ಲೋಕಸಭಾ ಚುನಾವಣಾ ಹೊತ್ತಲ್ಲೇ ಪಂಜಾಬ್‌ನಲ್ಲಿ ವಿಎಚ್‌ಪಿ ಮುಖಂಡ ಬಗ್ಗಾ ಹತ್ಯೆ!

By Kannadaprabha News  |  First Published Apr 15, 2024, 6:46 AM IST

ಇಲ್ಲಿನ ನಂಗಲ್ ಪಟ್ಟಣದಲ್ಲಿ ಸ್ಥಳೀಯ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮುಖಂಡನನ್ನು ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಅವರ ಅಂಗಡಿಯಲ್ಲಿ ಗುಂಡಿಕ್ಕಿ ಕೊಂದಿದ್ದಾರೆ. ಮೃತ ವಿಕಾಸ್ ಬಗ್ಗಾ ಅವರು ವಿಎಚ್‌ಪಿಯ ನಂಗಲ್ ಘಟಕದ ಅಧ್ಯಕ್ಷರಾಗಿದ್ದರು.


ರೂಪನಗರ: ಇಲ್ಲಿನ ನಂಗಲ್ ಪಟ್ಟಣದಲ್ಲಿ ಸ್ಥಳೀಯ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮುಖಂಡನನ್ನು ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಅವರ ಅಂಗಡಿಯಲ್ಲಿ ಗುಂಡಿಕ್ಕಿ ಕೊಂದಿದ್ದಾರೆ. ಮೃತ ವಿಕಾಸ್ ಬಗ್ಗಾ ಅವರು ವಿಎಚ್‌ಪಿಯ ನಂಗಲ್ ಘಟಕದ ಅಧ್ಯಕ್ಷರಾಗಿದ್ದರು.

ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಇಬ್ಬರು ದುಷ್ಕರ್ಮಿಗಳು ರೂಪನಗರ ರೈಲ್ವೆ ನಿಲ್ದಾಣದ ಬಳಿ ಇರುವ ಬಗ್ಗಾ ಅವರ ಅಂಗಡಿಗೆ ನುಗ್ಗಿ ಅವರ ಮೇಲೆ ಗುಂಡು ಹಾರಿಸಿ ತಕ್ಷಣ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Latest Videos

undefined

ಆರೋಪಿಗಳ ಪತ್ತೆಗೆ ಪೊಲೀಸರು ಸಮೀಪದ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಆನಂದಪುರ ಸಾಹಿಬ್ ಉಪ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಸಿಂಗ್ ಹೇಳಿದ್ದಾರೆ.

ಬಿಂದ್ರನ್‌ವಾಲೆ ಅಂತ್ಯಕ್ಕೆ ಇಂದಿರಾ ಗಾಂಧಿ ರಚಿಸಿದ ವ್ಯೂಹವೇನು? ಸಿಖ್ಖರು, ಹಿಂದೂಗಳ ಮಧ್ಯೆ ವಿಷವರ್ತುಲ ಹುಟ್ಟಿಕೊಂಡಿದ್ದೇಕೆ ?

ಏತನ್ಮಧ್ಯೆ, ಬಗ್ಗಾ ಹತ್ಯೆಯನ್ನು ಪ್ರತಿಭಟಿಸಿ ವಿಎಚ್‌ಪಿ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರು ಭಾನುವಾರ ಉನಾ-ಚಂಡೀಗಢ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಹಂತಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಪಂಜಾಬ್ ಬಿಜೆಪಿ ಮುಖ್ಯಸ್ಥ ಸುನೀಲ್ ಜಾಖಡ್‌ ಕೂಡ ಸಂತ್ರಸ್ತ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

ಈ ನಡುವೆ, ಎಎಪಿ ನೇತೃತ್ವದ ಪಂಜಾಬ್ ಸರ್ಕಾರವನ್ನು ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ವಾಗ್ದಾಳಿ ನಡೆಸಿದ ಅವರು ಬಗ್ಗಾ ಹತ್ಯೆಯನ್ನು ‘ಉದ್ದೇಶಿತ ಹತ್ಯೆ’ ಎಂದರು ಹಾಗೂ ಸರ್ಕಾರ ನಿದ್ರಿಸುತ್ತಿದೆ ಎಂದು ಆರೋಪಿಸಿದರು. ಸಂಚುಕೋರರನ್ನು ಆದಷ್ಟು ಬೇಗ ಬಂಧಿಸಬೇಕು ಎಂದು ಆಗ್ರಹಿಸಿದರು.

ಇಂದಿರಾ ಗಾಂಧಿ ಹಂತಕನ ಪುತ್ರ ಫರೀದ್‌ ಕೋಟ್‌ನಿಂದ ಲೋಕಸಭೆಗೆ ಸ್ಪರ್ಧೆ

ಸ್ಥಳೀಯ ಶಾಸಕರಾಗಿರುವ ಪಂಜಾಬ್ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಅವರು ಕೊಲೆಯನ್ನು ದುರದೃಷ್ಟಕರ ಘಟನೆ ಎಂದು ಕರೆದಿದ್ದಾರೆ ಮತ್ತು ಇದರ ಹಿಂದೆ ಯಾರೇ ಇದ್ದರೂ ಅವರನ್ನು ಬಿಡಲಾಗುವುದಿಲ್ಲ ಎಂದು ಹೇಳಿದ್ದಾರೆ.

click me!