಮೇಲೆ ದೌರ್ಜನ್ಯ ಎಸಗಿದ್ದ ಎಂದು ಹೇಳಲಾಗಿದೆ
15 ವರ್ಷದಿಂದ ನಾಪತ್ತೆಯಾಗಿದ್ದ ಕಳ್ಳ ಪೊಲೀಸರಿಗೆ ಸಿಕ್ಕ ರೋಚಕ ಕಥೆ!
ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಿಕೊಂಡ ಕಾಮಾಸಿನ್ ಪೊಲೀಸರು, ಘಟನೆ ನಡೆದ 8 ಗಂಟೆಯಲ್ಲಿಯೇ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 'ಕಾಮಾಸಿನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ' ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ನಿವಾಸ್ ಮಿಶ್ರಾ ತಿಳಿಸಿದ್ದಾರೆ.
Bengaluru: ಪೊಲೀಸರ ಕಿರುಕುಳ ಆರೋಪ: ಲೈವ್ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ ಯತ್ನ
ಆತನನ್ನು ಬಂಧಿಸಿ ಈಗಾಗಲೇ ಜೈಲಿಗೆ ಕಳುಹಿಸಲಾಗಿದೆ. ಇದೇ ಕಾರಣದಲ್ಲಿ ಅವರ ಕುಟುಂಬದ ಅಕ್ರಮ ಮನೆಯನ್ನು ಇಂದು ಕೆಡವಲಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯದ ಅಡಿಯಲ್ಲಿ ಸರ್ಕಾರು ಶೂನ್ಯ ಸಹಿಷ್ಣುತೆ ಅನುಸರಿಸುತ್ತಿದೆ. ಅಲ್ಲದೆ, ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ನಡೆಸಲು ಮನವಿ ಮಾಡಲಾಗುವುದು ಮತ್ತು ಆರೋಪಿಗಳಿಗೆ ಶೀಘ್ರ ಶಿಕ್ಷೆ ವಿಧಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ