
ಉತ್ತರಕನ್ನಡ (ಆಗಸ್ಟ್.6): ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬಡ ಮಹಿಳೆಯೋರ್ವಳು ಬೆಂಕಿ ಹಚ್ಚಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅನಗೋಡಿನ ಬೆಳ್ತೆರಗದ್ದೆಯಲ್ಲಿ ನಡೆದಿದೆ.
ಲಕ್ಷ್ಮೀ ಮಹಾದೇವ ನಾಗೇಶ ಸಿದ್ಧಿ (48) ಮೃತ ಮಹಿಳೆ. ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಸಾಯಲು ಯತ್ನಿಸಿದ್ದು, ಆದರೆ ದೇಹವೆಲ್ಲ ಸುಟ್ಟು ನರಳಾಟಕ್ಕೆ ಸ್ಥಳೀಯರು ಸಹಕಾರದಿಂದ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು (ಆಗಸ್ಟ್ 6, 2025) ಮೃತಪಟ್ಟಿದ್ದಾರೆ.
ಗಂಡನಿಂದ ಬೇರ್ಪಟ್ಟ ಬಳಿಕ ಲಕ್ಷ್ಮಿ ಸಂಕಷ್ಟ:
ಕೌಟುಂಬಿಕ ಕಾರಣಗಳಿಗಾಗಿ ಲಕ್ಷ್ಮೀ, ಗಂಡನಿಂದ ಬೇರ್ಪಟ್ಟ ಬಳಿಕ ಏಕಾಂಗಿಯಾಗಿ ವಾಸಿಸುತ್ತಿದ್ದರು. ಆದರೆ, ಆರ್ಥಿಕ ಸಂಕಷ್ಟದಿಂದಾಗಿ ಒಂದು ಹೊತ್ತಿನ ಊಟಕ್ಕೂ ಇತರರನ್ನು ಅವಲಂಬಿಸಬೇಕಾದ ದುಸ್ಥಿತಿ ಎದುರಾಗಿತ್ತು. ಈ ಕಾರಣದಿಂದ ಮಾನಸಿಕವಾಗಿ ಕುಗ್ಗಿದ್ದ ಲಕ್ಷ್ಮೀ, ತಮ್ಮ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಸಾಯಲು ಯತ್ನಿಸಿದ್ದರು. ಸ್ಥಳೀಯರು ತಕ್ಷಣ ಗಮನಿಸಿ, ಆಕೆಯನ್ನು ರಕ್ಷಿಸಿ ಹುಬ್ಬಳ್ಳಿಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೆ, ತೀವ್ರ ಸುಟ್ಟಗಾಯಗಳಿಂದಾಗಿ ಚಿಕಿತ್ಸೆ ವಿಫಲವಾಗಿ ಲಕ್ಷ್ಮೀ ಮೃತಪಟ್ಟಿದ್ದಾರೆ.
ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಈ ಘಟನೆ ಆರ್ಥಿಕ ಸಂಕಷ್ಟ ಮತ್ತು ಸಾಮಾಜಿಕ ಬೆಂಬಲದ ಕೊರತೆಯಿಂದ ಒಂಟಿತನದಲ್ಲಿ ಬದುಕುವವರ ದುರ್ದಶೆಯನ್ನು ಬೆಳಕಿಗೆ ತಂದಿದೆ. ಸ್ಥಳೀಯರು ಸರ್ಕಾರದಿಂದ ಸೂಕ್ತ ಆರ್ಥಿಕ ನೆರವು ಮತ್ತು ಸಾಮಾಜಿಕ ಕಾರ್ಯಕ್ರಮಗಳ ಅಗತ್ಯವಿದೆ ಈ ಘಟನೆ ತೋರಿಸಿದೆ. ಒಂಟಿಯಾಗಿ ಬಡತನ ಬದುಕುತ್ತಿರುವ ನೂರಾರು ಜೀವಗಳಿವೆ. ಬಡವರ ಕಲ್ಯಾಣಕ್ಕೆ ಸರ್ಕಾರ ತುರ್ತಾಗಿ, ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯಕ್ರಮಗಳನ್ನ ರೂಪಿಸಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ