
ಬ್ಯಾಡರಹಳ್ಳಿ (ನ.3): ಮನೆ, ಅಂಗಡಿಗಳ ಮುಂದೆ ನಿಂತಿದ್ದ ವಾಹನಗಳ ಗ್ಲಾಸ್ ಒಡೆದು ಐವರು ಪುಂಡರು ಅಟ್ಟಹಾಸ ಮೆರೆದ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂಧ್ರಳ್ಳಿಯಲ್ಲಿ ನಡೆದಿದೆ.
ಕಾರು ಹಾಗೂ ಆಟೋ ಸೇರಿದಂತೆ ಸಿಕ್ಕ ಸಿಕ್ಕ ವಾಹನಗಳ ಗ್ಲಾಸ್ ಒಡೆದುಹಾಕಿದ್ದಾರೆ. ಐವರು ಯುವಕರು ಈ ಕೃತ್ಯಕ್ಕೆ ಕಾರಣವಾಗಿದ್ದು, ಐವರ ಪೈಕಿ ಓರ್ವ ಪುಂಡನನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಾರೆ. ಪೊಲೀಸರ ಭಯವಿಲ್ಲದೆ ಕೃತ್ಯವೆಸಗಿ ಪರಾರಿಯಾಗಿದ್ದಾರೆ. ಸದ್ಯ ಓರ್ವನ ಬಂಧಿಸಿದ್ದು, ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರ ಶೋಧ ನಡೆಸುತ್ತಿದ್ದಾರೆ.
ಯಾವ ಕಾರಣಕ್ಕಾಗಿ ಈ ಕೃತ್ಯ ನಡೆಸಿದ್ದಾರೆ, ಡ್ರಗ್ಸ್ ಅಡಿಕ್ಟ್‌ಗಳೇ? ಸ್ಥಳೀಯರಲ್ಲಿ ಭಯ ಮೂಡಿಸುವ ಉದ್ದೇಶವೇನಾದರೂ ಇತ್ತೆ, ತನಿಖೆಯ ಬಳಿಕ ಸಂಪೂರ್ಣ ಮಾಹಿತಿ ಬಯಲಿಗೆ ಬರಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ